Homeಮುಖಪುಟಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

ಬೊಮ್ಮಾಯಿಯವರನ್ನು ಪ್ರಶ್ನಿಸಲು ಮಹಾರಾಷ್ಟ್ರ ಸಿಎಂಗೆ ಧೈರ್ಯವಿಲ್ಲ: ಉದ್ಧವ್ ಠಾಕ್ರೆ

- Advertisement -
- Advertisement -

ಉಭಯ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೀಡಿರುವ ಹೇಳಿಕೆಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಕಟುವಾಗಿ ಟೀಕಿಸಿದ್ದಾರೆ.

“ಕರ್ನಾಟಕ ಮುಖ್ಯಮಂತ್ರಿಗಳು ಗಡಿ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಏಕಾಏಕಿ ಹಕ್ಕು ಚಲಾಯಿಸಿದ್ದಾರೆ” ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಡಿ ವಿವಾದಕ್ಕೆ ಸಂಬಂಧಿಸಿ ರಾಜಕೀಯ ತಿಕ್ಕಾಟ ಹೆಚ್ಚುತ್ತಿರುವಂತೆಯೇ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಶಿವಸೇನಾ (ಉದ್ಧವ್‌ ಬಾಳಾ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್‌ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

“ರಾಜ್ಯದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮುಖ್ಯಮಂತ್ರಿ ಏಕನಾಥ ಶಿಂದೆಗೆ ಧೈರ್ಯ ಇಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ಮಹಾರಾಷ್ಟ್ರದ ಕೆಲ ಗ್ರಾಮಗಳು ರಾಜ್ಯಕ್ಕೆ ಸೇರಬೇಕು ಎಂಬುದಾಗಿ ಕರ್ನಾಟಕ ಮುಖ್ಯಮಂತ್ರಿ ಸುಲಭವಾಗಿ ಹೇಳಿಕೆ ನೀಡುತ್ತಿರುವುದರರಿಂದಲೇ ನಾವು ಅವರ ವಿರುದ್ಧ ಧ್ವನಿ ಎತ್ತಲು ಧೈರ್ಯ ಕಳೆದುಕೊಂಡಿದ್ದೇವೆಯೇ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.

“ಈ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿಗೆ ದೆಹಲಿ ನಾಯಕರ ಆಶೀರ್ವಾದ ಇದೆಯೇ? ಕೇಂದ್ರ ಸರ್ಕಾರಕ್ಕೂ ಇದೇ ಬೇಕಾಗಿದೆಯೇ?” ಎಂದು ಕೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್‌ ರಾವುತ್‌, “ಛತ್ರಪತಿ ಶಿವಾಜಿ ಮಹಾರಾಜ್‌ಗೆ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಅವರು ಅವಮಾನಿಸಿದ ವಿಷಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದವನ್ನು ಮತ್ತೆ ಮುನ್ನೆಲೆ ತರಲಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಂದು ವೇಳೆ ಗುಜರಾತಿಗಳು ಹಾಗೂ ಮಾರವಾಡಿಗಳು ನಗರವನ್ನು ತೊರೆದರೆ ಮುಂಬೈ ಈ ದೇಶದ ಆರ್ಥಿಕ ರಾಜಧಾನಿ ಆಗಿ ಉಳಿಯುವುದಿಲ್ಲ ಎಂದು ಹೇಳುವ ಮೂಲಕ ಈ ಹಿಂದೆಯೂ ರಾಜ್ಯಪಾಲ ಕೋಶ್ಯಾರಿ ಅವರು ಮರಾಠಿ ಭಾಷಿಕರನ್ನು ಅವಮಾನಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ನೀಡಿರುವ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಗುರುವಾರ ಪ್ರತಿಕ್ರಿಯಿಸಿದ್ದಾರೆ. “ನಮಗೆ ಕಲಿಸಬೇಡಿ” ಎಂದು ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಮೂಡಿಗೆರೆ: ಒಂದು ಪಟಾಕಿ ಕೊಡೋ ಯೋಗ್ಯತೆ ಇಲ್ಲ, ಆನೆ ಓಡಿಸ್ತೀರೇನ್ರೀ ನೀವು?; ಕಳ್ಳಬೇಟೆ ನಿಗ್ರಹ ಶಿಬಿರಕ್ಕೆ ನುಗ್ಗಿದ ಗ್ರಾಮಸ್ಥರು

“ಬಾಳಾಸಾಹೇಬರ ಹಿಂದುತ್ವದ ತತ್ವವನ್ನು ಮುರಿದವರಿಗೆ ನಮ್ಮನ್ನು ಟೀಕಿಸುವ ಹಕ್ಕು ಇಲ್ಲ, ಛತ್ರಪತಿ ಶಿವಾಜಿ ಮಹಾರಾಜರ ಹೆಸರನ್ನು ತೆಗೆದುಕೊಳ್ಳುವ ಹಕ್ಕು ಇಲ್ಲ. ಅವರನ್ನು ಯಾರೊಂದಿಗೂ ಹೋಲಿಸಲಾಗುವುದಿಲ್ಲ. ಉದ್ಧವ್ ಠಾಕ್ರೆ ನಮಗೆ ಪಾಠ ಮಾಡಬಾರದು” ಎಂದು ಶಿಂಧೆ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

“ಗವರ್ನರ್ ರೂಪದಲ್ಲಿ ಅವರು ಕಳುಹಿಸಿರುವ ಅಮೆಜಾನ್ ಪಾರ್ಸೆಲ್ ಅನ್ನು ಹಿಂಪಡೆಯಲು ನಾನು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ” ಎಂದು ಠಾಕ್ರೆ ಹೇಳಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳುಹಿಸಲಾದ ಸ್ಯಾಂಪಲ್‌ಗಳನ್ನು ಹಿಂಪಡೆಯಲು ಮತ್ತು ವೃದ್ಧಾಶ್ರಮಕ್ಕೆ ಕಳುಹಿಸಲು ನಾವು ಕೇಂದ್ರವನ್ನು ವಿನಂತಿಸುತ್ತೇವೆ. ಅವರ ಹೇಳಿಕೆಯ ವಿರುದ್ಧ ಪ್ರತಿಭಟಿಸಲು ನಾವು ಎಲ್ಲಾ ಮಹಾರಾಷ್ಟ್ರ ಪ್ರೇಮಿಗಳನ್ನು ಕೋರುತ್ತೇವೆ. ಒಗ್ಗೂಡಿ ಮತ್ತು ಪಕ್ಷ ರಾಜಕೀಯದಿಂದ ಮೇಲಕ್ಕೆ ಬನ್ನಿ. ಮಹಾರಾಷ್ಟ್ರದ ವಿರುದ್ಧದ ಈ ದೇಶದ್ರೋಹದ ವಿರುದ್ಧ ಒಗ್ಗಟ್ಟಿನಿಂದ ಮುಂದೆ ಬನ್ನಿ” ಎಂದು ಮನವಿ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...