Homeಮುಖಪುಟಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

ಮಹಾರಾಷ್ಟ್ರ | ಎಲ್ಲಾ ಸರ್ಕಾರಿ ಸಂವಹನಗಳಿಗೆ ಮರಾಠಿ ಭಾಷೆ ಬಳಕೆ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ!

- Advertisement -
- Advertisement -

ಸರ್ಕಾರಿ ಕಚೇರಿಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಎಲ್ಲಾ ಅಧಿಕೃತ ಸಂವಹನಗಳಿಗೆ ಮರಾಠಿ ಬಳಕೆಯನ್ನು ಕಡ್ಡಾಯಗೊಳಿಸಿ ಮಹಾರಾಷ್ಟ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ ಎಂದು ಪಿಟಿಐ ವರದಿ ಮಾಡಿದೆ. ರಾಜ್ಯ ಯೋಜನಾ ಇಲಾಖೆ ಹೊರಡಿಸಿದ ಈ ಅಧಿಸೂಚನೆಯಲ್ಲಿ, ನಿರ್ದೇಶನವನ್ನು ಪಾಲಿಸದ ಸರ್ಕಾರಿ ನೌಕರರು ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಆದೇಶ ಪಾಲಿಸದಿರುವ ಬಗ್ಗೆ ಅಗತ್ಯ ಕ್ರಮಕ್ಕಾಗಿ ಕಚೇರಿ ಅಥವಾ ಇಲಾಖಾ ಮುಖ್ಯಸ್ಥರಿಗೆ ದೂರುಗಳನ್ನು ಸಲ್ಲಿಸಬಹುದು ಎಂದು ಅಧಿಸೂಚನೆ ಹೇಳಿದೆ. ರಾಜ್ಯದ ಎಲ್ಲಾ ರೀತಿಯ ಸಂವಹನ, ಅಧಿಕೃತ ಚಿಹ್ನೆಗಳು ಮತ್ತು ದಾಖಲಾತಿಗಳಿಗೆ ಈ ಆದೇಶವು ಅನ್ವಯಿಸುತ್ತದೆ ಎಂದು ಅಧಿಸೂಚನೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತದ ಹೊರಗಿನಿಂದ ಮತ್ತು ಮರಾಠಿ ಮಾತನಾಡದ ರಾಜ್ಯಗಳಿಂದ ಬರುವ ಸಂದರ್ಶಕರನ್ನು ಹೊರತುಪಡಿಸಿ, ಎಲ್ಲಾ ಅಧಿಕಾರಿಗಳು ಸಂದರ್ಶಕರೊಂದಿಗೆ ಸಂವಹನ ನಡೆಸುವಾಗ ಮರಾಠಿ ಭಾಷೆಯನ್ನು ಬಳಸಬೇಕು” ಎಂದು ಅಧಿಸೂಚನೆಯನ್ನು ಉಲ್ಲೇಖಿಸಿದೆ.

ಎಲ್ಲಾ ಸರ್ಕಾರಿ ಕಚೇರಿಗಳು, ಪುರಸಭೆ ಸಂಸ್ಥೆಗಳು, ರಾಜ್ಯ ನಿಗಮಗಳು ಮತ್ತು ಸಾರ್ವಜನಿಕ ಸಂಸ್ಥೆಗಳು ಕಂಪ್ಯೂಟರ್ ಕೀಪ್ಯಾಡ್‌ಗಳು ಮತ್ತು ಮುದ್ರಕಗಳಲ್ಲಿ ರೋಮನ್ ಅಕ್ಷರಗಳೊಂದಿಗೆ ಮರಾಠಿ ದೇವನಾಗರಿ ಲಿಪಿಯಲ್ಲಿ ಪಠ್ಯವನ್ನು ಪ್ರದರ್ಶಿಸಬೇಕು ಎಂದು ಆದೇಶ ಹೇಳಿದೆ ಪಿಟಿಐ ವರದಿ ಮಾಡಿದೆ.

ಹೊಸ ವ್ಯವಹಾರಗಳು ಇಂಗ್ಲಿಷ್‌ನಲ್ಲಿ ಅನುವಾದವಿಲ್ಲದೆ ಮರಾಠಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

“ಮಹಾರಾಷ್ಟ್ರ ಸರ್ಕಾರ ಅನುಮೋದಿತ ಕಂಪನಿಗಳು, ಮಂಡಳಿಗಳು, ನಿಗಮಗಳು, ಅರೆ ಸರ್ಕಾರಿ ಸಂಸ್ಥೆಗಳು, ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳು ಇತ್ಯಾದಿಗಳು ಮರಾಠಿ ಪತ್ರಿಕೆಗಳಲ್ಲಿ ನೀಡುವ ಎಲ್ಲಾ ಜಾಹೀರಾತುಗಳು, ಟೆಂಡರ್‌ಗಳು, ಸೂಚನೆಗಳು ಇತ್ಯಾದಿಗಳನ್ನು ಮರಾಠಿ ಭಾಷೆಯಲ್ಲಿ ಮಾತ್ರ ನೀಡಬೇಕು” ಎಂದು ಅಧಿಸೂಚನೆ ಹೇಳಿದೆ ಎಂದು ದಿ ಹಿಂದೂ ಉಲ್ಲೇಖಿಸಿದೆ.

ಕಳೆದ ವರ್ಷ, ರಾಜ್ಯ ಸಚಿವ ಸಂಪುಟವು ಮರಾಠಿ ಭಾಷಾ ನೀತಿಯನ್ನು ಅನುಮೋದಿಸಿತ್ತು. ಈ ನೀತಿಯು ಭಾಷೆಯ ಸಂರಕ್ಷಣೆ, ಪ್ರಚಾರ, ಪ್ರಸರಣ ಮತ್ತು ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸಾರ್ವಜನಿಕ ವ್ಯವಹಾರಗಳಲ್ಲಿ ಭಾಷೆಯನ್ನು ಬಳಸುವಂತೆ ಶಿಫಾರಸು ಮಾಡಿದೆ.

ಇದನ್ನೂಓದಿ:  ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಅರ್ಜಿ : ಚು. ಆಯೋಗಕ್ಕೆ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....