Homeಮುಖಪುಟ'ಕೇರಳ ಮಿನಿ ಪಾಕಿಸ್ತಾನ' ಎಂದ ಮಹಾರಾಷ್ಟ್ರದ ಸಚಿವ : ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

‘ಕೇರಳ ಮಿನಿ ಪಾಕಿಸ್ತಾನ’ ಎಂದ ಮಹಾರಾಷ್ಟ್ರದ ಸಚಿವ : ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

- Advertisement -
- Advertisement -

“ಕೇರಳದ ಪರಿಸ್ಥಿತಿ ಪಾಕಿಸ್ತಾನದಂತಿದೆ. ಈ ಕಾರಣಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಲ್ಲಿಂದ ಗೆದ್ದು ಬರುತ್ತಿದ್ದಾರೆ. ಅವರಿಗೆ ಭಯೋತ್ಪಾದಕ ಸಂಘಟನೆಗಳ ಬೆಂಬಲವಿದೆ” ಎಂದು ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಸರ್ಕಾರದ ಮೀನುಗಾರಿಕಾ ಮತ್ತು ಬಂದರು ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೋಮವಾರ (ಡಿ.30) ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಆಯೋಜಿಸಿದ್ದ ಅಫ್ಝಲ್‌ಖಾನ್ ವಿರುದ್ದದ ಶಿವಾಜಿಯ ಗೆಲುವಿನ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಿತೇಶ್ ರಾಣೆ ಮೇಲಿನ ಮಾತುಗಳನ್ನಾಡಿದ್ದಾರೆ.

ತನ್ನ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ನಿತೇಶ್ ರಾಣೆ,
“ಕೇರಳ ಕೂಡ ನಮ್ಮ ದೇಶದ ಭಾಗವೇ ಹೌದು. ಅಲ್ಲಿ ಹಿಂದೂಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದಕ್ಕೆ ಎಲ್ಲರೂ ಆತಂಕಪಡಬೇಕು. ಕ್ರೈಸ್ತ ಹಾಗೂ ಮುಸ್ಲಿಂ ಧರ್ಮಗಳಿಗೆ ಅಲ್ಲಿ ನಿತ್ಯ ಮತಾಂತರ ಮಾಡಲಾಗುತ್ತಿದೆ. ಲವ್ ಜಿಹಾದ್ ಪ್ರಕರಣಗಳೂ ಹೆಚ್ಚಾಗುತ್ತಿವೆ. ಪಾಕಿಸ್ತಾನದಲ್ಲಿ ಹಿಂದೂಗಳ ವಿಷಯದಲ್ಲಿ ಹೇಗೆ ವರ್ತಿಸುತ್ತಿದ್ದಾರೆಯೋ ಅದೇ ಪರಿಸ್ಥಿತಿ ಮುಂದೆ ಕೇರಳದಲ್ಲಿ ಉದ್ಭವಿಸಲಿದೆ ಎಂಬ ಅರ್ಥದಲ್ಲಿ ನಾನು ಮಾತನಾಡಿದ್ದೆ. ನಾನು ಹೇಳಿರುವುದನ್ನು ಸುಳ್ಳು ಎಂದು ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಸಾಬೀತುಪಡಿಸಲಿ” ಎಂದಿದ್ದಾರೆ.

ಮುಂದುವರಿದು, “ಕೇರಳ ಮಿನಿ ಪಾಕಿಸ್ತಾನ. ಆದ್ದರಿಂದಲೇ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿ ಚುನಾಯಿತರಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ನೀಡಿದ್ದಾರೆ. ಇದು ಸತ್ಯ; ನೀವು ಬೇಕಾದರೆ ಕೇಳಬಹುದು. ಭಯೋತ್ಪಾದಕರನ್ನು ತಮ್ಮ ಜೊತೆ ಕರೆದುಕೊಂಡು ಹೋದ ಬಳಿಕ ರಾಹುಲ್ ಮತ್ತು ಪ್ರಿಯಾಂಕಾ ಸಂಸದರಾದರು” ಎಂದು ರಾಣೆ ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್ ಖಂಡನೆ 

ನಿತೇಶ್ ರಾಣೆ ಹೇಳಿಕೆಯನ್ನು ಖಂಡಿಸಿರುವ ಮಹಾರಾಷ್ಟ್ರದ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ರಾಣೆ ಸಂಪುಟದ ಭಾಗವಾಗಿ ಉಳಿಯುವ ಅಗತ್ಯವೇನಿದೆ? ಈ ರೀತಿಯ ಹೇಳಿಕೆ ಕೊಡುವುದೇ ಅವರ ಕೆಲಸವಾಗಿಬಿಟ್ಟಿದೆ” ಎಂದಿದ್ದಾರೆ.

ನಿತೇಶ್ ರಾಣೆ ಹೇಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಬೇಕು. ರಾಣೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ ವೇಣುಗೋಪಾಲ್ ಆಗ್ರಹಿಸಿದ್ದಾರೆ.

2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಂಕಾವತಿ ಕ್ಷೇತ್ರದಿಂದ ನಿತೇಶ್ ರಾಣೆ ಜಯಗಳಿಸಿದ್ದು, ನೂತನ ಸಂಪುಟದಲ್ಲಿ ಅವರಿಗೆ ಮೀನುಗಾರಿಕೆ ಹಾಗೂ ಬಂದರು ಖಾತೆಯನ್ನು ನೀಡಲಾಗಿದೆ.

ಇದನ್ನೂ ಓದಿ : ಸಿಎಂ ಆದಿತ್ಯನಾಥ್ ಮನೆಯ ಅಡಿಯಲ್ಲಿ ಶಿವಲಿಂಗ – ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...