Homeಮುಖಪುಟಮಹಾರಾಷ್ಟ್ರ ಚುನಾವಣೆ | ಪತಿಯ ಸೋಲಿಗೆ ಇವಿಎಂ ಕಾರಣ ಎಂದ ನಟಿ ಸ್ವರಾ ಭಾಸ್ಕರ್

ಮಹಾರಾಷ್ಟ್ರ ಚುನಾವಣೆ | ಪತಿಯ ಸೋಲಿಗೆ ಇವಿಎಂ ಕಾರಣ ಎಂದ ನಟಿ ಸ್ವರಾ ಭಾಸ್ಕರ್

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪತಿ ಫಹಾದ್ ಅಹ್ಮದ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಸ್ವರಾ ಭಾಸ್ಕರ್, ಇವಿಎಂ ದುರ್ಬಳಕೆ ಮತ್ತು ಯಂತ್ರಗಳ ಬ್ಯಾಟರಿ ಮಟ್ಟವನ್ನು ಪ್ರಶ್ನಿಸಿದ್ದಾರೆ. ಅನುಶಕ್ತಿ ನಗರದಿಂದ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಹಾದ್ ಅವರು ಎನ್‌ಸಿಪಿ (ಅಜಿತ್ ಪವಾರ್)ಬಣದ ನವಾಬ್ ಮಲಿಕ್ ಅವರ ಪುತ್ರಿ ಸನಾ ಮಲಿಕ್ ವಿರುದ್ಧ ಸೋತಿದ್ದಾರೆ. ಪತಿಯ ಸೋಲಿಗೆ

ಅನುಶಕ್ತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಫಹಾದ್ ಅಹ್ಮದ್ ಅವರು ನಿರಂತರ ಮುನ್ನಡೆಯಲ್ಲಿದ್ದರು. ಆದರೆ, 99% ಬ್ಯಾಟರಿ ಚಾರ್ಜ್ ಇದ್ದ ಇವಿಎಂಗಳನ್ನು ತೆರೆದ ನಂತರ ಅವರು ಹಠಾತ್ತನೆ ಹಿನ್ನಡೆ ಅನುಭವಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಸ್ವರ ಭಾಸ್ಕರ್ ಆರೋಪಿಸಿದ್ದಾರೆ. ಪತಿಯ ಸೋಲಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಡೀ ದಿನ ಮತ ಚಲಾವಣೆ ಆಗಿರುವ ಯಂತ್ರಗಳು 99% ಬ್ಯಾಟರಿ ಚಾರ್ಜ್ ಇರುವುದು ಹೇಗೆ ಸಾಧ್ಯ? 99% ಚಾರ್ಜ್ ಇರುವ ಎಲ್ಲಾ ಬ್ಯಾಟರಿಗಳು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಯಾಕೆ ಮತಗಳನ್ನು ನೀಡುತ್ತವೆ” ಎಂದು ಸ್ವರ ಭಾಸ್ಕರ್ ಪ್ರಶ್ನಿಸಿದ್ದಾರೆ.

 

ಅಭ್ಯರ್ಥಿ ಫಹಾದ್ ಅಹ್ಮದ್ ಕೂಡ ಇದೇ ರೀತಿಯ ಆರೋಪಗಳನ್ನು ಎತ್ತಿದ್ದು, ಎಣಿಕೆಯ 16 ನೇ ಸುತ್ತಿನವರೆಗೂ ತಾನು ಸ್ಥಿರ ಮುನ್ನಡೆ ಕಾಯ್ದುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ನಂತರ 99% ಬ್ಯಾಟರಿ ಚಾರ್ಜ್ ಇರುವ ಇವಿಎಂಗಳನ್ನು ಬಳಸಲಾಯಿತು. ಇದು ತನ್ನ ಎದುರಾಳಿಗೆ ಮುನ್ನಡೆ ಸಾಧಿಸಲು ಅವಕಾಶ ಮಾಡಿಕೊಟ್ಟಿತು ಎಂದು ಅವರು ಆರೋಪಿಸಿದ್ದಾರೆ.

ಫಹಾದ್ ಅಹ್ಮದ್ ಅವರು 16, 17, 18 ಮತ್ತು 19 ರ ಸುತ್ತುಗಳ ಮರುಎಣಿಕೆಗೆ ಒತ್ತಾಯಿಸಿದ್ದಾರೆ. ಅನುಶಕ್ತಿ ನಗರವು ಮುಂಬೈ ದಕ್ಷಿಣ-ಮಧ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ಶನಿವಾರ ನಡೆದ ಮಹಾರಾಷ್ಟ್ರ ಚುನಾವಣೆಯ ಎಣಿಕೆಯಲ್ಲಿ ರಾಜ್ಯದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಅದರಲ್ಲಿ ಬಿಜೆಪಿ 133 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಕ್ಷೇತ್ರಗಳಲ್ಲಿ ಗೆದ್ದಿದೆ. ಉಳಿದಂತೆ ಮೈತ್ರಿಯ ಭಾಗವಾಗಿದ್ದ ಜೆಎಸ್‌ಎಸ್‌ 2 ಕ್ಷೇತ್ರಗಳಲ್ಲಿ ಹಾಗೂ ಆರ್ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ವಿಪಕ್ಷಗಳ ಮಹಾ ವಿಕಾಸ್ ಅಘಾಡಿಗೆ ಚುನಾವಣಾ ಫಲಿತಾಂಶವೂ ಭಾರಿ ಅಘಾತ ನೀಡಿದೆ. ಮೈತ್ರಿಯು ಒಟ್ಟು 49 ಕ್ಷೇತ್ರಗಳನ್ನಷ್ಟೆ ಗೆಲ್ಲಲು ಸಫಲವಾಗಿದೆ. ಅದರಲ್ಲಿ ಮೈತ್ರಿಯ ಭಾಗವಾಗಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಕ್ಷೇತ್ರಗಳನ್ನು ಗೆದ್ದಿದ್ದು, ಕಾಂಗ್ರೆಸ್ 15 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಉಳಿದಂತೆ ಮೈತ್ರಿಯ ಸಣ್ಣ ಪಕ್ಷಗಳಾದ ಎಸ್‌ಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿಪಿಐ(ಎಂ) ಮತ್ತು ಪಿಡಬ್ಲ್ಯೂಪಿಐ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಉಳಿದಂತೆ ISLAM, AIMIM, RSPS ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...