Homeಕರೋನಾ ತಲ್ಲಣಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾರಾಷ್ಟ್ರ: ಆಕ್ಸಿಜನ್‌ ಮಾಸ್ಕ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದು ಸಾವನ್ನಪ್ಪಿದ ಕೊರೊನಾ ಸೋಂಕಿತ

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು "ಪ್ರಚೋದಿಸಿದರು" ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕಿತ ರೋಗಿಯೊಬ್ಬರು ಹಲವಾರು ಆಸ್ಪತ್ರೆಗಳನ್ನುಅಲೆದು ಎಲ್ಲಿಯೂ ಬೆಡ್ ಸಿಕ್ಕಿಲ್ಲ ಎಂದು ಆರೋಪಿಸಿ, ಮಹಾರಾಷ್ಟ್ರದ ನಾಸಿಕ್‌ನ ಮಹಾನಗರ ಪಾಲಿಕೆಯ ಹೊರಗೆ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆಗೆ ಕುಳಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ರೋಗಿಯು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

38 ವರ್ಷದ ಬಾಬಾಸಾಹೇಬ್ ಕೋಲ್ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಆದರೆ ಚಿಕಿತ್ಸೆಗೆ ಯಾವ ಆಸ್ಪತ್ರೆಯೂ ಸ್ಪಂದಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ಹೊರಗೆ ನಿನ್ನೆ ಸಂಜೆ ಸಿಲಿಂಡರ್‌ಗೆ ಸಂಪರ್ಕ ಹೊಂದಿದ ಆಕ್ಸಿಜನ್ ಮಾಸ್ಕ್‌ನೊಂದಿಗೆ ಪ್ರತಿಭಟನೆ ನಡೆಸಿದ್ದರು.

ಸರಿ ಸುಮಾರು ಒಂದು ಗಂಟೆ ಪ್ರತಿಭಟನೆ ನಡೆಸಿದ ನಂತರ, ಮಹಾನಗರ ಪಾಲಿಕೆಯ ಆಂಬ್ಯುಲೆನ್ಸ್ ಅವರನ್ನು ಪುರಸಭೆಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ಮಧ್ಯರಾತ್ರಿ  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮೃತ ವ್ಯಕ್ತಿಯ ಕುಟುಂಬದ ಪ್ರಕಾರ, ಮಧ್ಯರಾತ್ರಿಯಲ್ಲಿ ಅವರ ಆಕ್ಸಿಜನ್ ಲೆವೆಲ್ ಮಟ್ಟವು ಶೇಕಡಾ 40 ಕ್ಕೆ ತಲುಪಿತ್ತು. ಸಾಮಾನ್ಯವಾಗಿ ಆಕ್ಸಿಜನ್ ಲೆವೆಲ್ ಶೇಕಡಾ 95 ಅಥವಾ ಅದಕ್ಕಿಂತ ಹೆಚ್ಚಿನದಾಗಿರುತ್ತದೆ. ಆದರೆ, ರಾತ್ರಿ 1 ಗಂಟೆ ಸುಮಾರಿಗೆ ಬಾಬಾಸಾಹೇಬ್ ನಿಧನರಾದರು ಎಂದು ತಿಳಿಸಿದ್ದಾರೆ.

“ಎರಡು-ಮೂರು ದಿನಗಳ ಹಿಂದೆ ಅವರನ್ನು ಬೈಟ್ಕೊ (ಆಸ್ಪತ್ರೆ) ಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರು ಮತ್ತೊಂದು ಆಸ್ಪತ್ರೆಗೆ, ಅಲ್ಲಿಂದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋದೆವು. ವೈದ್ಯಕೀಯ ಕಾಲೇಜಿನಲ್ಲಿ ಬೆಡ್ ಇಲ್ಲ ಎಂದು ಹೇಳಿದರು. ನಾವು ಬಹಳಷ್ಟು ಆಸ್ಪತ್ರೆಗಳಿಗೆ ಹೋಗಿದೆವು. ಯಾರೂ ಅವರನ್ನು ದಾಖಲಿಸಿಕೊಳ್ಳಲಿಲ್ಲ. ನಂತರ ನಾವು ಸಿವಿಲ್ ಆಸ್ಪತ್ರೆಗೆ ಹಿಂತಿರುಗಿ ಅವರಿಗೆ ಆಕ್ಸಿಜನ್ ಮಾಸ್ಕ್‌ ತೆಗೆದುಕೊಂಡೆವು. ಯಾವ ಆಸ್ಪತ್ರೆಯವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಮೃತರ ಪತ್ನಿ ಸ್ಥಳೀಯ ಪತ್ರಕರ್ತರಿಗೆ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಕಟ್ಟಡದ ಬಳಿ ಪ್ರತಿಭಟನೆ ಮಾಡಲು ರೋಗಿಯನ್ನು ಯಾರು “ಪ್ರಚೋದಿಸಿದರು” ಎಂದು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರವು ಅತಿಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿದ್ದು, ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ರಾಜ್ಯದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳ ವ್ಯವಸ್ಥೆ ಕಡಿಮೆಯಾಗುವ ಸಂಭವವಿದೆ ಎಂದು ಸರ್ಕಾರ ತಿಳಿಸಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...