Homeಮುಖಪುಟ'ಉರ್ದು ಭಾರತಕ್ಕೆ ಅನ್ಯವಲ್ಲ' | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

‘ಉರ್ದು ಭಾರತಕ್ಕೆ ಅನ್ಯವಲ್ಲ’ | ಮಹಾರಾಷ್ಟ್ರ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆ ಎತ್ತಿಹಿಡಿದ ಸುಪ್ರೀಂಕೋರ್ಟ್

- Advertisement -
- Advertisement -

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ಪಟ್ಟಣದಲ್ಲಿರುವ ಪುರಸಭೆಯ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಉರ್ದು ಭಾಷೆಯ ವಿರುದ್ಧದ ಪೂರ್ವಾಗ್ರಹವು “ಉರ್ದು ಭಾರತಕ್ಕೆ ಅನ್ಯವಾಗಿದೆ ಎಂಬ ತಪ್ಪು ಕಲ್ಪನೆಯಿಂದ ಹುಟ್ಟಿಕೊಂಡಿದೆ” ಎಂದು ನ್ಯಾಯಾಲಯ ಹೇಳಿದೆ. ‘ಮಹಾರಾಷ್ಟ್ರ ಪುರಸಭೆಯ

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ಉರ್ದು ಭಾರತದಲ್ಲಿ ಹುಟ್ಟಿದ್ದು, ಮರಾಠಿ ಮತ್ತು ಹಿಂದಿಯಂತೆ ಅದು ಇಂಡೋ-ಆರ್ಯನ್ ಭಾಷೆಯಾಗಿದೆ ಎಂದು ಹೇಳಿದೆ.

“ವಿಭಿನ್ನ ಸಾಂಸ್ಕೃತಿಕ ಸಮುದಾಯಕ್ಕೆ ಸೇರಿದ ಜನರು ತಮ್ಮ ನಡುವೆ ಆಲೋಚನೆಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಸಂವಹನ ನಡೆಸಲು ಬಯಸುವ ಅಗತ್ಯದಿಂದಾಗಿ ಉರ್ದು ಭಾರತದಲ್ಲಿ ಅಭಿವೃದ್ಧಿ ಹೊಂದಿತು ಮತ್ತು ಪ್ರವರ್ಧಮಾನಕ್ಕೆ ಬಂದಿತು” ಎಂದು ನ್ಯಾಯಾಲಯ ಹೇಳಿದೆ.

ಪಾತೂರ್ ಪುರಸಭೆಯ ಹೊಸ ಕಟ್ಟಡದ ಸೈನ್‌ಬೋರ್ಡ್‌ನಲ್ಲಿ ಉರ್ದು ಬಳಕೆಯನ್ನು ಪ್ರಶ್ನಿಸಿದ್ದ ಮಾಜಿ ಕೌನ್ಸಿಲರ್ ವರ್ಷತಾಯಿ ಸಂಜಯ್ ಬಾಗಾಡೆ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಬಾಗಾಡೆ ಈ ಹಿಂದೆ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. 2021 ರಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್, ಮಹಾರಾಷ್ಟ್ರ ಸ್ಥಳೀಯ ಪ್ರಾಧಿಕಾರಗಳ ಅಧಿಕೃತ ಭಾಷಾ ಕಾಯ್ದೆ, 2022 ಅಥವಾ ಯಾವುದೇ ಇತರ ಕಾನೂನು ನಿಬಂಧನೆಯ ಅಡಿಯಲ್ಲಿ ಉರ್ದು ಬಳಸುವುದನ್ನು ನಿಷೇಧಿಸಲಾಗಿಲ್ಲ ಎಂದು ತೀರ್ಪು ನೀಡಿತ್ತು. ಅದರ ನಂತರ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಸುಪ್ರಿಂಕೋರ್ಟ್ ಮರಾಠಿ ಜೊತೆಗೆ ಉರ್ದು ಬಳಕೆಯನ್ನು ಸಹ ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು “ಭಾಷೆ ಧರ್ಮವಲ್ಲ, ಸಂಸ್ಕೃತಿ” ಎಂದು ಒತ್ತಿ ಹೇಳಿದೆ.

ಆಂಗ್ಲೋ-ಅಲ್ಜೀರಿಯಾದ ಲೇಖಕ ಮೌಲೌದ್ ಬೆನ್ಜಾಡಿ ಅವರ ಉಲ್ಲೇಖದೊಂದಿಗೆ ತೀರ್ಪನ್ನು ಪ್ರಾರಂಭಿಸಿದ ನ್ಯಾಯಮೂರ್ತಿ ಧುಲಿಯಾ ಅವರು, “ನೀವು ಒಂದು ಭಾಷೆಯನ್ನು ಕಲಿತಾಗ, ಹೊಸ ಭಾಷೆಯನ್ನು ಮಾತನಾಡಲು ಮತ್ತು ಬರೆಯಲು ಮಾತ್ರ ಕಲಿಯುವುದಿಲ್ಲ. ಬದಲಾಗಿ ನೀವು ಎಲ್ಲಾ ಮಾನವಕುಲದ ಬಗ್ಗೆ ಮುಕ್ತ ಮನಸ್ಸಿನವರು, ಉದಾರವಾದಿಗಳು, ಸಹಿಷ್ಣುಗಳು, ದಯೆ ಮತ್ತು ಪರಿಗಣನೆಯನ್ನು ಹೊಂದಲು ಕಲಿಯುತ್ತೀರಿ.” ಎಂದು ಹೇಳಿದ್ದಾರೆ.

“ಎರಡು ಭಾಷೆಗಳನ್ನು ಧರ್ಮದ ಆಧಾರದ ಮೇಲೆ ವಿಭಜಿಸಿದ ವಸಾಹತುಶಾಹಿ ಶಕ್ತಿಗಳ ಒಡಕು, ಹಿಂದಿಯನ್ನು ಹಿಂದೂಗಳ ಮತ್ತು ಉರ್ದು ಭಾಷೆಯನ್ನು ಮುಸ್ಲಿಮರ ಭಾಷೆ ಎಂದು ಅರ್ಥೈಸಲಾಯಿತು. ಇದು ವಾಸ್ತವವಾಗಿ ವೈವಿಧ್ಯತೆಯಲ್ಲಿ ಏಕತೆ; ಮತ್ತು ಸಾರ್ವತ್ರಿಕ ಸಹೋದರತ್ವದ ಪರಿಕಲ್ಪನೆ ಮೇಲಿನ ಶೋಷಣೆಯಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಮಹಾರಾಷ್ಟ್ರ ಪುರಸಭೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...