Homeಮುಖಪುಟಮಹಾರಾಷ್ಟ್ರ: ಒಂದೇ ಹಾಸ್ಟೇಲ್‌ನ 225 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಹಾರಾಷ್ಟ್ರ: ಒಂದೇ ಹಾಸ್ಟೇಲ್‌ನ 225 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪುನಃ ಕೊರೊನಾ ಉಲ್ಬಣಗೊಳ್ಳುತ್ತಿದ್ದು, ವಾಶಿಮ್ ಜಿಲ್ಲೆಯ ಶಾಲೆಯ ಒಂದೇ ಹಾಸ್ಟೆಲ್‌ನಲ್ಲಿ 225 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

225 ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರಲ್ಲಿ ಕೊವಿಡ್ ಪಾಸಿಟಿವ್ ಪತ್ತೆಯಾಗಿದ್ದು, ಶಾಲಾ ಆವರಣವನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಅಮರಾವತಿ ಮತ್ತು ಯವತ್ಮಾಳ ಮೂಲದವರಾಗಿದ್ದು, ಇತ್ತೀಚಿನ ವಾರಗಳಲ್ಲಿ ಈ ಎರಡು ಜಿಲ್ಲೆಗಳಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.

ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನದಲ್ಲಿ 8,800 ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿದ್ದು, ಇದು ನಾಲ್ಕು ತಿಂಗಳಲ್ಲಿ ಅತಿದೊಡ್ಡ ಏರಿಕೆಯಾಗಿದೆ. ಜನರು ಕೊರೊನಾ ಪ್ರೋಟೋಕಾಲ್ ಮತ್ತು ನಿಬಂಧನೆಗಳನ್ನು ಅನುಸರಿಸದಿದ್ದರೆ ಕಠಿಣ ಕ್ರಮಗಳನ್ನು ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಮತ್ತು ಮುಂಬೈ ಪೊಲೀಸರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ: ಅಮರಾವತಿ ಸಂಪೂರ್ಣ ಲಾಕ್‌ಡೌನ್

ಕೊರೊನಾ ನಿಬಂಧನೆಗಳನ್ನು ಉಲ್ಲಂಘಿಸಿ ಮಂಗಳವಾರ ವಾಶಿಮ್‌ನ ದೇವಾಲಯದ ಬಳಿ ದೊಡ್ಡ ಸಭೆ ನಡೆದಿತ್ತು. ಮಹಿಳೆಯೊಬ್ಬರ ಸಾವಿನ ಪ್ರಕರಣದಲ್ಲಿ ಕೈವಾಡ ಇದೆ ಎಂದು ವಿಪಕ್ಷಗಳಿಂದ ಆರೋಪ ಎದುರಿಸುತ್ತಿರುವ ಶಿವಸೇನೆ ಸಚಿವ ಸಂಜಯ್ ರಾಥೋಡ್ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ದೇವಾಲಯದ ಬಳಿ ಜಮಾಯಿಸಿದ್ದರು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿಯಮಗಳನ್ನು ಧಿಕ್ಕರಿಸಿದವರ ವಿರುದ್ಧ ಕ್ರಮಕೈಗೊಳ್ಳಲು ಆದೇಶಿಸಿ, ಅಧಿಕಾರಿಗಳು ಮತ್ತು ಪೊಲೀಸರಿಂದ ವರದಿ ಕೋರಿದ್ದಾರೆ. ಶಿವಸೇನೆ ಅಧ್ಯಕ್ಷರೂ ಆಗಿರುವ ಉದ್ಧವ್ ಠಾಕ್ರೆ, ನಿಯಮಗಳು ಎಲ್ಲರಿಗೂ ಒಂದೇ ಎಂದು ಒತ್ತಿ ಹೇಳಿದ್ದಾರೆ. ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕೂಟಗಳನ್ನು ನಿಷೇಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ನಿನ್ನೆ 80 ಕೊರೊನಾ ಸಾವುಗಳು ಸಂಭವಿಸಿವೆ. ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 21,21,119 ಕ್ಕೆ ಏರಿದ್ದು, 51,937 ಮಂದಿ ಸಾವನ್ನಪ್ಪಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಸಾರ್ವಜನಿಕ ನಡವಳಿಕೆಯ ಆಧಾರದ ಮೇಲೆ ಮತ್ತೊಂದು ಲಾಕ್‌ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ಕೇಂದ್ರ ನಿರ್ಲಕ್ಷ್ಯ ಮತ್ತು ಅತಿ ಆತ್ಮವಿಶ್ವಾಸ ಹೊಂದಿದೆ-ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...