Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಆತಂಕ: ಒಂದು ವಾರ ನಾಗ್ಪುರ ಲಾಕ್‌ಡೌನ್

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಆತಂಕ: ಒಂದು ವಾರ ನಾಗ್ಪುರ ಲಾಕ್‌ಡೌನ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳಿಂದಾಗಿ ಮಹಾರಾಷ್ಟ್ರದ ನಾಗ್ಪುರವನ್ನು ಮಾರ್ಚ್ 15 ರಿಂದ ಮಾರ್ಚ್ 21 ರವರೆಗೆ ಒಂದು ವಾರ ಲಾಕ್ ಡೌನ್ ಮಾಡಿ ಸರ್ಕಾರ ಆದೇಶಿಸಿದೆ. ಅಗತ್ಯ ಸೇವೆಗಳಾದ ತರಕಾರಿ, ಹಣ್ಣಿನ ಅಂಗಡಿಗಳು ಮತ್ತು ಹಾಲಿನ ಡೈರಿಗಳು ಕಾರ್ಯನಿರ್ವಹಿಸಲಿವೆ.

ಮಹಾರಾಷ್ಟ್ರದಲ್ಲಿ ಸುಮಾರು ಒಂದು ತಿಂಗಳಿನಿಂದ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯದ ಹೆಚ್ಚಿನ ಭಾಗಗಳು ಲಾಕ್‌ಡೌನ್‌ಗೆ ಹೋಗಬಹುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ.

“ಮುಂಬರುವ ದಿನಗಳಲ್ಲಿ, ಮತ್ತಷ್ಟು ಸ್ಥಳಗಳಲ್ಲಿ ಲಾಕ್‌ಡೌನ್ ಅನಿವಾರ್ಯವಾಗಬಹುದು. ಮುಂದಿನ ಎರಡು ದಿನಗಳಲ್ಲಿ ನಾವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೋವಿಡ್ ವಿರೋಧಿ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ನಂತರ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ: ಅಮರಾವತಿ ಸಂಪೂರ್ಣ ಲಾಕ್‌ಡೌನ್

ನಾಗ್ಪುರ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಬರುವ ಎಲ್ಲ ಪ್ರದೇಶಗಳಲ್ಲಿಯೂ ಲಾಕ್ ಡೌನ್ ವಿಧಿಸಲಾಗಿದೆ.

ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಇಂದು ರಾತ್ರಿ 8 ರಿಂದ ಸೋಮವಾರ ಬೆಳಿಗ್ಗೆ 8 ರವರೆಗೆ ಮೂರು ದಿನಗಳ ಕಾಲ ‘ಜನತಾ ಕರ್ಫ್ಯೂ’ ವಿಧಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಈ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು.

ಮಹಾರಾಷ್ಟ್ರವು ದಿನನಿತ್ಯದ 13,659 ಹೊಸ ಕೊರೊನಾ ಪ್ರಕರಣಗಳನ್ನು ವರದಿ ಮಾಡುತ್ತಿದ್ದು, ಇದು ದೇಶದ ದೈನಂದಿನ ಹೊಸ ಪ್ರಕರಣಗಳಲ್ಲಿ ಸುಮಾರು 60% ಇದೆ. ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳ ರಾಜ್ಯದಲ್ಲಿ ಮಹಾರಾಷ್ಟ್ರ ಮುಂದಿದೆ.

ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಕರಣಗಳನ್ನು ತಡೆಯಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪ್ರತಿ ಜಿಲ್ಲೆಯ ಸ್ಥಳೀಯ ಆಡಳಿತಕ್ಕೆ ರಾತ್ರಿ ಕರ್ಫ್ಯೂಗಳು ಅಥವಾ ಭಾಗಶಃ ಲಾಕ್‌ಡೌನ್‌ಗಳು ಸೇರಿದಂತೆ ಕಠಿಣ ಕ್ರಮಗಳನ್ನು ಜನರ ಮೇಲೆ ಹೇರಲು ಕರೆ ನೀಡಿದ್ದರು. ರಾಜ್ಯದ ಆರೋಗ್ಯ ಇಲಾಖೆ ಕೊರೊನಾಗೆ ಸಂಬಂಧಿಸಿದಂತೆ  ಏಳು ಅಂಶಗಳ ಕ್ರಿಯಾ ಯೋಜನೆಯನ್ನು ಬುಧವಾರ ಮಂಡಿಸಿದೆ. ಕ್ರಿಯಾ ಯೋಜನೆಯಂತೆ ಕಾರ್ಯನಿರ್ವಹಿಸಲು ಎಲ್ಲಾ ಜಿಲ್ಲಾ ಆಡಳಿತಗಳಿಗೆ ತಿಳಿಸಲಾಗಿದೆ.

ಇತ್ತಿಚೆಗೆ ವಾಶಿಮ್ ಜಿಲ್ಲೆಯ ಶಾಲೆಯ ಒಂದೇ ಹಾಸ್ಟೆಲ್‌ನಲ್ಲಿ 225 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು.


ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಹಾಸ್ಟೇಲ್‌ನ 225 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...