Homeಮುಖಪುಟಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ : ಇಂದು ಮತದಾನ

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ : ಇಂದು ಮತದಾನ

- Advertisement -
- Advertisement -

ಬಹು ನಿರೀಕ್ಷಿತ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ಮತದಾನ ಪ್ರಕ್ರಿಯೆ ಇಂದು (ನ.20) ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಜಾರ್ಖಂಡ್‌ನಲ್ಲಿ ಎರಡನೇ ಮತ್ತು ಕೊನೆಯ ಹಂತವಾಗಿದೆ.

ಜಾರ್ಖಂಡ್‌ನಲ್ಲಿ ಮೊದಲ ಹಂತದ ಮತದಾನ ನವೆಂಬರ್ 13, 2024 ಬುಧವಾರಂದು ನಡೆದಿದೆ.

ಎರಡೂ ರಾಜ್ಯಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಮಹಾರಾಷ್ಟ್ರದಲ್ಲಿ ಸಂಜೆ 6 ಗಂಟೆಗೆ ಮತ್ತು ಜಾರ್ಖಂಡ್‌ನಲ್ಲಿ 5 ಗಂಟೆಗೆ ಕೊನೆಗೊಳ್ಳಲಿದೆ. ಜಾರ್ಖಂಡ್‌ನ 31 ಬೂತ್‌ಗಳಲ್ಲಿ ಸಂಜೆ 4 ಗಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಒಟ್ಟು 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿ ಬಿಜೆಪಿ 149 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 59 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ಪ್ರತಿಪಕ್ಷ ಬಣ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಶರದ್ ಪವಾರ್) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಜಾರ್ಖಂಡ್‌ನಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯವನ್ನು ತಮ್ಮ ವಶಕ್ಕೆ ಪಡೆಯುವ ತವಕದಲ್ಲಿದೆ.

ಜಾರ್ಖಂಡ್‌ ವಿಧಾನಸಭೆಯ ಒಟ್ಟು 81 ಸ್ಥಾನಗಳಿಗೆ 528 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆಡಳಿತರೂಢ ಇಂಡಿಯಾ ಮೈತ್ರಿಕೂಟದಿಂದ ಜೆಎಂಎಂ 43, ಕಾಂಗ್ರೆಸ್ 30, ಆರ್‌ಜೆಡಿ 6 ಮತ್ತು ಸಿಪಿಐ(ಎಂಎಲ್) 4 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್‌ಡಿಎ ಮೈತ್ರಿಕೂಟದಿಂದ ಬಿಜೆಪಿ 68, ಮಿತ್ರಪಕ್ಷಗಳಾದ ಎಜೆಎಸ್‌ಯು 10, ಜೆಡಿಯು 2 ಮತ್ತು ಲೋಕ ಜನಶಕ್ತಿ (ರಾಮ್ ವಿಲಾಸ್) ಒಂದರಲ್ಲಿ ಸ್ಪರ್ಧೆ ಮಾಡಿದೆ.

ಎರಡೂ ರಾಜ್ಯಗಳ ಮತ ಎಣಿಕೆ ಶನಿವಾರ (ನ.23) ನಡೆಯಲಿದೆ.

ಇದನ್ನೂ ಓದಿ : ಛತ್ತೀಸ್‌ಗಢ | ಆದಿವಾಸಿ ಸಮುದಾಯದ ಸಂಘಟನೆಯನ್ನು ನಿಷೇಧಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...