Homeಮುಖಪುಟಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಎನ್‌ಸಿಪಿ ನಾಯಕ, ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗೆ ನಿರ್ದೇಶನ ನೀಡುವ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

“ನಾವು ನಿನ್ನೆ (ಸೋಮವಾರ) ಬಾಂಬೆ ಹೈಕೋರ್ಟ್ ವಿರುದ್ಧ ರಾಜ್ಯ ಸರ್ಕಾರದ ಪರವಾಗಿ ಮೇಲ್ಮನವಿ ಸಲ್ಲಿಸಿದ್ದೇವೆ” ಎಂದು ಮಹಾರಾಷ್ಟ್ರದ ಸ್ಥಾಯಿ ಸಲಹೆಗಾರ ಸಚಿನ್ ಪಾಟೀಲ್ ಹೇಳಿದ್ದಾರೆ.

ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಸಿಬಿಐ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ದೇಶ್ಮುಖ್ ಸೋಮವಾರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶ್ಮುಖ್ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪದ ಬಗ್ಗೆ 15 ದಿನಗಳ ಒಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಹೈಕೋರ್ಟ್ ತನ್ನ 52 ಪುಟಗಳ ಆದೇಶದಲ್ಲಿ ಸಿಬಿಐಗೆ ಸೂಚಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ರಾಜೀನಾಮೆ

ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿರುವ ಆರೋಪಗಳನ್ನು ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ನಿರಾಕರಿಸಿದ್ದಾರೆ.

ಪರಮ್ ಬೀರ್ ಸಿಂಗ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ, ಸಚಿವರು ಮುಂಬೈ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 100 ಕೋಟಿ ರೂಪಾಯಿ ಕಲೆಕ್ಷನ್ ಗುರಿಯನ್ನು ನಿಗದಿಪಡಿಸಿದ್ದರು. ರೆಸ್ಟೋರೆಂಟ್‌ಗಳು, ಪಬ್‌ಗಳು, ಬಾರ್‌ಗಳು ಮತ್ತು ಹುಕ್ಕಾ ಪಾರ್ಲರ್‌ಗಳಿಂದ ಹಣವನ್ನು ಸಂಗ್ರಹಿಸಲು ಸೂಚಿಸಿದ್ದರು. ಫೆಬ್ರವರಿಯಲ್ಲಿ ಈ ಬೇಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದರು. ಇದು ಪ್ರತಿಪಕ್ಷಗಳ ನಡುವೆ ತೀವ್ರ ವಿವಾದಕ್ಕೆ ಗುರಿಯಾಗಿತ್ತು.

ಸದ್ಯ ಮಹಾರಾಷ್ಟ್ರ ಗೃಹ ಸಚಿವರಾಗಿ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ನೇಮಕಗೊಂಡಿದ್ದಾರೆ.


ಇದನ್ನೂ ಓದಿ: ಸೈಕಲ್‌ ಮೂಲಕ ಮತದಾನ ಕೇಂದ್ರ ತಲುಪಿದ ನಟ ವಿಜಯ್; ಪೆಟ್ರೋಲ್ ಬೆಲೆ ಹೆಚ್ಚಳದ ವಿರುದ್ದ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...