Homeಮುಖಪುಟಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ಪ್ರತಿ ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ 700 ರೂ. ನೀಡಲಿರುವ ಮಹಾರಾಷ್ಟ್ರ!

ಎಂಎಸ್‌ಪಿ ಯೋಜನೆಯಡಿ ಖರೀದಿಸಿದ ಭತ್ತದ ಉತ್ಪನ್ನಗಳಿಗೆ ಕೇಂದ್ರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಖರೀದಿ ಪ್ರೋತ್ಸಾಹಕ ಬೆಂಬಲವನ್ನು ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಮಂಗಳವಾರ ಅನುಮೋದಿಸಿದೆ.

- Advertisement -
- Advertisement -

2020-21ರ ಖಾರಿಫ್ ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಖರೀದಿಸಿದ ಭತ್ತದ ಉತ್ಪನ್ನಗಳಿಗೆ ಕೇಂದ್ರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಖರೀದಿ ಪ್ರೋತ್ಸಾಹಕ ಬೆಂಬಲವನ್ನು ಮಹಾರಾಷ್ಟ್ರ ಸಚಿವ ಸಂಪುಟ ಮಂಗಳವಾರ ಅನುಮೋದಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರೈತರಿಗೆ ಒಂದು ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿಯಾಗಿ 700 ರೂಪಾಯಿ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ 1,400 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ಉದ್ದವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ಸಾಮಾನ್ಯ ದರ್ಜೆಯ ಭತ್ತಕ್ಕೆ ಕೇಂದ್ರವು ಕ್ವಿಂಟಾಲ್ ಕನಿಷ್ಠ ಬೆಂಬಲ ಬೆಲೆ 1,868 ರೂಪಾಯಿ ನಿಗದಿಪಡಿಸಿದರೆ, ಶ್ರೇಣೀಕೃತ ಉತ್ತಮ ದರ್ಜೆಯ ಭತ್ತಕ್ಕೆ ಕ್ವಿಂಟಲ್‌ಗೆ 1,888 ರೂಪಾಯಿ ನಿಗದಿ ಪಡಿಸಿದೆ.

“ಭತ್ತದ ಬೆಳೆಗಾರರು ತೊಂದರೆಯಲ್ಲಿರುವುದರಿಂದ ಈ ನಿರ್ಧಾರವನ್ನು ರಾಜ್ಯ ಕ್ಯಾಬಿನೆಟ್ ತೆಗೆದುಕೊಂಡಿದೆ. ಆನ್‌ಲೈನ್‌ನಲ್ಲಿ ಖರೀದಿಸಿದ ಭತ್ತಕ್ಕೆ ಮಾತ್ರ ಪ್ರೋತ್ಸಾಹಕ ಬೆಂಬಲ ಮೊತ್ತವನ್ನು ನೀಡಲಾಗುವುದು” ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ರಾಜ್ಯದಲ್ಲಿ ಈ ವರ್ಷ 1.78 ಕೋಟಿ ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು ಎಂದು ಅಂದಾಜಿಸಲಾಗಿದೆ.


ಇದನ್ನೂ ಓದಿ: ತರಕಾರಿಗಳಿಗೆ ಬೆಂಬಲ ಬೆಲೆ ಘೋಷಿಸಿದ ದೇಶದ ಮೊದಲ ರಾಜ್ಯ ಕೇರಳ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

0
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು...