Homeಮುಖಪುಟಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

- Advertisement -
- Advertisement -

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು ಜನರ ಗುಂಪು ಮರದ ಕೋಲುಗಳು ಮತ್ತು ಹರಿತವಾದ ಆಯುಧಗಳನ್ನು ಹಿಡಿದು ಸ್ಥಳಕ್ಕೆ ಬಂದಿ ಹಲ್ಲೆ ನಡೆಸಿದ್ದಾರೆ. ಎಫ್‌ಐಆರ್ ಪ್ರಕಾರ, ಗುಂಪು ಸಭೆಯನ್ನು ಪ್ರಶ್ನಿಸಿ, ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ, ನಂತರ ಅಲ್ಲಿದ್ದ ಜನರ ಮೇಲೆ ಹಲ್ಲೆ ನಡೆಸಿದೆ.

ಪೊಲೀಸರು ಸುಮಾರು 100 ರಿಂದ 150 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾದ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಸೆಕ್ಷನ್ 118(1), 189(2), 190, 191(2), 191(3), 351(2), 351(3) ಮತ್ತು 352 ಸೇರಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳು ಸೇರಿವೆ.

ಘಟನೆಯಲ್ಲಿ ಯಾರು ಭಾಗಿಯಾಗಿದ್ದರು ಎಂದು ನಿರ್ಧರಿಸಲು ನಡೆಯುತ್ತಿರುವ ತನಿಖೆಯ ಭಾಗವಾಗಿ ತನಿಖಾಧಿಕಾರಿಗಳು ಕೆಲವು ಸ್ಥಳೀಯ ನಿವಾಸಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಪರಿಶೀಲನೆಯ ನಂತರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಪು ಸೇರಿದ್ದ ಸ್ಥಳವು ನಿರ್ಧಿಷ್ಟಪಡಿಸಿದ ಧಾರ್ಮಿಕ ಸ್ಥಳವಲ್ಲ ಎಂದು ಅಧಿಕಾರಿಗಳು ಗಮನಿಸಿದ್ದಾರೆ. ಹಿಂದಿನ ವರ್ಷಗಳಲ್ಲಿ ಇಫ್ತಾರ್‌ಗಾಗಿ ಅಲ್ಲಿ ಜನರು ಸೇರಿರುವುದನ್ನು ತಾವು ನೋಡಿಲ್ಲ ಎಂದು ಸ್ಥಳೀಯ ಗ್ರಾಮಸ್ಥರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ, ‘ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ’ದ (ಎಸ್‌ಡಿಪಿಐ) ಸ್ಥಳೀಯ ಕಾರ್ಯಕರ್ತರೊಬ್ಬರು, ಹಲ್ಲೆಯಲ್ಲಿ ಐದರಿಂದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ, ಶುಕ್ರವಾರ ಸಂಜೆ ಪುಣೆ ಜಿಲ್ಲೆಯ ಪುರಂದರ್ ತಾಲ್ಲೂಕಿನ ಓಸ್ಕರವಾಡಿ ಗ್ರಾಮದ ಸರೋವರದ ಬಳಿ ರಂಜಾನ್ ಸಮಯದಲ್ಲಿ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದುತ್ವ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ದಾಳಿಕೋರರು ಹಿಂದುತ್ವ ಕಾರ್ಯಕರ್ತರು ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಎಸ್‌ಡಿಪಿಐ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...