Homeಮುಖಪುಟಮಹಾರಾಷ್ಟ್ರ | ಮಹಾ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ; ಅಘಾಡಿಗೆ ಅಘಾತ!

ಮಹಾರಾಷ್ಟ್ರ | ಮಹಾ ಗೆಲುವಿನತ್ತ ಬಿಜೆಪಿ ನೇತೃತ್ವದ ಮಹಾಯುತಿ; ಅಘಾಡಿಗೆ ಅಘಾತ!

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಮಹಾಯುತಿ ಭಾರಿ ಬಹುಮತದತ್ತ ಸಾಗುತ್ತಿದ್ದು, ವಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಗೆ ತೀವ್ರ ಅಘಾತವಾಗಿದೆ. ಒಟ್ಟು 288 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಹಾಯುತಿ ಮೈತ್ರಿಗೆ ಈ ವರೆಗೆ 224 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾವಿಕಾಸ್ ಅಘಾಡಿಗೆ ಕೇವಲ 60 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರ ಪಕ್ಷಗಳು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಶನಿವಾರ ಎಣಿಕೆ ಆರಂಭವಾಗುತ್ತಿದ್ದಂತೆ ಆಡಳಿತಾರೂಢ ಮಹಾಯುತಿ ಬಹುಮತದ 105 ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಮಹಾಯುತಿ ಮೈತ್ರಿಯಲ್ಲಿ ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಹಾಗೂ ಇರತ ಪಕ್ಷಗಳು ಇವೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಹಾಗೂ ಇತರ ಮಿತ್ರ ಪಕ್ಷಗಳು ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈವರೆಗಿನ ಫಲಿತಾಂಶದಂತೆ ಬಿಜೆಪಿ ತಾನು ಸ್ಪರ್ಧಿಸಿದ್ದ 149 ಕ್ಷೇತ್ರಗಳಲ್ಲಿ 133 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಬಿಜೆಪಿ ರಾಜ್ಯದಲ್ಲಿ ಶಕ್ತಿ ಹೆಚ್ಚಿಸಿಕೊಂಡಿದ್ದು, 2019ರ ಚುನಾವಣೆಯಲ್ಲಿ ಪಕ್ಷವೂ 164 ಸ್ಥಾನಗಳಲ್ಲಿ ಸ್ಪರ್ಧಿಸಿ 105 ಕ್ಷೇತ್ರಗಳಲ್ಲಿ ಗೆದ್ದಿತ್ತು.

ಮಹಾಯುತಿ ಮೈತ್ರಿಯ ಶಿಂಧೆ ನೇತೃತ್ವದ ಶಿವಸೇನೆ 82 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು 50 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಅವಿಭಜಿತ ಶಿವಸೇನೆ 2019ರಲ್ಲಿ 126 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 56 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆದರೆ, ಪಕ್ಷವೂ ಒಡೆದು ಶಿಂಧೆ ಬಣ ಬಿಜೆಪಿ ಜೊತೆಗೆ ಸೇರಿದ್ದರೆ, ಉದ್ಧವ್ ಠಾಕ್ರೆ ಬಣ ಕಾಂಗ್ರೆಸ್ ಜೊತೆಗೆ ಉಳಿದುಕೊಂಡಿತ್ತು.

ಮಹಾಯುತಿ ಮೈತ್ರಿಯಲ್ಲಿ ಇರುವ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 37 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. 2019ರಲ್ಲಿ ಅವಿಭಜಿತ ಎನ್‌ಸಿಪಿ 121 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 54 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆದರೆ ನಂತರ, ಪಕ್ಷವೂ ಒಡೆದು ಅಜಿತ್ ಪವಾರ್ ಬಣ ಬಿಜೆಪಿ ಜೊತೆಗೆ ಸೇರಿದ್ದರೆ, ಶರದ್ ಪವಾರ್ ಬಣ ಕಾಂಗ್ರೆಸ್ ಜೊತೆಗೆ ಉಳಿದುಕೊಂಡಿತ್ತು.

ಅಷ್ಟೆ ಅಲ್ಲದೆ, ಮಹಾಯುತಿ ಮೈತ್ರಿಯಲ್ಲಿ ಇರುವ ಜೆಎಸ್‌ಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಆರ್‌ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ವಿಪಕ್ಷಗಳ ಮೈತ್ರಿಯಾದ ಮಹಾವಿಕಾಸ್ ಅಘಾಡಿಯ ಕಾಂಗ್ರೆಸ್ ಒಟ್ಟು 101 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಕೇವಲ 17 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಪಕ್ಷವೂ 2019ರಲ್ಲಿ 147 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 44 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ಮಹಾವಿಕಾಸ್ ಅಘಾಡಿಯ ಶರದ್ ಪವಾರ್ ನೇತೃತ್ವದ ಎನ್‌ಸಿಪಿ 86 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಕೇವಲ13 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆ ಕಾಯ್ದುಕೊಂಡಿದೆ. ಜೊತೆಗೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 96 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 26 ಕ್ಷೇತ್ರಗಳಲ್ಲಿ ಗೆಲುವು ಅಥವಾ ಮುನ್ನಡೆಯಲ್ಲಿದೆ. ಅದೇ ರೀತಿ ಮೈತ್ರಿಯ ಪಕ್ಷಗಳಾದ ಸಮಾಜವಾದಿ ಪಕ್ಷ ಎರಡು ಕ್ಷೇತ್ರಗಳಲ್ಲಿ, ಸಿಪಿಐಎಂ ಮತ್ತು ಆರ್‌ಡಬ್ಲ್ಯೂಪಿಐ ಕ್ರಮವಾಗಿ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ಎರಡು ಪ್ರಮುಖ ಮೈತ್ರಿಗಳಲ್ಲಿ ಇಲ್ಲದ ಇತರ ಪಕ್ಷಗಳಾದ SBP, AIMIM, ISLAM, RSPK ಪಕ್ಷಗಳು ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಇದನ್ನೂಓದಿ  ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...