ಮಹಾರಾಷ್ಟ್ರದ ನಾಂದೇಡ್ ಉತ್ತರ ಕ್ಷೇತ್ರದಲ್ಲಿ 33 ಅಭ್ಯರ್ಥಿಗಳು ಕಣದಲ್ಲಿದ್ದು, ಇದು ಅತೀ ಹೆಚ್ಚು ಅಭ್ಯರ್ಥಿಗಳು ಇರುವ ಕ್ಷೇತ್ರ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ಹೇಳಿವೆ. ಅದಾಗ್ಯೂ, ರಾಜ್ಯದ ನಂದೂರ್ಬಾರ್ ಜಿಲ್ಲೆಯ ಶಾಹದಾ ಅತ್ಯಂತ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದ್ದು, ಕ್ಷೇತ್ರದಲ್ಲು ಕೇವಲ ಮೂವರು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದಾರೆ. ಮಹಾರಾಷ್ಟ್ರ ಚುನಾವಣೆ
ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ, ರಾಜ್ಯದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ 4,140 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಆಯೋಗ ಹೇಳಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 30 ರಂದು ನವೀಕರಿಸಿದ ಮತದಾರರ ಪಟ್ಟಿಯ ಪ್ರಕಾರ, ರಾಜ್ಯದಲ್ಲಿ 5,00,22,739 ಪುರುಷರು ಮತ್ತು 4,49,96,279 ಮಹಿಳೆಯರು ಸೇರಿದಂತೆ ಒಟ್ಟು 9,70,25,119 ಮತದಾರರಿದ್ದಾರೆ. ಮಹಾರಾಷ್ಟ್ರ ಚುನಾವಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಹಾರಾಷ್ಟ್ರದಲ್ಲಿ 9.7 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿದೆ, ಅವರಲ್ಲಿ 22,22,704 ಮಂದಿ 18-19 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಚುನಾವಣಾ ಆಯೋಗದ (EC) ಅಧಿಕಾರಿಯೊಬ್ಬರು ಮಂಗಳವಾರ ನವೀಕರಿಸಿದ ಮತದಾರರ ಪಟ್ಟಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.
ರಾಜ್ಯದಲ್ಲಿ 6,101 ಟ್ರಾನ್ಸ್‌ಜೆಂಡರ್ ಮತದಾರರು, 6.41 ಲಕ್ಷ ವಿಶೇಷ ಚೇತನ ಮತ್ತು 1.16 ಲಕ್ಷ ಸೇವಾ ಮತದಾರರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಚೊಕ್ಕಲಿಂಗಂ ಹೇಳಿದ್ದಾರೆ.
ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ಬಹುಮಹಡಿ ಮತ್ತು ವಸತಿ ಸಂಕೀರ್ಣಗಳಲ್ಲಿ 1,181 ಮತಗಟ್ಟೆಗಳನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ ಕೊಳೆಗೇರಿಗಳಲ್ಲಿ 210 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಇಒ ತಿಳಿಸಿದರು.
1,00,186 ಮತಗಟ್ಟೆಗಳಿಗೆ 2,21,600 ಬ್ಯಾಲೆಟ್ ಯೂನಿಟ್‌ಗಳು, 1,21,886 ಕಂಟ್ರೋಲ್ ಯೂನಿಟ್‌ಗಳು ಮತ್ತು 1,32,094 ವಿವಿಪ್ಯಾಟ್‌ಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ 288 ವಿಧಾನಸಭಾ ಸ್ಥಾನಗಳಿಗೆ 142 ಸಾಮಾನ್ಯ ವೀಕ್ಷಕರು, 41 ಪೊಲೀಸ್ ವೀಕ್ಷಕರು ಮತ್ತು 71 ಮೇಲ್ವಿಚಾರಕರು ಇದ್ದಾರೆ ಎಂದು ಸಿಇಒ ಹೇಳಿದ್ದಾರೆ.
ಇದನ್ನೂ ಓದಿ: ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ
ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ


