Homeಮುಖಪುಟಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

- Advertisement -
- Advertisement -

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ ಗ್ರಾಮೀಣ) ಹರ್ಷ್ ಪೊದ್ದಾರ್ ಅವರು ಸಾವುನೋವುಗಳನ್ನು ದೃಢಪಡಿಸಿದ್ದಾರೆ ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತ ಬೆಳಿಗ್ಗೆ 6 ರಿಂದ 7 ಗಂಟೆಯ ನಡುವೆ ಸಂಭವಿಸಿದೆ. 

ರೌಲ್‌ಗಾಂವ್‌ನಲ್ಲಿರುವ ‘ಎಸ್‌ಬಿಎಲ್’ ಕಂಪನಿಯು ಗಣಿಗಾರಿಕೆಯಲ್ಲಿ ಬಳಸುವ ಡಿಟೋನೇಟರ್‌ಗಳು ಮತ್ತು ಇತರ ಸ್ಫೋಟಕಗಳನ್ನು ತಯಾರಿಸುತ್ತದೆ. ಕಾರ್ಮಿಕರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾಗ, ಡಿಟೋನೇಟರ್ ಉತ್ಪಾದನಾ ಪ್ರಕ್ರಿಯೆಯಲ್ಲಿ ಹಠಾತ್ ಮತ್ತು ಪ್ರಬಲವಾದ ಸ್ಫೋಟ ಸಂಭವಿಸಿದೆ.

ಸ್ಫೋಟದ ಶಬ್ದ ಸುತ್ತಮುತ್ತಲಿನ ಪ್ರದೇಶದಿಂದ ಆಚೆಗೂ ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಸಂಬಂಧಪಟ್ಟ ಘಟಕದ ಕೆಲವು ಭಾಗಗಳು ಕುಸಿದು ಬಿದ್ದಿವೆ ಎಂದು ವರದಿಯಾಗಿದೆ. ಆಕಾಶಕ್ಕೆ ಬೃಹತ್ ಹೊಗೆಯ ಗೊಂಚಲುಗಳು ಏರುತ್ತಿರುವುದು ಕಂಡುಬಂದಿದೆ.

ಸ್ಫೋಟ ಸಂಭವಿಸಿದಾಗ ಪೀಡಿತ ವಿಭಾಗದಲ್ಲಿ 25 ರಿಂದ 30 ಕಾರ್ಮಿಕರು ಇದ್ದರು ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ನಂತರದ ಬೆಂಕಿ ಮತ್ತು ಅವಶೇಷಗಳಿಂದಾಗಿ, ಕೆಲವು ಕಾರ್ಮಿಕರು ಇನ್ನೂ ಒಳಗೆ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂಬ ಭಯ ಮುಂದುವರೆದಿದೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಸಿಲುಕಿರುವ ಕಾರ್ಮಿಕರನ್ನು ಹುಡುಕಲು ಯುದ್ಧೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ.

ನಾಗ್ಪುರ ಜಿಲ್ಲೆಯ ರೌಲ್ಗಾಂವ್‌ನಲ್ಲಿ ನಡೆದ ಸ್ಫೋಟಕ ಕಾರ್ಖಾನೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ಇದರ ಜೊತೆಗೆ, ಸಂಬಂಧಪಟ್ಟ ಕಂಪನಿಯು ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. 

ತಹಶೀಲ್ದಾರ್ ಮತ್ತು ತಾಲೂಕು ಮ್ಯಾಜಿಸ್ಟ್ರೇಟ್ ಕಟೋಲ್ ಕಚೇರಿಯು ನಾಗ್ಪುರದ ಕಲೆಕ್ಟರ್‌ಗೆ ಸಲ್ಲಿಸಿದ ವರದಿಯ ಪ್ರಕಾರ, “ಮಾರ್ಚ್ 1, 2026 ರಂದು ಬೆಳಿಗ್ಗೆ 7.05 ರ ಸುಮಾರಿಗೆ ಕಟೋಲ್ ತಾಲ್ಲೂಕಿನ ಮೌಜಾ ಯೆನ್ವಿಹಿರಾದಲ್ಲಿರುವ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಸ್ಫೋಟ ಸಂಭವಿಸಿದೆ, ಸಣ್ಣಪುಟ್ಟ ಗಾಯಗಳಿಂದ ಹಿಡಿದು ಗಂಭೀರ ಗಾಯಗಳಾಗಿರುವವರನ್ನು ಮಂಕಾಪುರದ ಎ-ಒನ್ ಆಸ್ಪತ್ರೆ, ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು ಖಮ್ಲಾದ ಆರೆಂಜ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...