Homeಮುಖಪುಟಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಮಹಾರಾಷ್ಟ್ರ: ಸಾರಿಗೆ ಕಂಡಕ್ಟರ್‌ಗಳ‌ ಸಮವಸ್ತ್ರದಲ್ಲಿ ಶೀಘ್ರ ಕ್ಯಾಮೆರಾ ಅಳವಡಿಕೆ ಏಕೆ?

ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಟಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿಲಾಗಿತ್ತು.

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ, ಕರ್ತವ್ಯದಲ್ಲಿ ನಿರತರಾಗಿದ್ದ ಮಹಿಳಾ ಕಂಡಕ್ಟರ್‌ಗಳ ಜೊತೆಗೆ ಕೆಲವು ಪ್ರಯಾಣಿಕರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮವಸ್ತ್ರದಲ್ಲಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದೆ.

ಕರ್ತವ್ಯದ ಸಮಯದಲ್ಲಿ ಸಾರಿಗೆ ವಾಹನಗಳಲ್ಲಿನ ಚಟುವಟಿಕೆಗಳನ್ನು ದಾಖಲಿಸಲು ಔರಂಗಾಬಾದ್‌ ಸ್ಮಾರ್ಟ್ ಸಿಟಿ ಡೆವಲಪ್‌ಮೆಂಟ್ ಕಾರ್ಪೊರೇಷನ್ (ASCDCL) ಕಂಡಕ್ಟರ್‌ಗಳು ಮತ್ತು ಇನ್ಸ್‌ಪೆಕ್ಟರ್‌ಗಳ ಶರ್ಟ್‌ಗಳ ಮುಂಭಾಗದ ಜೇಬು‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ಕ್ಯಾಮೆರಾಗಳು ಟಿಕೆಟ್‌ಗಳ ನೈಜ-ಸಮಯದ ಪರೀಕ್ಷೆಗೆ ಸಹಾಯ ಮಾಡುತ್ತದೆ ಮತ್ತು ಬಸ್‌ಗಳಲ್ಲಿನ ಇತರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಎಎಸ್ಸಿಡಿಸಿಎಲ್ ಆಡಳಿತವು ಮಾಜಿ ಯೋಧರನ್ನು ಲೈನ್ ಇನ್‌ಸ್ಪೆಕ್ಟರ್‌ಗಳಾಗಿ ನಿಯೋಜಿಸಿದೆ, ಅವರು ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮತ್ತು ಅವರ ನಡವಳಿಕೆಯನ್ನು ಪರಿಶೀಲಿಸುತ್ತಾರೆ. ಜೊತೆಗೆ ಪ್ರಯಾಣಿಕರ ಸುರಕ್ಷತೆ ಬಗ್ಗೆಯೂ ಕಾಳಜಿ ವಹಿಸಲಿದ್ದಾರೆ ಎಂದು ಅಧಿಕಾರಿ ಹೇಳಿದರು.

ASCDCL 100 ಬಸ್‌ಗಳನ್ನು ಹೊಂದಿದ್ದು, ಅದರಲ್ಲಿ 29 ಬಸ್‌ಗಳನ್ನು ಮಾತ್ರ ನಗರದಲ್ಲಿ ಕಾರ್ಯಾಚರಣೆಗೆ ಬಿಡಲಾಗಿದ್ದು, ನಗರದ 12 ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಪ್ರತಿದಿನ ಸುಮಾರು 5,000 ಪ್ರಯಾಣಿಕರು ಸಾರಿಗೆ ಬಳಸುತ್ತಿದ್ದಾರೆ ಎಂದು ಎಎಸ್‌ಸಿಡಿಸಿಎಲ್ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರನ್ನು ಈ ಬಸ್‌ಗಳ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು. ಲಾಕ್‌ಡೌನ್ ಅವಧಿಯಲ್ಲಿ, ಈ ನಾಗರಿಕ-ಚಾಲಿತ ಬಸ್‌ಗಳನ್ನು ಕೊರೊನಾ ರೋಗಿಗಳನ್ನು ಕರೆದೊಯ್ಯಲು ಬಳಸಲಾಗುತ್ತಿತ್ತು.

ಕಳೆದ ತಿಂಗಳಿನಿಂದ ASCDCL ಸಾಮಾನ್ಯ ಪ್ರಯಾಣಿಕರಿಗಾಗಿ ತನ್ನ ಬಸ್ ಸೇವೆಗಳನ್ನು ಪುನರಾರಂಭಿಸಿದೆ. ಸ್ಮಾರ್ಟ್ ಸಿಟಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಎಎಸ್ಸಿಡಿಸಿಎಲ್ ಅನ್ನು ರಚಿಸಿದೆ. ಔರಂಗಾಬಾದ್ ಮುನ್ಸಿಪಲ್ ಕಮಿಷನರ್ ಆಸ್ತಿಕ್ ಕುಮಾರ್ ಪಾಂಡೆ ಎಎಸ್ಸಿಡಿಸಿಎಲ್ ಮುಖ್ಯಸ್ಥರಾಗಿದ್ದಾರೆ.


ಇದನ್ನೂ ಓದಿ: ಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...