Homeಮುಖಪುಟಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಸರಣಿ ಸಾವು: ತನಿಖೆಗೆ ಕಾಂಗ್ರೆಸ್ ಆಗ್ರಹ, ರಾಜ್ಯ ಆರೋಗ್ಯ ವ್ಯವಸ್ಥೆ ವಿರುದ್ಧ ಖರ್ಗೆ...

ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಸರಣಿ ಸಾವು: ತನಿಖೆಗೆ ಕಾಂಗ್ರೆಸ್ ಆಗ್ರಹ, ರಾಜ್ಯ ಆರೋಗ್ಯ ವ್ಯವಸ್ಥೆ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳು ಸೇರಿದಂತೆ 24 ಜನ ಸಾವಿಗೀಡಾದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಾಂಗ್ರೆಸ್ ಮಂಗಳವಾರ ಒತ್ತಾಯಿಸಿದ್ದು, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಸರ್ಕಾರದ ಆರೋಗ್ಯ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರ ನಡುವೆ 12 ಶಿಶುಗಳು ಸೇರಿದಂತೆ 24 ಸಾವುಗಳು ವರದಿಯಾಗಿವೆ ಎಂದು ಮಹಾರಾಷ್ಟ್ರದ ಉನ್ನತ ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಈ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಅವರು ಟ್ವೀಟ್ ಮಾಡಿದ್ದು, ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ”ಔಷಧಿಗಳು ಮತ್ತು ಚಿಕಿತ್ಸೆಯ ಕೊರತೆಯಿಂದಾಗಿ ಈ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಆಗಸ್ಟ್‌ನಲ್ಲಿ ಥಾಣೆಯ ಸರ್ಕಾರಿ ಆಸ್ಪತ್ರೆಯಲ್ಲಿ ಇದೇ ರೀತಿಯ ಘಟನೆ ನಡೆದಿದ್ದು 18 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಖರ್ಗೆ ಹೇಳಿದರು.

”ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳು ರಾಜ್ಯ ಸರ್ಕಾರದ ಆರೋಗ್ಯ ವ್ಯವಸ್ಥೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಯನ್ನು ಹುಟ್ಟುಹಾಕಿದೆ” ಎಂದು ಕಾಂಗ್ರೆಸ್ ಮುಖ್ಯಸ್ಥರು ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

”ಈ ನಿರ್ಲಕ್ಷ್ಯದ ಅಪರಾಧಿಗಳಿಗೆ ನ್ಯಾಯಾಂಗವು ಕಠಿಣ ಶಿಕ್ಷೆಯನ್ನು ನೀಡುವಂತೆ ನಾವು ಸಮಗ್ರ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದರು.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಈ ಸಾವಿನ ಸುದ್ದಿಗೆ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ದುಃಖಿತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

”ಬಿಜೆಪಿ ಸರ್ಕಾರ ಪ್ರಚಾರಕ್ಕೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ, ಆದರೆ ಮಕ್ಕಳಿಗೆ ಔಷಧಿ ಕೊಡಿಸಲು ಹಣವಿಲ್ಲ, ಬಿಜೆಪಿಯ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ” ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಈ ಘಟನೆಯ ಬಗ್ಗೆ ಮೌನ ಮುರಿಯುವಂತೆ ಮೋದಿಯವರಿಗೆ ಸೂಚಿಸಿದ್ದಾರೆ.

”ಅಪಾರ ಸಂಖ್ಯೆಯ ಸಾವುಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ಸೋಮವಾರ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿ ”ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ. ದುಃಖತಪ್ತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ.

ಈ ಬಗ್ಗೆ ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶಕ ಡಾ ದಿಲೀಪ್ ಮ್ಹೈಸೇಕರ್ ಪಿಟಿಐಗೆ ಮಾಹಿತಿ ನೀಡಿದ್ದು, ”ಕಳೆದ 24 ಗಂಟೆಗಳಲ್ಲಿ, ನಾಂದೇಡ್ ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿಎಚ್) 24 ಸಾವುಗಳು ವರದಿಯಾಗಿವೆ. ಈ ಪೈಕಿ 12 ಶಿಶುಗಳು ಇಲ್ಲಿಗೆ ಉಲ್ಲೇಖಿಸಲ್ಪಟ್ಟಿವೆ. ಕೆಲವು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಉಳಿದ ಸಾವುಗಳು ವಿವಿಧ ಕಾರಣಗಳಿಂದ ವಯಸ್ಕರು” ಸೇರಿದ್ದಾರೆ.

ಶಂಕರರಾವ್ ಚವ್ಹಾಣ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ.ಎಸ್.ಆರ್.ವಕೋಡೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ”12 ಶಿಶುಗಳು ಆರು ಗಂಡು ಮತ್ತು ಆರು ಹೆಣ್ಣು ಮಕ್ಕಳನ್ನು ಒಳಗೊಂಡಿವೆ. ಅವರಲ್ಲಿ ಹೆಚ್ಚಿನವರು 0-3 ದಿನದ ವಯೋಮಾನದವರು ಮತ್ತು “ಅತ್ಯಂತ ಕಡಿಮೆ ತೂಕ” ಹೊಂದಿದ್ದರು” ಎಂದು ಅವರು ಹೇಳಿದರು.

ಇದನ್ನೂ ಓದಿ: ಕೋವಿಡ್-19 ಲಸಿಕೆ: ಕ್ಯಾಟಲಿನ್ ಕಾರಿಕೊ, ಡ್ರ್ಯೂ ವೈಸ್‌ಮನ್‌​​ಗೆ ವೈದ್ಯಕೀಯ ನೊಬೆಲ್ ಪುರಸ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...