Homeಕರೋನಾ ತಲ್ಲಣಕೊರೊನಾ ಆತಂಕ: ಜನವರಿ 5ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿದ ಮಹಾರಾಷ್ಟ್ರ

ಕೊರೊನಾ ಆತಂಕ: ಜನವರಿ 5ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿದ ಮಹಾರಾಷ್ಟ್ರ

ಯುಕೆಯಿಂದ ದೇಶಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಕೊರೊನಾ ಪಾಸಿಟಿವ್ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ, ಉಳಿದವರನ್ನು ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ.

- Advertisement -
- Advertisement -

ಬ್ರಿಟನ್‌ನಲ್ಲಿ ಆತಂಕಕ್ಕೆ ಕಾರಣವಾಗಿರುವ ಹೊಸ ಸ್ವರೂಪದ ಕೊರೊನಾ ವೈರಸ್‌ ಅನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರವು ಮುಂಬೈ ಮತ್ತು ಎಲ್ಲಾ ಪ್ರಮುಖ ನಗರಗಳಲ್ಲಿ ಜನವರಿ 5ರ ವರೆಗೆ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿದೆ.

ಐರೋಪ್ಯ ದೇಶಗಳಿಂದ ಬರುವ ಪ್ರಯಾಣಿಕರನ್ನು 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲಾಗುವುದು ಎಂದು ಮಹಾರಾಷ್ಟ್ರ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ. ಈಗಾಗಲೇ ಭಾರತ ಸೇರಿದಂತೆ ಅನೇಕ ದೇಶಗಳು ಯುಕೆಗೆ ವಿಮಾನಯಾನವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಈ ಮೊದಲು ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸುವ ತಜ್ಞರ ಸಲಹೆಯನ್ನು ನಿರಾಕರಿಸಿ, ಮಾಸ್ಕ್ ಬಳಕೆಯನ್ನು ಮುಂದಿನ ಆರು ತಿಂಗಳವರೆಗೆ ಕಡ್ಡಾಯಗೊಳಿಸಲಾಗಿತ್ತು. ಸದ್ಯ ತಜ್ಞರ ಸಲಹೆಯನ್ನು ಅನುಸರಿಸಲು ಒಪ್ಪಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.

ಯುಕೆಯಿಂದ ದೇಶಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಕೊರೊನಾ ಪಾಸಿಟಿವ್ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ, ಉಳಿದವರನ್ನು ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ.

ಇಂದು (ಡಿ.21) ಬೆಳಗ್ಗೆ ಈ ವೈರಸ್ ಕುರಿತು ಚರ್ಚೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ತುರ್ತು ಸಭೆ ನಡೆಸಿತ್ತು. ನಂತರ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್, ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’;...

0
ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್...