Homeಮುಖಪುಟಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದವರು ಎಲ್ಲರಿಗೂ ಸೇರಿದಂತೆ ಇನ್ನು ಮುಂದೆ ಸರ್ಕಾರಿ ಕಚೇರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಜೀನ್ಸ್, ಟೀ ಶರ್ಟ್ ಮತ್ತು ಚಪ್ಪಲಿ ಧರಿಸದಂತೆ, ವಾರಕ್ಕೆ ಒಮ್ಮೆ ಖಾದಿ ಬಟ್ಟೆಗಳನ್ನು ಬಳಸುವಂತೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಆದೇಶಿಸಿದೆ.

ಈ ವಾರದ ಆರಂಭದಲ್ಲಿ, ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿತ್ತು. ಸರ್ಕಾರಿ ಉದ್ಯೋಗಿಗಳು ರಾಜ್ಯದ ಪ್ರತಿನಿಧಿಗಳಾಗಿದ್ದು, ಅವರು ಫಾರ್ಮಲ್ ಬಟ್ಟೆ ಧರಿಸದಿದ್ದರೇ ಜನರ ಮನಸ್ಸಿನಲ್ಲಿ ಸರ್ಕಾರದ ಕೆಟ್ಟ ಚಿತ್ರಣ  ಮೂಡಬಹುದು ಎಂಬ ಕಾರಣ ನೀಡಿದ್ದಾರೆ.

’ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು ಮತ್ತು ನೌಕರರು, ಅದರಲ್ಲೂ ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿ ಸಮಯದಲ್ಲಿ ಸರ್ಕಾರಿ ನೌಕರರಂತೆ ಸೂಕ್ತವಾದ ಬಟ್ಟೆಗಳನ್ನು ಧರಿಸುವುದಿಲ್ಲ. ಇದರ ಪರಿಣಾಮವಾಗಿ, ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಕೆಟ್ಟದಾಗಿರುತ್ತದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

“ಸರ್ಕಾರಿ ಅಧಿಕಾರಿಯ ಡ್ರೆಸ್ ಕೋಡ್ ಸೂಕ್ತವಲ್ಲದ, ಕಳಪೆ ಅಥವಾ ಅಶುದ್ಧವಾಗಿದ್ದರೆ ಅದು ಅವರ ಒಟ್ಟಾರೆ ಕೆಲಸದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ” ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶಪಾಂಡೆ ಸಹಿ ಮಾಡಿರುವ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

ಡ್ರೆಸ್ ಕೋಡ್ ಹೇಗಿರಬೇಕು..?

ಸರ್ಕಾರದ ಹೊಸ ಡ್ರೆಸ್ ಕೋಡ್ ಪ್ರಕಾರ, ಎಲ್ಲಾ ಮಹಿಳಾ ಉದ್ಯೋಗಿಗಳು ಸೀರೆಗಳು, ಚೂಡಿದಾರ್, ಕುರ್ತಾ,  ದುಪಟ್ಟಾ ಧರಿಸಬೇಕು. ಪುರುಷರು ಮತ್ತು ಮಹಿಳಾ ಉದ್ಯೋಗಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್, ಗಾಢ ಬಣ್ಣದ, ಮುದ್ರಿತ ಅಥವಾ ಕಸೂತಿ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಫಾರ್ಮಲ್ ಬೂಟುಗಳು, ಸ್ಯಾಂಡಲ್ಸ್‌ಗಳನ್ನು ಬಳಸಬೇಕು. ಲೈಟ್ ವೇಯ್ಟ್​​​ ಚಪ್ಪಲಿಗಳನ್ನು ಧರಿಸಬಾರದೆಂದು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಖಾದಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ, ಸರ್ಕಾರಿ ನೌಕರರು ವಾರಕ್ಕೆ ಒಮ್ಮೆಯಾದರೂ ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಲಾಗಿದೆ.

ಇತ್ತಿಚೆಗೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಬಸ್ ಕಂಡಕ್ಟರ್‌ಗಳು ಮತ್ತು ಟಿಕೆಟ್ ಇನ್ಸ್‌ಪೆಕ್ಟರ್‌ಗಳು ಶೀಘ್ರದಲ್ಲೇ ತಮ್ಮ ಸಮವಸ್ತ್ರದಲ್ಲಿ ಕ್ಯಾಮೆರಾ ಹೊಂದಿಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದರಿಂದ ಪ್ರಯಾಣ ಸಮಯದಲ್ಲಿ ಪ್ರಯಾಣಿಕರ ವರ್ತನೆ ಮತ್ತು ಇತರ ಚಟುವಟಿಕೆಗಳ ಬಗ್ಗೆ ಗಮನ ಇರಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿತ್ತು


ಇದನ್ನೂ ಓದಿ: ರೈತ ವಿರೋಧಿ ಮಸೂದೆಗಳಿಗೆ ಸಹಿ ಹಾಕಬಾರದು: ಹೋರಾಟನಿರತ ರೈತ ಮುಖಂಡರನ್ನು ಮಾತುಕತೆಗೆ ಕರೆದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...