Homeಮುಖಪುಟ'ಮಹಾರಾಷ್ಟ್ರದಲ್ಲಿ 225 ಸ್ಥಾನ ಗೆಲ್ತೀವಿ' - ರೈಲ್ವೆ ಮಂತ್ರಿ ಪಿಯೂಷ್ ಗೋಯಲ್

‘ಮಹಾರಾಷ್ಟ್ರದಲ್ಲಿ 225 ಸ್ಥಾನ ಗೆಲ್ತೀವಿ’ – ರೈಲ್ವೆ ಮಂತ್ರಿ ಪಿಯೂಷ್ ಗೋಯಲ್

- Advertisement -
- Advertisement -

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ. ರಾಜಕೀಯ ನಾಯಕರು, ಸೆಲೆಬ್ರಿಟಿಗಳು ವೋಟ್ ಮಾಡಿದರು. ಬಿಜೆಪಿ ನಾಯಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಪತ್ನಿ ಸಮೇತರಾಗಿ ಬಂದು ವೋಟ್ ಮಾಡಿ, ಮಾತನಾಡಿ, ಬಿಜೆಪಿ ಮತ್ತು ಶಿವಸೇನೆ ಅತೀಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಲಿವೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕ ಅಜಿತ್ ಪವಾರ್ ಹಕ್ಕು ಚಲಾಯಿಸಿದರು. ಮುಂಬೈನಲ್ಲಿ ವೋಟ್ ಮಾಡಿದ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಮಾತನಾಡಿ, ಬಿಜೆಪಿ ಮತ್ತು ಮಹಾರಾಷ್ಟ್ರ ಘಟಬಂಧನ್ 225 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಾರಾಷ್ಟ್ರದ ಜನತೆ ಮೋದಿ ಮತ್ತು ದೇವೇಂದ್ರ ಫಡ್ನವೀಸ್ ಅವರ ಜತೆಗಿದ್ದಾರೆ. ವಿಪಕ್ಷಗಳು ತಮ್ಮ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ ಎಂದು ಹೇಳಿದರು.

ಮಹಾರಾಷ್ಟ್ರ ವಿಧಾನಸಭೆ 288 ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ 150 ಸ್ಥಾನಗಳಲ್ಲಿ ಬಿಜೆಪಿ, 124 ಸೀಟುಗಳಲ್ಲಿ ಶಿವಸೇನೆ ಹಾಗೂ ಉಳಿದ ಸ್ಥಾನಗಳಲ್ಲಿ ಘಟಬಂಧನ್ ಇತರೆ ಪಕ್ಷಗಳು ಸ್ಪರ್ಧಿಸುತ್ತಿವೆ. ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ. ದೇವೇಂದ್ರ ಫಡ್ನವೀಸ್ ಅವರ ತುರ್ತು ಸೇವೆಗಳು ಆಕರ್ಷಿಸಿವೆ. ಮಹಾರಾಷ್ಟ್ರ ಜನತೆ ಬಿಜೆಪಿಗೆ ವೋಟ್ ಮಾಡಲಿದ್ದಾರೆ ಎಂದು ಹೇಳಿದರು. ಇತ್ತ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಹರಿಯಾಣ ಮತ್ತು ಮಹಾರಾಷ್ಟ್ರ ಜನತೆ ಹಾಗೂ ಯುವಜನತೆ ಬಿಜೆಪಿಗೆ ವೋಟ್ ಮಾಡಲಿದ್ದಾರೆ ಎಂಬ ಭರವಸೆಯಿದೆ. ನಿಮ್ಮ ಮತಗಳಿಂದ ಇತಿಹಾಸ ನಿರ್ಮಾಣವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...