Homeಮುಖಪುಟಮಹಾರಾಷ್ಟ್ರ: ಇಂಡಿಯಾ ಬಣದ ಸೀಟು ಹಂಚಿಕೆ ಒಪ್ಪಂದ ಅಂತಿಮ; 18 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ?

ಮಹಾರಾಷ್ಟ್ರ: ಇಂಡಿಯಾ ಬಣದ ಸೀಟು ಹಂಚಿಕೆ ಒಪ್ಪಂದ ಅಂತಿಮ; 18 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟವು 2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದ ಇತ್ಯರ್ಥಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದ್ದು, 48 ಗಂಟೆಗಳ ಒಳಗೆ ಔಪಚಾರಿಕ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ರಾಜ್ಯದ 48 ಲೋಕಸಭಾ ಸ್ಥಾನಗಳ 20ರಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ 18ರಲ್ಲಿ ಸ್ಪರ್ಧಿಸಲಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಘಟಕ 10 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ವಂಚಿತ್ ಬಹುಜನ ಅಘಾಡಿ ಪ್ರಾದೇಶಿಕ ಪಕ್ಷವು ಐದು ಸ್ಥಾನಗಳಿಗೆ ಬೇಡಿಕೆಯಿಟ್ಟಿತ್ತು. ಶಿವಸೇನೆಯ (ಯುಬಿಟಿ) ಪಾಲಿನಿಂದ ಎರಡನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಸ್ವತಂತ್ರ ಅಭ್ಯರ್ಥಿ ರಾಜು ಶೆಟ್ಟಿ ಅವರು ಪವಾರ್ ಅವರ ಪಕ್ಷದಿಂದ ಬೆಂಬಲ ಪಡೆದಿದ್ದಾರೆ.

ಶಿವಸೇನೆ (ಯುಬಿಟಿ) ಮುಂಬೈನ ಆರು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ, ಅವುಗಳಲ್ಲಿ ಒಂದನ್ನು – ಬಹುಶಃ ಮುಂಬೈ ಈಶಾನ್ಯ ಸ್ಥಾನವನ್ನು ವಿಬಿಎಗೆ ನೀಡಬಹುದು.

39 ಸ್ಥಾನಗಳ ಮಾತುಕತೆಗಳನ್ನು ಪರಿಹರಿಸಲಾಗಿದೆ ಎಂದು ಮೀಲಗಳು ತಿಳಿಸಿದ್ದು, ಮುಂಬೈನ ದಕ್ಷಿಣ ಮಧ್ಯ ಮತ್ತು ವಾಯುವ್ಯ ಸ್ಥಾನಗಳ ಬಗ್ಗೆ ದೊಡ್ಡ ಭಿನ್ನಾಭಿಪ್ರಾಯಗಳಿವೆ. ಕಾಂಗ್ರೆಸ್ ಮತ್ತು ಸೇನಾ (ಯುಬಿಟಿ) ಇವೆರಡೂ ಈ ಖ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿವೆ. ಆ ವಿವಾದವನ್ನು ಹೇಗೆ ಪರಿಹರಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

2019ರ ಚುನಾವಣೆಯಲ್ಲಿ ಶಿವಸೇನೆ (ಆಗ ಅವಿಭಜಿತ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು) 23 ಸ್ಥಾನಗಳಲ್ಲಿ ಸ್ಪರ್ಧಿಸಿತು. ಮುಂಬೈ ದಕ್ಷಿಣ ಮಧ್ಯ ಮತ್ತು ವಾಯುವ್ಯ ಸೇರಿದಂತೆ 18 ಸ್ಥಾನಗಳನ್ನು ಗೆದ್ದಿತು. ಕಾಂಗ್ರೆಸ್ 25 ರಲ್ಲಿ ಸ್ಪರ್ಧಿಸಿ ಚಂದ್ರಾಪುರವನ್ನು ಮಾತ್ರ ಗೆದ್ದುಕೊಂಡಿತು. ಆದರೆ, ಶರದ್ ಪವಾರ್ ಅವರ ಎನ್‌ಸಿಪಿ (ಆಗ ಅವಿಭಜಿತ) 19 ಸ್ಥಾನಗಳಿಂದ ಸ್ಪರ್ಧಿಸಿ ನಾಲ್ಕು ಗೆದ್ದಿತು. ಬಿಜೆಪಿ ಆ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಿತು, ಅದು ಸ್ಪರ್ಧಿಸಿದ 25 ಸ್ಥಾನಗಳಲ್ಲಿ 23 ಸ್ಥಾನಗಳನ್ನು ಗೆದ್ದಿತು.

ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಶಿವಸೇನೆ ಮತ್ತು ಎನ್‌ಸಿಪಿಯ ಬಂಡಾಯ ಬಣಗಳು ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತವೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಡಿಯಾದ ನಂತರ ಈ ಒಪ್ಪಂದವನ್ನು ಮಾಡಲಾಗಿದೆ.

ಈಗ ಅಂತಿಮವಾಗಿರುವ ಒಪ್ಪಂದವು ಇಂಡಿಯಾ ಬಣಕ್ಕೆ ಮತ್ತೊಂದು ದೊಡ್ಡ ಹೆಜ್ಜೆಯಾಗಿದೆ. ಇದು ಕೆಲವೇ ವಾರಗಳಲ್ಲಿ ಚುನಾವಣೆಗೆ ಕಾರಣವಾಗಿರುವುದರಿಂದ ಸಾಧ್ಯವಾದಷ್ಟು ಬೇಗ ಒಪ್ಪಂದಗಳನ್ನು ಕಟ್ಟಲು ಪ್ರಯತ್ನಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಭಾರತೀಯ ಜನತಾ ಪಕ್ಷವನ್ನು ಸೋಲಿಸುವ ಉದ್ದೇಶದಿಂದ ಕಳೆದ ವರ್ಷ ಜೂನ್‌ನಲ್ಲಿ ಸ್ಥಾಪಿಸಲಾದ ಕಾಂಗ್ರೆಸ್ ನೇತೃತ್ವದ ಗುಂಪು, ಸೀಟು ಹಂಚಿಕೆ ಮಾಡಿಕೊಳ್ಳಲು ಹೆಣಗಾಡುತ್ತಿದೆ. ಪ್ರಾದೇಶಿಕ ಪಕ್ಷಗಳು ಪ್ರತಿ ನಿದರ್ಶನದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ರಾಷ್ಟ್ರೀಯ ಪಕ್ಷದ ಮುಂದೆ ಪಟ್ಟು ಹಿಡಿದಿವೆ.

ಇದನ್ನೂ ಓದಿ; ಮಣಿಪುರ ಗಲಭೆ: ಮಿಲಿಟೆಂಟ್ ಗುಂಪುಗಳೊಂದಿಗಿನ ಒಪ್ಪಂದ ರದ್ದುಗೊಳಿಸುವ ನಿರ್ಣಯ ವಿರೋಧಿಸಿದ ಕುಕಿ ಶಾಸಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...