Homeಮುಖಪುಟಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಾಬಲ್ಯ ಮೆರೆದ ಆಡಳಿತರೂಢ ಮೈತ್ರಿ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಾಬಲ್ಯ ಮೆರೆದ ಆಡಳಿತರೂಢ ಮೈತ್ರಿ

- Advertisement -
- Advertisement -

ಮಹಾರಾಷ್ಟ್ರದ ಆಡಳಿತರೂಢ ಮಹಾ ವಿಕಾಸ್ ಅಘಾಡಿ (MVS) ಮೈತ್ರಿ ಸರ್ಕಾರವು ರಾಜ್ಯದ ಚುನಾವಣಾ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಯು ರಾಜ್ಯದಲ್ಲಿ ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ರಾಜ್ಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ನಗರ ಸ್ಥಳೀಯ ಸಂಸ್ಥೆಗಳ 1,649 ಸ್ಥಾನಗಳಲ್ಲಿ, ಬಿಜೆಪಿ 384 ಸ್ಥಾನಗಳನ್ನು ಗಳಿಸಿದರೆ, ಎನ್‌ಸಿಪಿ 344 ಸ್ಥಾನಗಳನ್ನು, ಕಾಂಗ್ರೆಸ್ 316 ಮತ್ತು ಶಿವಸೇನೆ 284 ಸ್ಥಾನಗಳನ್ನು ಗೆದ್ದಿದೆ.

ಇದನ್ನೂ ಓದಿ:ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ‘ಮಹಾ ವಿಕಾಸ್ ಅಘಾಡಿ’ ಮೈತ್ರಿ ಕೂಟ ಒಟ್ಟು 944 ಸ್ಥಾನಗಳನ್ನು ಗಳಿಸಿದೆ ಎಂದು ಈ ಅಂಕಿ ಅಂಶ ಹೇಳಿದೆ. ಮೈತ್ರಿಕೂಟದಲ್ಲಿ ಎನ್‌ಸಿಪಿ ಅತಿ ಹೆಚ್ಚು ಲಾಭ ಗಳಿಸಿದರೆ, ಶಿವಸೇನೆ 284 ಸ್ಥಾನಗಳೊಂದಿಗೆ ತನ್ನ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಶಿವಸೇನೆಯವರಾಗಿದ್ದರೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಚುನಾವಣೆಯ ಮತ್ತೊಂದು ಗಮನಾರ್ಹ ವೈಶಿಷ್ಟ್ಯವೆಂದರೆ, ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಅವರ ಕ್ಷೇತ್ರವಾದ ಕರ್ಜಾತ್‌ನ 17 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಎನ್‌ಸಿಪಿ ಗೆದ್ದಿದೆ. ಬಿಜೆಪಿ ಪ್ರಾಬಲ್ಯದ್ದ ಈ ನಗರ ಸಂಸ್ಥೆಯಲ್ಲಿ ರೋಹಿತ್ ಪವಾರ್ ಅವರು ರಾಜಕೀಯ ಚಿತ್ರಣವನ್ನು ಬದಲಾಯಿಸಲು ನಿರಂತರ ಕೆಲಸ ಮಾಡಿದ್ದರು. ಇದೇ ರೀತಿ ಕವಠೆ-ಮಹಂಕಲ್‌ನ 17 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಎನ್‌ಸಿಪಿ ಗೆದ್ದುಕೊಂಡಿದೆ.

ಹಣ ಮತ್ತು ಅಧಿಕಾರದ ದುರುಪಯೋಗದ ಹೊರತಾಗಿಯೂ ಬಿಜೆಪಿಯು ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೊಮ್ಮೆ ನಂಬರ್ ಒನ್ ಪಕ್ಷವಾಗಿದೆ ಎಂದು ಅವರು ಹೇಳಿದ್ದಾರೆ. “ಜನರು ಮತ್ತೆ ಬಿಜೆಪಿಯ ಕೆಲಸ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪ್ರಬಲ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದಾರೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ಪತ್ನಿಗೆ ಅವಹೇಳನ: BJP ಐಟಿ ಸೆಲ್‌ ಸದಸ್ಯನ ಬಂಧನ

ಮಹಾ ವಿಕಾಸ್ ಅಘಾಡಿ ಮೈತ್ರಿಯು ಮತ್ತೊಮ್ಮೆ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದೆ ಎಂದು ಎನ್‌ಸಿಪಿ ವಕ್ತಾರ ಮತ್ತು ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. “ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವು ಮಹಾರಾಷ್ಟ್ರದ ಜನರು ಮಹಾ ವಿಕಾಸ್ ಅಘಾಡಿಯ ಪರವಾಗಿದ್ದಾರೆ ಎಂಬುದನ್ನು ನಿರೂಪಿಸುತ್ತದೆ. ಇದು ನಮ್ಮ ಒಳ್ಳೆಯ ಕೆಲಸಕ್ಕೆ ಸಿಕ್ಕ ರಶೀದಿಯಾಗಿದೆ” ಎಂದು ಮಲಿಕ್ ಪ್ರತಿಪಾದಿಸಿದ್ದಾರೆ.

ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮಾತನಾಡಿ, “ನಮ್ಮ ನಾಯಕತ್ವವು ನಿರಂತರವಾಗಿ ಸಾಮಾನ್ಯ ಜನರೊಂದಿಗೆ ಸಂವಾದ ನಡೆಸುತ್ತಿದೆ, ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ ಮತ್ತು ಜನಪರ ಕೆಲಸಗಳತ್ತ ಗಮನ ಹರಿಸುತ್ತಿದೆ” ಎಂದು ಹೇಳಿದ್ದಾರೆ. ಫಲಿತಾಂಶ ಖುಷಿ ತಂದಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಳೆ ಹೇಳಿದ್ದಾರೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...