Homeಮುಖಪುಟಮಹಾರಾಷ್ಟ್ರ: ಸಿಎಂ ಏಕನಾಥ್ ಶಿಂದೆ ಬಣ ಸೇರಿದ ಸಂಸದನಿಗೆ ವಂಚನೆ ಪ್ರಕರಣದಲ್ಲಿ ಕ್ಲೀನ್‌ ಚಿಟ್

ಮಹಾರಾಷ್ಟ್ರ: ಸಿಎಂ ಏಕನಾಥ್ ಶಿಂದೆ ಬಣ ಸೇರಿದ ಸಂಸದನಿಗೆ ವಂಚನೆ ಪ್ರಕರಣದಲ್ಲಿ ಕ್ಲೀನ್‌ ಚಿಟ್

- Advertisement -
- Advertisement -

ಮಹಾರಾಷ್ಟ್ರದ ಆಡಳಿತರೂಢ ಶಿವಸೇನೆ (ಸಿಎಂ ಏಕನಾಥ್ ಶಿಂದೆ ಬಣ) ಸೇರ್ಪಡೆಯಾದ ನಾಲ್ಕು ತಿಂಗಳ ಬಳಿಕ, ಹೋಟೆಲ್ ನಿರ್ಮಾಣಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಸಂಸದ ರವೀಂದ್ರ ವೈಕರ್ ಅವರಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಪ್ರಕರಣವು ಅಪೂರ್ಣ ಮಾಹಿತಿ ಹಾಗೂ ತಪ್ಪು ತಿಳುವಳಿಕೆಯನ್ನು ಆಧರಿಸಿತ್ತು ಎಂದು ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗವು ನ್ಯಾಯಾಲಯಕ್ಕೆ ತಿಳಿಸಿದೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿ) ಯ ಭಾಗವಾಗಿದ್ದ ಸಂಸದ ವೈಕರ್, ಕಳೆದ ಮಾರ್ಚ್‌ 10 ರಂದು ಶಿಂದೆ ಬಣ ಸೇರಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಭಾಗವಾಗಿರುವ ಸಿಎಂ ಶಿಂದೆ ಬಣದ ಶಿವಸೇನೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಮೈತ್ರಿ ಸರ್ಕಾರ ನಡೆಸುತ್ತಿದೆ.

2014ರ ಲೋಕಸಭೆ ಚುನಾವಣೆಯಗೆ ಶಿವಸೇನೆ (ಯುಬಿಟಿ) ಅಭ್ಯರ್ಥಿ ಅಮೋಲ್ ಕೀರ್ತಿಕರ್ ವಿರುದ್ದ ಮುಂಬೈ ವಾಯುವ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ವೈಕರ್ ಗೆಲುವು ದಾಖಲಿಸಿದ್ದರು. ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಅವರ ಗೆಲುವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ.

ಮುಂಬೈ ಮಹಾನಗರ ಪಾಲಿಕೆಯೊಂದಿಗಿನ ಒಡಂಬಡಿಕೆಯನ್ನು ಉಲ್ಲಂಘಿಸಿ, ಮುಂಬೈ ನಗರದ ಜೋಗೇಶ್ವರಿ ಪ್ರದೇಶದಲ್ಲಿ ಅಕ್ರಮವಾಗಿ ಹೋಟೆಲ್ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮುಂಬೈ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧ ವಿಭಾಗವು ವೈಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು. ವೈಕರ್‌ರೊಂದಿಗೆ ಅವರ ಪತ್ನಿ ಮನಿಷಾ ಹಾಗೂ ಸಹಚರರಾದ ಆಸೂ ನೆಹ್ಲಾನೈ, ರಾಜ್ ಲಾಲ್ ಚಂದಾನಿ, ಪೃಥ್ ಪಾಲ್ ಬೃಂದಾ ಹಾಗೂ ಅರುಣ್ ದುಬೆ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಮುಂಬೈ ಮಹಾನಗರ ಪಾಲಿಕೆಯ ಸಬ್ ಇಂಜಿನಿಯರ್ ಸಂತೋಷ್ ಮಾಂಡವ್ಕರ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ವಾಯ್ಕರ್ ವಿರುದ್ಧ ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿತ್ತು.

ಆರಂಭದಲ್ಲಿ ಮುಂಬೈನ ಆಝಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ನಂತರ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿತ್ತು.

ಮಹಾರಾಷ್ಟ್ರದ ಹಿಂದಿನ ಮಹಾ ವಿಕಾಸ್ ಅಘಾಡಿ ಸರ್ಕಾರ ಅಧಿಕಾರವಧಿಯಲ್ಲಿ ವೈಕರ್‌ಗೆ ಕ್ರೀಡಾ ಸೌಲಭ್ಯ ಸ್ಥಾಪಿಸಲು ಅನುಮತಿ ನೀಡಲಾಗಿತ್ತು. ಮಹಾ ವಿಕಾಸ್ ಅಘಾಡಿ ಒಕ್ಕೂಟ ಸರ್ಕಾರ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ಚಂದ್ರ ಪವಾರ್) ಅನ್ನು ಒಳಗೊಂಡಿತ್ತು.

ಇದನ್ನೂ ಓದಿ : ಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...