Homeಮುಖಪುಟಮಹಾರಾಷ್ಟ್ರ ಸಚಿವರಿಗೆ ಬೆದರಿಕೆ; ಮರಾಠ ಮೀಸಲಾತಿ ಹೋರಾಟಗಾರನ ವಿರುದ್ಧ ಎಫ್‌ಐಆರ್

ಮಹಾರಾಷ್ಟ್ರ ಸಚಿವರಿಗೆ ಬೆದರಿಕೆ; ಮರಾಠ ಮೀಸಲಾತಿ ಹೋರಾಟಗಾರನ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಪಂಚ್‌ನ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದ ಸಚಿವ ಧನಂಜಯ್ ಮುಂಡೆ ಅವರಿಗೆ ಬೆದರಿಕೆಯೊಡ್ಡುವ ಹೇಳಿಕೆ ನೀಡಿರುವ ಆರೋಪದ ಮೇಲೆ ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ವಿರುದ್ಧ ಮಹಾರಾಷ್ಟ್ರ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜಾರಂಗೆ ಪಾಟೀಲ್ ಸಾಮಾಜ ದ್ರೋಹದ ಹೇಳಿಕೆಗಳನ್ನು ನೀಡಿದ್ದು, ವೈಷಮ್ಯವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಬೀಡ್‌ ಜಿಲ್ಲೆಯ ಪರ್ಲಿ ಪಟ್ಟಣದ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರ

ಶನಿವಾರ ಪರ್ಭಾನಿಯಲ್ಲಿ ನಡೆದ ರ‍್ಯಾಲಿಯಲ್ಲಿ ಜಾರಂಗೆ ಪಾಟೀಲ್ ಅವರು ಸರಪಂಚ್ ಸಂತೋಷ್ ದೇಶಮುಖ್ ಹತ್ಯೆಗೆ ಸಂಬಂಧಿಸಿದಂತೆ ಮುಂಡೆ ಅವರನ್ನು ಟೀಕಿಸಿದ್ದರು. ದೇಶಮುಖ್ ಅವರ ಕುಟುಂಬಕ್ಕೆ ಹಾನಿಯಾದರೆ ಮರಾಠ ಸಮುದಾಯವು ಮುಂಡೆಯನ್ನು ಮುಕ್ತವಾಗಿ ತಿರುಗಾಡಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪರ್ಲಿಯ ಶಾಸಕರಾದ ಮುಂಡೆ ಅವರು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಜಾರಂಗೆ ಪಾಟೀಲ್ ಅವರ ಹೇಳಿಕೆಯಿಂದ ಕೋಪಗೊಂಡಿರುವ ಮುಂಡೆ ಬೆಂಬಲಿಗರು ಜಾರಂಗೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದು, ಬೀಡ್‌ನ ಶಿವಾಜಿನಗರ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಬೀಡ್ ಜಿಲ್ಲೆಯ ವಿಂಡ್‌ಮಿಲ್ ಕಂಪನಿಯಿಂದ 2 ಕೋಟಿ ರೂ.ಗಳನ್ನು ಸುಲಿಗೆ ಮಾಡಲು ಕೆಲವು ವ್ಯಕ್ತಿಗಳು ನಡೆಸಿದ ಪ್ರಯತ್ನವನ್ನು ವಿರೋಧಿಸಿದ್ದಕ್ಕಾಗಿ ಮ್ಯಾಸಜೋಗ್ ಗ್ರಾಮದ ಸರಪಂಚ್ ದೇಶಮುಖ್ ಅವರನ್ನು ಡಿಸೆಂಬರ್ 9 ರಂದು ಅಪಹರಿಸಿ ಹತ್ಯೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಕೊಲೆಗೆ ಸಂಬಂಧಿಸಿ ಸುಲಿಗೆ ಪ್ರಕರಣದಲ್ಲಿ ಮುಂಡೆ ಸಹಚರ ವಾಲ್ಮಿಕ್ ಕರಾದ್ ಎಂಬಾತನನ್ನು ಬಂಧಿಸಲಾಗಿದೆ.

ದೇಶ್‌ಮುಖ್ ಮರಾಠಾ ಆಗಿದ್ದರಿಂದ ಮತ್ತು ಪ್ರಕರಣದಲ್ಲಿ ಆರೋಪಿಯಾಗಿರುವ ಹೆಚ್ಚಿನ ವ್ಯಕ್ತಿಗಳು ಬೀಡ್ ಪ್ರದೇಶದ ಪ್ರಬಲ ವಂಜರಿ ಸಮುದಾಯದವರಾದ್ದರಿಂದ ಪರಿಸ್ಥಿತಿಯು ಜಾತಿ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

ಇದನ್ನೂಓದಿ:  ಅಸೆಂಬ್ಲಿಯಿಂದ ಹೊರನಡೆದ ರಾಜ್ಯಪಾಲರ ನಡೆಯನ್ನು ‘ನಾಟಕ’ ಎಂದ ಡಿಎಂಕೆ; ಪ್ರತಿಭಟನೆಗೆ ನಿರ್ಧಾರ

ಅಸೆಂಬ್ಲಿಯಿಂದ ಹೊರನಡೆದ ರಾಜ್ಯಪಾಲರ ನಡೆಯನ್ನು ‘ನಾಟಕ’ ಎಂದ ಡಿಎಂಕೆ; ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...