Homeಮುಖಪುಟಬಿಹಾರ ಮಾದರಿಯಲ್ಲಿ ಜಾತಿ ಗಣತಿಗೆ ಕರೆ ನೀಡಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

ಬಿಹಾರ ಮಾದರಿಯಲ್ಲಿ ಜಾತಿ ಗಣತಿಗೆ ಕರೆ ನೀಡಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

- Advertisement -
- Advertisement -

ಎಲ್ಲಾ ಸಮುದಾಯಗಳ ನಿಖರವಾದ ಜನಸಂಖ್ಯೆಯನ್ನು ಕಂಡುಹಿಡಿಯಲು ಜಾತಿ ಗಣತಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಕರೆ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸೊಲ್ಲಾಪುರ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ”ಬಿಹಾರ ಸರ್ಕಾರ ಆ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಿತು. ಅದರಂತೆ ನಮ್ಮ ರಾಜ್ಯದಲ್ಲೂ ಜಾತಿ ಗಣತಿ ನಡೆಯಲಿ ಎನ್ನುವುದು ನನ್ನ ಅಭಿಪ್ರಾಯವಿದೆ” ಎಂದು ಪವಾರ್ ಹೇಳಿದ್ದಾರೆ.

”ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಪ್ರಯೋಜನಗಳನ್ನು ನೀಡುವುದರಿಂದ OBC, SC, STಗಳು, ಅಲ್ಪಸಂಖ್ಯಾತರು, ಸಾಮಾನ್ಯ ವರ್ಗ ಇತ್ಯಾದಿಗಳ ನಿಖರವಾದ ಜನಸಂಖ್ಯೆಯನ್ನು ನಾವು ತಿಳಿದುಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ ಜಾತಿ ಗಣತಿ ನಡೆಸಬೇಕು” ಎಂದು ಅಜಿತ್ ಪವಾರ್ ಹೇಳಿದರು.

”ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಬಿಹಾರದಲ್ಲಿ ನಡೆದ ಜಾತಿ ಸಮೀಕ್ಷೆಯ ಬಗ್ಗೆ ವಿವರಗಳನ್ನು ಕೇಳಿದ್ದೇವೆ” ಎಂದು ಪವಾರ್ ಹೇಳಿದರು.

”ಸರ್ಕಾರವು ಜಾತಿ ಸಮೀಕ್ಷೆಯನ್ನು ಎಂದಿಗೂ ವಿರೋಧಿಸಿಲ್ಲ ಎನ್ನುವುದಾಗಿ ಫಡ್ನವೀಸ್ ಹೇಳಿದರು. ಬಿಹಾರದಲ್ಲಿ ಬಂದಂತಹ ತೊಂದರೆಗಳು ಇಲ್ಲಿ ಉದ್ಭವಿಸದಂತೆ ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದರು.

ಜನವರಿಯಲ್ಲಿ ಪ್ರಾರಂಭವಾದ ಬಿಹಾರ ಸಮೀಕ್ಷೆಯ ಫಲಿತಾಂಶಗಳನ್ನು ಈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಲಾಗಿದೆ. ಇತರ ಹಿಂದುಳಿದ ವರ್ಗಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು ರಾಜ್ಯದ ಜನಸಂಖ್ಯೆಯ 63% ಕ್ಕಿಂತ ಹೆಚ್ಚು ಇದ್ದಾರೆ ಎಂದು ಅದು ಬಹಿರಂಗಪಡಿಸಿತು. ಬಿಹಾರದ ಒಟ್ಟು ಜನಸಂಖ್ಯೆಯ 13.07 ಕೋಟಿಗಿಂತ ಸ್ವಲ್ಪ ಹೆಚ್ಚು ಜನಸಂಖ್ಯೆಯಲ್ಲಿ, ಅತ್ಯಂತ ಹಿಂದುಳಿದ ವರ್ಗಗಳು 36% ಅನ್ನು ಒಳಗೊಂಡಿವೆ, ಇದು ಅತಿದೊಡ್ಡ ಸಾಮಾಜಿಕ ವಿಭಾಗವಾಗಿದೆ, ನಂತರ ಇತರ ಹಿಂದುಳಿದ ವರ್ಗಗಳು 27.13% ಜನಸಂಖ್ಯೆ ಇದೆ ಎಂದು ವರದಿ ಹೇಳಿದೆ.

