Homeಮುಖಪುಟಮಹಾರಾಷ್ಟ್ರ: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಮಾಜಿ ಸಂಸದ ನಿಲೇಶ್ ರಾಣೆ ವಿರುದ್ಧ FIR

ಮಹಾರಾಷ್ಟ್ರ: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಮಾಜಿ ಸಂಸದ ನಿಲೇಶ್ ರಾಣೆ ವಿರುದ್ಧ FIR

- Advertisement -
- Advertisement -

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯದ ಹೊರಗೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ, ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಮಾಜಿ ಸಂಸದ ನಿಲೇಶ್ ರಾಣೆ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಶಾಸಕ ನಿತೇಶ್ ರಾಣೆ ಅವರ ಮೇಲಿರುವ ಕೊಲೆ ಯತ್ನ ಆರೋಪದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಮಂಗಳವಾರ ಅವರ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಇದೇ ವೇಳೆ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರ ನಿಲೇಶ್ ರಾಣೆ ಮತ್ತು ಇತರ ಕೆಲವರು ನ್ಯಾಯಾಲಯದ ಬಳಿ ಜಮಾಯಿಸಿದ್ದರು. ಈ ವೇಳೆ ನಿಲೇಶ್ ರಾಣೆ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಡಿಸೆಂಬರ್ 2021 ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ನಿತೇಶ್ ರಾಣೆ ಕೊಲೆ ಯತ್ನ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಸದ್ಯ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ

ಮಂಗಳವಾರ ಸಂಜೆ ಓರಸ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 186 (ಯಾವುದೇ ಸಾರ್ವಜನಿಕ ನೌಕರ ತನ್ನ ಕಾರ್ಯಗಳನ್ನು ನಿರ್ವಹಿಸಲು ಸ್ವಯಂಪ್ರೇರಣೆಯಿಂದ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕನು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅಸಹಕಾರ), 269 (ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಸಾಧ್ಯತೆಯಿದೆ), 270 (ಮಾರಣಾಂತಿಕ ಕೃತ್ಯವು ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಸಾಧ್ಯತೆಯಿದೆ) ಮತ್ತು ವಿಪತ್ತು ನಿರ್ವಹಣಾ ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತ ಜಾಮೀನು ಅರ್ಜಿಯಲ್ಲಿ, ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳಿಗೆ ಸೇರಿದ ಮತ್ತು ಸಾರ್ವಜನಿಕ ಸ್ಥಾನಮಾನಗಳನ್ನು ಹೊಂದಿರುವ ಜನರನ್ನು ಸುಳ್ಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜ್ಯ ಸರ್ಕಾರ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಳಗೊಂಡಿರುವ) ಅವರನ್ನು ಬಲಿಪಶು ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.


ಇದನ್ನೂ ಓದಿ: ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...