Homeಮುಖಪುಟಮಹಾರಾಷ್ಟ್ರ | ಮಹಾಯುತಿ ಅಲೆಯ ನಡುವೆಯು ದಹಾನು ಕ್ಷೇತ್ರವನ್ನು 10ನೇ ಬಾರಿ ಗೆದ್ದ ಸಿಪಿಐ(ಎಂ)

ಮಹಾರಾಷ್ಟ್ರ | ಮಹಾಯುತಿ ಅಲೆಯ ನಡುವೆಯು ದಹಾನು ಕ್ಷೇತ್ರವನ್ನು 10ನೇ ಬಾರಿ ಗೆದ್ದ ಸಿಪಿಐ(ಎಂ)

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಪಾಲ್ಘರ್ ಜಿಲ್ಲೆಯ ದಹಾನು (ಪರಿಶಿಷ್ಟ ಪಂಗಡ ಮೀಸಲು) ವಿಧಾನಸಭಾ ಕ್ಷೇತ್ರವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಭ್ಯರ್ಥಿ ವಿನೋದ್ ನಿಕೋಲ್ 5,133 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರು ಬಿಜೆಪಿಯ ವಿನೋದ್ ಸುರೇಶ್ ಮೇಧಾ ಅವರನ್ನು 5,133 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ವಿಶೇಷವಾಗಿ ಸಿಪಿಐ(ಎಂ) ಈ ಕ್ಷೇತ್ರವನ್ನು 1978 ರಿಂದ 10 ನೇ ಬಾರಿಗೆ ಈ ಕ್ಷೇತ್ರವನ್ನು ಗೆದ್ದಿದೆ.

2009 ರಲ್ಲಿ ದಹಾನು (ST) ಕ್ಷೇತ್ರವನ್ನು ಪುನರ್‌ರಚಿಸಲಾಗಿದ್ದು, ಅದಕ್ಕೂ ಮೊದಲು ಕ್ಷೇತ್ರವನ್ನು ಜವಾಹರ್ (ST) ಎಂದು ಕರೆಯಲಾಗುತ್ತಿತ್ತು. ಮಹಾಯುತಿ ಅಲೆಯ ನಡುವೆಯೂ ದಹನು ಕ್ಷೇತ್ರವನ್ನು ಎಲ್ಲಾ ಅಡೆತಡೆಗಳನ್ನು ಮೀರಿ ಸಿಪಿಐ(ಎಂ) ಗೆದ್ದಿರುವುದು ಗಮನಾರ್ಹ ಸಾಧನೆಯಾಗಿದೆ ಎಂದು ಸಿಪಿಐ(ಎಂ) ನಾಯಕ ಅಶೋಕ್ ಧಾವಳೆ ಹೇಳಿದ್ದಾರೆ. ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಶ್ರೇಯವು ದಹಾನು ಮತ್ತು ತಲಾಸರಿ ತಹಸಿಲ್‌ಗಳ ಜನರು ಮತ್ತು ವಿವಿಧ ಎಡಪಂಥೀಯ ಸಂಘಟನೆಗಳ ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಸಿಪಿಐ(ಎಂ) ವಿರೋಧ ಪಕ್ಷವಾದ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ)ಯ ಮಹಾ ವಿಕಾಸ್ ಅಘಾಡಿಯ ಭಾಗವಾಗಿ ಸ್ಪರ್ಧಿಸಿತ್ತು. ಮಹರಾಷ್ಟ್ರದಲ್ಲಿ ಸಿಪಿಐ(ಎಂ) ತಾನು ಸ್ಪರ್ಧಿಸಿದ್ದ ಒಟ್ಟು ಮೂರು ಕ್ಷೇತ್ರಗಳಲ್ಲಿ 1 ಕ್ಷೇತ್ರವನ್ನು ಗೆಲ್ಲಲು ಯಶಸ್ವಿಯಾಗಿದೆ.

ಶನಿವಾರ ನಡೆದ ಮಹಾರಾಷ್ಟ್ರ ಚುನಾವಣೆಯ ಎಣಿಕೆಯಲ್ಲಿ ರಾಜ್ಯದ ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಅದರಲ್ಲಿ ಬಿಜೆಪಿ 133 ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದು, ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಕ್ಷೇತ್ರಗಳಲ್ಲಿ ಗೆದ್ದಿದೆ. ಉಳಿದಂತೆ ಮೈತ್ರಿಯ ಭಾಗವಾಗಿದ್ದ ಜೆಎಸ್‌ಎಸ್‌ 2 ಕ್ಷೇತ್ರಗಳಲ್ಲಿ ಹಾಗೂ ಆರ್ವೈಎಸ್‌ಪಿ ಮತ್ತು ಆರ್‌ಎಸ್‌ವಿಎ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ವಿಪಕ್ಷಗಳ ಮಹಾ ವಿಕಾಸ್ ಅಘಾಡಿಗೆ ಚುನಾವಣಾ ಫಲಿತಾಂಶವೂ ಭಾರಿ ಅಘಾತ ನೀಡಿದೆ. ಮೈತ್ರಿಯು ಒಟ್ಟು 49 ಕ್ಷೇತ್ರಗಳನ್ನಷ್ಟೆ ಗೆಲ್ಲಲು ಸಫಲವಾಗಿದೆ. ಅದರಲ್ಲಿ ಮೈತ್ರಿಯ ಭಾಗವಾಗಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20 ಕ್ಷೇತ್ರಗಳನ್ನು ಗೆದ್ದಿದ್ದು, ಕಾಂಗ್ರೆಸ್ 15 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಉಳಿದಂತೆ ಮೈತ್ರಿಯ ಸಣ್ಣ ಪಕ್ಷಗಳಾದ ಎಸ್‌ಪಿ 2 ಕ್ಷೇತ್ರಗಳನ್ನು ಗೆದ್ದರೆ, ಸಿಪಿಐ(ಎಂ) ಮತ್ತು ಪಿಡಬ್ಲ್ಯೂಪಿಐ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಉಳಿದಂತೆ ISLAM, AIMIM, RSPS ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿದ್ದಾರೆ.

ಇದನ್ನೂ ಓದಿ: ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ದೇವೇಂದ್ರ ಫಡ್ನವಿಸ್-ಏಕನಾಥ್ ಶಿಂಧೆ ನಡುವೆ ಪೈಪೋಟಿ; ‘ಮಹಾಯುತಿ’ಯಲ್ಲಿ ಮುಖ್ಯಮಂತ್ರಿ ಹುದ್ದೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...