Homeಕರ್ನಾಟಕಮಹಾರಾಷ್ಟ್ರ, ಜಾರ್ಖಂಡ್ ಫಲಿತಾಂಶ : ಮತ ಎಣಿಕೆ ಆರಂಭ

ಮಹಾರಾಷ್ಟ್ರ, ಜಾರ್ಖಂಡ್ ಫಲಿತಾಂಶ : ಮತ ಎಣಿಕೆ ಆರಂಭ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೂ ಇಂದೇ ಹೊರ ಬೀಳಲಿದೆ

- Advertisement -
- Advertisement -

ಬಹು ನಿರೀಕ್ಷಿತ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ಫಲಿತಾಂಶ ಇಂದು (ನ.23) ಪ್ರಕಟಗೊಳ್ಳಲಿದೆ. ಕರ್ನಾಟಕದ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣದ ಉಪಚುನಾವಣೆಯ ಮತ ಎಣಿಕೆಯೂ ಇಂದೇ ನಡೆಯಲಿದೆ.

ಈಗಾಗಲೇ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದ್ದು, ಬಳಿಕ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮತಗಳನ್ನು ಎಣಿಸಲಾಗುತ್ತದೆ.

ಮಹಾರಾಷ್ಟ್ರದಲ್ಲಿ ಆಡಳಿತರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟ ‘ಮಹಾಯುತಿ’ ಮತ್ತೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕೂಡ ಮಹಾಯುತಿಗೆ ಗೆಲುವಾಗಲಿದೆ ಎಂದಿವೆ.

ಮತ್ತೊಂದೆಡೆ ಪ್ರತಿಪಕ್ಷಗಳಾದ ಕಾಂಗ್ರೆಸ್‌, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಮತ್ತು ಎನ್‌ಸಿಪಿ (ಶರದ್‌ ಪವಾರ್ ಬಣ) ಮೈತ್ರಿಕೂಟ ‘ಮಹಾ ವಿಕಾಸ ಅಘಾಡಿ’ ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಒಟ್ಟು 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿ ಬಿಜೆಪಿ 149 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 59 ಸ್ಥಾನಗಳಲ್ಲಿ ಸ್ಪರ್ಧಿಸಿವೆ.

ಪ್ರತಿಪಕ್ಷ ಬಣ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಶರದ್ ಪವಾರ್) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಜಾರ್ಖಂಡ್‌ನಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಭರವಸೆಯಲ್ಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯವನ್ನು ತಮ್ಮ ವಶಕ್ಕೆ ಪಡೆಯುವ ನಿರೀಕ್ಷೆಯಲ್ಲಿದೆ.

ಇಲ್ಲಿ ಕೂಡ ಹೆಚ್ಚಿನ ಸಮೀಕ್ಷೆಗಳು ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸುವುದಾಗಿ ಹೇಳಿವೆ.

ಜಾರ್ಖಂಡ್‌ ವಿಧಾನಸಭೆಯ ಒಟ್ಟು 81 ಸ್ಥಾನಗಳಿಗೆ 528 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಆಡಳಿತರೂಢ ಇಂಡಿಯಾ ಮೈತ್ರಿಕೂಟದಿಂದ ಜೆಎಂಎಂ 43, ಕಾಂಗ್ರೆಸ್ 30, ಆರ್‌ಜೆಡಿ 6 ಮತ್ತು ಸಿಪಿಐ(ಎಂಎಲ್) 4 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಎನ್‌ಡಿಎ ಮೈತ್ರಿಕೂಟದಿಂದ ಬಿಜೆಪಿ 68, ಮಿತ್ರಪಕ್ಷಗಳಾದ ಎಜೆಎಸ್‌ಯು 10, ಜೆಡಿಯು 2 ಮತ್ತು ಲೋಕ ಜನಶಕ್ತಿ (ರಾಮ್ ವಿಲಾಸ್) ಒಂದರಲ್ಲಿ ಸ್ಪರ್ಧೆ ಮಾಡಿದೆ.

ರಾಜ್ಯದ ಮೂರು ಕ್ಷೇತ್ರಗಳ ಮತ ಎಣಿಕೆ ಇಂದು

ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸ್ಪರ್ಧೆ ಮಾಡಿದ್ದಾರೆ.

ಶಿಗ್ಗಾವಿಯಲ್ಲಿ ಕಾಂಗ್ರೆಸ್‌ನಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಮತ್ತು ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಸಿ.ಪಿ ಯೋಗೇಶ್ವರ್ ಮತ್ತು ಎನ್‌ಡಿಎ (ಬಿಜೆಪಿ-ಜೆಡಿಎಸ್‌ ಮೈತ್ರಿ) ಅಭ್ಯರ್ಥಿಯಾಗಿ ಮಾಜಿ ಸಿಎಂ ಹಾಗೂ ಹಾಲಿ ಕೇಂದ್ರ ಸಚಿವ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ಭವಿಷ್ಯ ಇಂದು ನಿರ್ಧಾರ

ರಾಹುಲ್ ಗಾಂಧಿಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ : ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ – ದೆಹಲಿ ಗವರ್ನರ್ ಸಕ್ಸೇನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...