ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಕೊನೆಗೂ ಒಪ್ಪಂದಕ್ಕೆ ಬಂದಿದೆ. ಒಪ್ಪಂದದ ಪ್ರಕಾರ, ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ-ಎಸ್‌ಪಿ) ತಲಾ 85 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ. ಮಹಾರಾಷ್ಟ್ರ ಚುನಾವಣೆ
ಸೀಟು ಹಂಚಿಕೆ ಸೂತ್ರದ ಕುರಿತು ಮಾತನಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, “ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ಶಿವಸೇನೆ (ಯುಬಿಟಿ) ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಉಳಿದ 18 ಸ್ಥಾನಗಳ ಬಗ್ಗೆ ನಾವು ಸಮಾಜವಾದಿ ಪಕ್ಷ ಸೇರಿದಂತೆ ನಮ್ಮ ಮೈತ್ರಿ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತೇವೆ ಮತ್ತು ನಾಳೆ ಅವುಗಳನ್ನು ಹಂಚಿಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನಾವು ಮಹಾ ವಿಕಾಸ್ ಅಘಾಡಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ನಾವೆ ಸರ್ಕಾರ ರಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಮುಂಬರುವ ಚುನಾವಣೆಗೆ ಸೀಟು ಹಂಚಿಕೆ ಸೂತ್ರವನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಒಪ್ಪಿಕೊಂಡಿದೆ ಎಂದು ಶಿವಸೇನಾ ಯುಬಿಟಿ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. “ನಾವೆಲ್ಲರೂ ಇಲ್ಲಿ ಒಟ್ಟಿಗೆ ಇದ್ದೇವೆ” ಎಂದು ಹೇಳಿದ ರಾವತ್, ಶರದ್ ಪವಾರ್ ನೇತೃತ್ವದಲ್ಲಿ ಕೊನೆಯ ಸಭೆ ನಡೆಯಿತು ಎಂದು ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಹೋಗಿ ಎಂವಿಎ ಸೀಟು ಹಂಚಿಕೆ ಸೂತ್ರವನ್ನು ಘೋಷಿಸುವಂತೆ ಶರದ್ ಪವಾರ್ ನಮಗೆ ಸೂಚಿಸಿದರು ಎಂದು ರಾವತ್ ಹೇಳಿದ್ದಾರೆ. ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ 85 ಸ್ಥಾನಗಳನ್ನು ಹಂಚಿಕೊಳ್ಳಲು ಒಪ್ಪಿಕೊಂಡಿದ್ದು, ಒಟ್ಟು 270 ಸ್ಥಾನಗಳನ್ನು ಹಂಚಿಕೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.
“ಉಳಿದ ಸ್ಥಾನಗಳ ಚರ್ಚೆಯು ಮುಂದೆ ನಡೆಯುತ್ತದೆ” ಎಂದು ಹೇಳಿದ ಅವರು, ನಮ್ಮ ಮೈತ್ರಿಯು ಎಲ್ಲಾ 288 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳು ತಮ್ಮ ಲೋಕಸಭಾ ಚುನಾವಣೆಯ ಪ್ರದರ್ಶನವನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿವೆ. ಲೋಕಸಭೆಯಲ್ಲಿ ಆಡಳಿತರೂಢ ಮಹಾಯುತಿ 17 ಕ್ಷೇತ್ರಗಳನ್ನು ಗೆದ್ದರೆ, 30 ಸ್ಥಾನವನ್ನು ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಗೆದ್ದುಕೊಂಡಿತ್ತು. ಕಾಂಗ್ರೆಸ್ ಸ್ಪರ್ಧಿಸಿದ 17 ಸ್ಥಾನಗಳಲ್ಲಿ 13 ಮತ್ತು ಶಿವಸೇನೆ-UBT ಅದು ಸ್ಪರ್ಧಿಸಿದ 21 ಸ್ಥಾನಗಳಲ್ಲಿ 9 ರಲ್ಲಿ ಗೆದ್ದಿತ್ತು.
ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!


