Homeಮುಖಪುಟಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿಯ ಮೃತದೇಹಗಳು ಪತ್ತೆ, ತನಿಖೆ ಆರಂಭ

- Advertisement -
- Advertisement -

ಒಂದೇ ಕುಟುಂಬದ ಒಂಬತ್ತು ಮಂದಿ ಸದಸ್ಯರು ತಮ್ಮದೇ ಮನೆಯಲ್ಲಿ ಮೃತದೇಹಗಳಾಗಿ ಪತ್ತೆಯಾಗಿರುವ ಆತಂಕಕಾರಿ ಘಟನೆಯೊಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಹೈಸಾಲ್‌ನಲ್ಲಿರುವ ಮನೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ. ಮೃತ ವ್ಯಕ್ತಿಗಳ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ವಿಷ ಸೇವನೆಯಿಂದ ಸಾವು ಸಂಭವಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ.

“ಮೀರಜ್ ತಾಲೂಕಿನ ಮಹೈಸಾಲ್ ಪಟ್ಟಣದ ಮಾಣಿಕ್ ವಾನ್ಮೋರ್ ಅವರ ನಿವಾಸದಲ್ಲಿ ಸೋಮವಾರ ಮಧ್ಯಾಹ್ನ ಶವಗಳು ಪತ್ತೆಯಾಗಿವೆ. ಒಂದು ಮನೆಯಲ್ಲಿ ಒಂಬತ್ತು ಶವಗಳನ್ನು ಕಂಡುಕೊಂಡಿದ್ದೇವೆ. ಮೂರು ಶವಗಳು ಒಂದೇ ಸ್ಥಳದಲ್ಲಿ ಕಂಡುಬಂದರೆ, ಉಳಿದ ಆರು ಮೃತದೇಹಗಳು ಮನೆಯ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿವೆ” ಎಂದು ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಝೊಮಾಟೊ ಫುಡ್ ಡೆಲಿವರಿ ಯುವಕನಿಗೆ ಜಾತಿ ನಿಂದನೆ, ಹಲ್ಲೆ; FIR ದಾಖಲು

“ಪ್ರಾಥಮಿಕ ತನಿಖೆಯು ಯಾವುದೇ ಮೃತದೇಹಗಳ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ಸೂಚಿಸುತ್ತದೆ. ಅವರ ಎಲ್ಲಾ ಸಾವಿಗೆ ವಿಷಕಾರಿ ಆಹಾರ ಕಾರಣವೆಂದು ತೋರುತ್ತದೆ. ಇದು ಆಕಸ್ಮಿಕವಾಗಿ ಸಂಭವಿಸಿದೆಯೇ ಅಥವಾ ಆತ್ಮಹತ್ಯೆ ಮಾಡಿಕೊಳ್ಳಲು ವಿಷ ತೆಗೆದುಕೊಂಡಿದ್ದಾರೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ” ಎಂದು ವಿಶೇಷ ಪೊಲೀಸ್ ಮಹಾನಿರೀಕ್ಷಕ (ಕೊಲ್ಹಾಪುರ ವ್ಯಾಪ್ತಿ) ಮನೋಜ್‌ಕುಮಾರ್ ಲೋಹಿಯಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳಕ್ಕೆ ಪ್ರಯೋಗಾಲಯದ ತಂಡ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ತಂಡಗಳು ಬಂದು ಪರಿಶೀಲನೆ ನಡೆಸಿವೆ. ಸಾಂಗ್ಲಿ ಪೊಲೀಸ್‌ನ ಅಪರಾಧ ವಿಭಾಗದ ಅಧಿಕಾರಿಗಳು ತನಿಖೆಯನ್ನು ಕೈಗೊಳ್ಳಲಿದ್ದಾರೆ.


ಇದನ್ನೂ ಓದಿ: ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...