Homeಮುಖಪುಟಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

ಮಹಾರಾಷ್ಟ್ರ ಚುನಾವಣೆ ವಿಶೇಷ: ನಾಂದೇಡ್ ಉತ್ತರ ಕ್ಷೇತ್ರಕ್ಕೆ ಬರೋಬ್ಬರಿ 33 ಸ್ಪರ್ಧಿಗಳು!

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್ ಉತ್ತರ ಕ್ಷೇತ್ರದಲ್ಲಿ 33 ಅಭ್ಯರ್ಥಿಗಳು ಕಣದಲ್ಲಿದ್ದು, ಇದು ಅತೀ ಹೆಚ್ಚು ಅಭ್ಯರ್ಥಿಗಳು ಇರುವ ಕ್ಷೇತ್ರ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ಹೇಳಿವೆ. ಅದಾಗ್ಯೂ, ರಾಜ್ಯದ ನಂದೂರ್ಬಾರ್ ಜಿಲ್ಲೆಯ ಶಾಹದಾ ಅತ್ಯಂತ ಕಡಿಮೆ ಅಭ್ಯರ್ಥಿಗಳನ್ನು ಹೊಂದಿದ್ದು, ಕ್ಷೇತ್ರದಲ್ಲು ಕೇವಲ ಮೂವರು ಅಭ್ಯರ್ಥಿಗಳು  ಮಾತ್ರ ಕಣದಲ್ಲಿದ್ದಾರೆ. ಮಹಾರಾಷ್ಟ್ರ ಚುನಾವಣೆ

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಯಲ್ಲಿ, ರಾಜ್ಯದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ 4,140 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಆಯೋಗ ಹೇಳಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 30 ರಂದು ನವೀಕರಿಸಿದ ಮತದಾರರ ಪಟ್ಟಿಯ ಪ್ರಕಾರ, ರಾಜ್ಯದಲ್ಲಿ 5,00,22,739 ಪುರುಷರು ಮತ್ತು 4,49,96,279 ಮಹಿಳೆಯರು ಸೇರಿದಂತೆ ಒಟ್ಟು 9,70,25,119 ಮತದಾರರಿದ್ದಾರೆ. ಮಹಾರಾಷ್ಟ್ರ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಹಾರಾಷ್ಟ್ರದಲ್ಲಿ 9.7 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿದೆ, ಅವರಲ್ಲಿ 22,22,704 ಮಂದಿ 18-19 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಚುನಾವಣಾ ಆಯೋಗದ (EC) ಅಧಿಕಾರಿಯೊಬ್ಬರು ಮಂಗಳವಾರ ನವೀಕರಿಸಿದ ಮತದಾರರ ಪಟ್ಟಿಯನ್ನು ಉಲ್ಲೇಖಿಸಿ ಹೇಳಿದ್ದಾರೆ.

ರಾಜ್ಯದಲ್ಲಿ 6,101 ಟ್ರಾನ್ಸ್‌ಜೆಂಡರ್ ಮತದಾರರು, 6.41 ಲಕ್ಷ ವಿಶೇಷ ಚೇತನ ಮತ್ತು 1.16 ಲಕ್ಷ ಸೇವಾ ಮತದಾರರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಚೊಕ್ಕಲಿಂಗಂ ಹೇಳಿದ್ದಾರೆ.

ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಮುಂಬೈ, ಥಾಣೆ ಮತ್ತು ಪುಣೆಯಲ್ಲಿ ಬಹುಮಹಡಿ ಮತ್ತು ವಸತಿ ಸಂಕೀರ್ಣಗಳಲ್ಲಿ 1,181 ಮತಗಟ್ಟೆಗಳನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ ಕೊಳೆಗೇರಿಗಳಲ್ಲಿ 210 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಇಒ ತಿಳಿಸಿದರು.

1,00,186 ಮತಗಟ್ಟೆಗಳಿಗೆ 2,21,600 ಬ್ಯಾಲೆಟ್ ಯೂನಿಟ್‌ಗಳು, 1,21,886 ಕಂಟ್ರೋಲ್ ಯೂನಿಟ್‌ಗಳು ಮತ್ತು 1,32,094 ವಿವಿಪ್ಯಾಟ್‌ಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ 288 ವಿಧಾನಸಭಾ ಸ್ಥಾನಗಳಿಗೆ 142 ಸಾಮಾನ್ಯ ವೀಕ್ಷಕರು, 41 ಪೊಲೀಸ್ ವೀಕ್ಷಕರು ಮತ್ತು 71 ಮೇಲ್ವಿಚಾರಕರು ಇದ್ದಾರೆ ಎಂದು ಸಿಇಒ ಹೇಳಿದ್ದಾರೆ.

ಇದನ್ನೂ ಓದಿ: ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ಪಕ್ಷಪಾತ ಆರೋಪ : ಮಹಾರಾಷ್ಟ್ರ ಡಿಜಿಪಿ ರಶ್ಮಿ ಶುಕ್ಲಾ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....