ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ರಾಜ್ಯದ ವಿರೋಧ ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ ನವೆಂಬರ್ 6 ರಂದು ತನ್ನ ಪ್ರಚಾರವನ್ನು ಪ್ರಾರಂಭಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದ್ದಾರೆ. ಈ ಅಭಿಯಾನವನ್ನು ನಾನು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮುನ್ನಡೆಸಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರಿಗೆ ದೀಪಾವಳಿ ಶುಭಾಶಯಗಳನ್ನು ತಿಳಿಸುತ್ತಾ, ರಾಜ್ಯದ ಜನರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕೆಲವು ಕ್ಷೇತ್ರಗಳಲ್ಲಿ ಮೈತ್ರಿಯ ಪಕ್ಷಗಳಾದ ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ನಡುವಿನ ಸೌಹಾರ್ದ ಹೋರಾಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮಿತ್ರಪಕ್ಷಗಳ ನಡುವೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಕ್ಷೇತ್ರಗಳು ಕೇವಲ 10-12 ಮಾತ್ರ ಇದೆ. ಇನ್ನೆರಡು ದಿನಗಳಲ್ಲಿ ಪರಿಹಾರ ಕಂಡುಕೊಂಡು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ
ಮಹಾ ವಿಕಾಸ್ ಅಘಾಡಿ ಮೈತ್ರಿಯು ರಾಜ್ಯದ ಜನರಿಗೆ ಅವರ ಬೆಂಬಲವನ್ನು ಪಡೆಯಲು “ಕಾರ್ಯಕ್ರಮ” ನೀಡುತ್ತದೆ ಎಂದು ಅವರು ಹೇಳಿದ್ದಾರೆ. ತಾನು, ರಾಹುಲ್ ಗಾಂಧಿ ಮತ್ತು ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಾಗುವುದು ಎಂದು ಶರದ್ ಪವಾರ್ ಹೇಳಿದ್ದಾರೆ.
ನವೆಂಬರ್ 6 ರಂದು ಮುಂಬೈನಲ್ಲಿ ಮಹಾ ವಿಕಾಸ್ ಅಘಾಡಿ ಜಂಟಿ ರ್ಯಾಲಿಯನ್ನು ನಡೆಸಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಬುಧವಾರ ಹೇಳಿದ್ದಾರೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್ 103 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಶಿವಸೇನೆ(ಯುಬಿಟಿ) 89 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಮತ್ತು NCP (SP) ಗೆ 87 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
ಮಹಾ ವಿಕಾಸ್ ಅಘಾಡಿಯ ಇತರ ಮಿತ್ರಪಕ್ಷಗಳು ಆರು ಸ್ಥಾನಗಳಲ್ಲಿ ಕಣದಲ್ಲಿದ್ದರೂ, ಮೂರು ವಿಧಾನಸಭಾ ಕ್ಷೇತ್ರಗಳ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಮಹಾರಾಷ್ಟ್ರದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು


