Homeಮುಖಪುಟಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಮುಂದುವರಿದ ಹಾವು ಏಣಿ ಆಟ: ಬೆಂಬಲವಿಲ್ಲ ಎನ್ನುತ್ತಿದೆ ಕಾಂಗ್ರೆಸ್‌

ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಮುಂದುವರಿದ ಹಾವು ಏಣಿ ಆಟ: ಬೆಂಬಲವಿಲ್ಲ ಎನ್ನುತ್ತಿದೆ ಕಾಂಗ್ರೆಸ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಮೂಲಕ 11 ದಿನಗಳಿಮದ ನಡೆಯುತ್ತಿರುವ ಸರ್ಕಾರ ರಚನೆಯ ಸರ್ಕಸ್‌ ಇನ್ನು ಮುಂದುವರೆಯಲಿದ್ದು ಇನ್ನು ಮೂರು ದಿನದಲ್ಲಿ ಹೊ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಹೇರುವ ಭೀತಿ ಎದುರಾಗಿದೆ.

ಈ ಕುರಿತು ನಿನ್ನೆ ಎರಡು ಹೈ ಲೆವೆಲ್‌ ಸಭೆಗಳು ನಡೆದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿಲ್ಲ. ಹಾಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ ರವರು ಗೃಹಸಚಿವ ಅಮಿತ್‌ ಶಾರನ್ನು ಭೇಟಿಯಾಗಿದ್ದು ಮಾತುಕತೆ ನಡೆಸಿದ್ದಾರೆ. ಅಲ್ಲಿ ಅವರು ನಾವೇ ಸರ್ಕಾರ ರಚಿಸುತ್ತೇವೆಂಬ ವಿಶ್ವಾಸ ಹೊಂದಿದ್ದಾರೆ. ಆದರೆ ಮೈತ್ರಿ ಹೇಗೆ ಎಂಬ ಸ್ಪಷ್ಟನೆಯನ್ನು ನೀಡಿಲ್ಲ.

ಇನ್ನೊಂದೆಡೆ ಎನ್‌ಸಿಪಿ ಮುಖ್ಯಸ್ಥ ಶರಾದ್‌ ಪವಾರ್‌ರವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಧೀರ್ಘ ಸಮಾಲೋಚನೆ ನಡೆಸಿದ್ದಾರೆ. ಅಲ್ಲಿ ಬಿಜೆಪಿ ರಾಜ್ಯಕ್ಕೆ ಅಧಿಕಾರಕ್ಕೆ ಬರದಂತೆ ತಡೆಯಲು ಇಂತಹ ಮೈತ್ರಿಕೂಟದ ಅಗತ್ಯವಾಗಿದೆ ಎಂದು ಪವಾರ್‌ ಹೇಳಿದ್ದಾರೆ. ಆದರೆ ಅದಕ್ಕೆ ಸೋನಿಯಾ ಗಾಂಧಿಯವರು ಒಪ್ಪಿದಂತೆ ಕಾಣುತ್ತಿಲ್ಲ.

ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪವಾರ್‌ ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ನಡೆಸುವ ಅಗತ್ಯವಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಶಿವಸೇನೆ – ಬಿಜೆಪಿ ಜಗಳವು ಅವರ “ಆಂತರಿಕ ವಿಷಯ”ವಾಗಿದೆ. ನಾವು ಶಿವಸೇಗೆ ಯಾವುದೇ ಭರವಸೆ ನೀಡಿಲ್ಲ ಎಂದಿದ್ದಾರೆ.

ಇನ್ನು ಶಿವಸೇನೆ ಪಕ್ಷದ ಹಿರಿಯ ಮುಖಂಡ ಸಂಜಯ್ ರಾವತ್‌ ಅವರು ಸೋಮವಾರ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಲ್ಲದೇ ಸರ್ಕಾರ ರಚಿಸುವ ಹೊಣೆಗಾರಿಕೆ ಬಿಜೆಪಿಯದ್ದು ಎಂದು ತಿಳಿಸಿದ್ದಾರೆ. “ಯಾರು ಜನಾದೇಶವನ್ನು ಹೊಂದಿದ್ದಾರೆ, ಅವರು ಸರ್ಕಾರ ರಚಿಸುತ್ತಾರೆ. ನಾನು ರಾಜ್ಯಪಾಲರಿಗೆ ಸಲಹೆ ನೀಡಲು ಸಾಧ್ಯವಿಲ್ಲ. ಅವರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಅವರು ನುಡಿದಿದ್ದಾರೆ.

ಇನ್ನು ಕಾಂಗ್ರೆಸ್‌ ಪಕ್ಷದ ರಾಜ್ಯ ನಾಯಕರಲ್ಲಿ ಒಂದು ಭಾಗವು ಮೈತ್ರಿಯ ಪರವಾಗಿದೆ ಎಂದು ಹೇಳಲಾಗಿದೆ. ಆದರೆ ಪವಾರ್ ಅವರ ಸಲಹೆಗಳಿಗೆ ಸೋನಿಯಾಗಾಂಧಿಯವರು ಒಪ್ಪದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಭಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...