ರಾಜ್ಯದಲ್ಲಿ 36%ದಷ್ಟು ಅತಿಹೆಚ್ಚು ಹಿಂದುಳಿದಿರುವ ಮತ್ತು 27% ಹಿಂದುಳಿದ ವರ್ಗದ ಜನರಿದ್ದಾರೆ. 19.7% ಪರಿಶಿಷ್ಟ ಜಾತಿಯ ಜನ ಮತ್ತು 1.7%  ಪರಿಶಿಷ್ಟ ಪಂಗಡಗಳ ಜನರಿದ್ದಾರೆ. ಸಾಮಾನ್ಯ ವರ್ಗದ ಜನಸಂಖ್ಯೆಯು 15.5% ದಷ್ಟಿದೆ. ರಾಜ್ಯದ ಒಟ್ಟು ಜನಸಂಖ್ಯೆ 13.1 ಕೋಟಿಗೂ ಹೆಚ್ಚು ಎಂದು ಜಾತಿಗಣತಿಯಲ್ಲಿ ಬಹಿರಂಗವಾಗಿದೆ.

ಒಬಿಸಿ ವರ್ಗಗಳಲ್ಲಿ 14.27 ಶೇಕಡಾ ಜನಸಂಖ್ಯೆಯನ್ನು ಹೊಂದಿದೆ. ಭೂಮಿಹಾರ್ ಜನಸಂಖ್ಯೆ ಶೇಕಡಾ 2.86 ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66 ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87 ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3 ರಷ್ಟಿದ್ದಾರೆ.

ಮರಾಠ ಕೋಟಾ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕ: ಪವಾರ್

”ಮರಾಠರಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಬಗ್ಗೆ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿದೆ” ಎಂದು ಪವಾರ್ ಸೋಮವಾರ ಹೇಳಿದ್ದಾರೆ.

”ಸಧ್ಯಕ್ಕೆ ನಮ್ಮ ರಾಜ್ಯದಲ್ಲಿ 62% ಕ್ಕಿಂತ ಹೆಚ್ಚಿನ ಮೀಸಲಾತಿ ಕೋಟಾವನ್ನು ನೀಡುವ ವಿಚಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದೆ. ಅದು ಕಾನೂನುಬದ್ಧವಾಗಿ ಮಾಡಬೇಕಿದೆ” ಎಂದು ಪವಾರ್ ಹೇಳಿದರು.

”ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ-ಪಾಟೀಲ್ ಅವರು ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರವನ್ನು ಕೋರಿದ್ದರೆ, ಒಬಿಸಿಗಳು ಯಾವುದೇ ಸಮುದಾಯವನ್ನು ವರ್ಗಕ್ಕೆ ಸೇರಿಸಬಾರದು ಎಂದು ಒತ್ತಾಯಿಸಿ ಜ್ಞಾಪಕ ಪತ್ರಗಳನ್ನು ಸಲ್ಲಿಸಿದ್ದಾರೆ” ಎಂದು ಅವರು ಹೇಳಿದರು.

ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಮೀಸಲಾತಿ ನೀಡಲು ವಿಫಲವಾದರೆ ಅಕ್ಟೋಬರ್ 25 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭಾನುವಾರ ಜಾರಂಗೆ-ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ: ಪತ್ರಕರ್ತರಿಗೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆ ದೇಶದ ವಾಸ್ತವಕ್ಕೆ ಹಿಡಿದ ಕನ್ನಡಿ- ನಟ ಕಿಶೋರ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...