Homeಮುಖಪುಟಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ

ಮಹಾರಾಷ್ಟ್ರ | ನವೆಂಬರ್ 6 ರಂದು ಚುನಾವಣಾ ಪ್ರಚಾರ ಪ್ರಾರಂಭಿಸಲಿರುವ ಎಂವಿಎ

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ರಾಜ್ಯದ ವಿರೋಧ ಪಕ್ಷಗಳ ಮೈತ್ರಿ ಮಹಾ ವಿಕಾಸ್ ಅಘಾಡಿ ನವೆಂಬರ್ 6 ರಂದು ತನ್ನ ಪ್ರಚಾರವನ್ನು ಪ್ರಾರಂಭಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದ್ದಾರೆ. ಈ ಅಭಿಯಾನವನ್ನು ನಾನು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮುನ್ನಡೆಸಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ.

ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರಿಗೆ ದೀಪಾವಳಿ ಶುಭಾಶಯಗಳನ್ನು ತಿಳಿಸುತ್ತಾ, ರಾಜ್ಯದ ಜನರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೆಲವು ಕ್ಷೇತ್ರಗಳಲ್ಲಿ ಮೈತ್ರಿಯ ಪಕ್ಷಗಳಾದ ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ನಡುವಿನ ಸೌಹಾರ್ದ ಹೋರಾಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮಿತ್ರಪಕ್ಷಗಳ ನಡುವೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ಕ್ಷೇತ್ರಗಳು ಕೇವಲ 10-12 ಮಾತ್ರ ಇದೆ. ಇನ್ನೆರಡು ದಿನಗಳಲ್ಲಿ ಪರಿಹಾರ ಕಂಡುಕೊಂಡು ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ

ಮಹಾ ವಿಕಾಸ್ ಅಘಾಡಿ ಮೈತ್ರಿಯು ರಾಜ್ಯದ ಜನರಿಗೆ ಅವರ ಬೆಂಬಲವನ್ನು ಪಡೆಯಲು “ಕಾರ್ಯಕ್ರಮ” ನೀಡುತ್ತದೆ ಎಂದು ಅವರು ಹೇಳಿದ್ದಾರೆ. ತಾನು, ರಾಹುಲ್ ಗಾಂಧಿ ಮತ್ತು ಉದ್ಧವ್ ಠಾಕ್ರೆ ಅವರ ಸಮ್ಮುಖದಲ್ಲಿ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಾಗುವುದು ಎಂದು ಶರದ್ ಪವಾರ್ ಹೇಳಿದ್ದಾರೆ.

ನವೆಂಬರ್ 6 ರಂದು ಮುಂಬೈನಲ್ಲಿ ಮಹಾ ವಿಕಾಸ್ ಅಘಾಡಿ ಜಂಟಿ ರ್ಯಾಲಿಯನ್ನು ನಡೆಸಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಬುಧವಾರ ಹೇಳಿದ್ದಾರೆ. ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್ 103 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಶಿವಸೇನೆ(ಯುಬಿಟಿ) 89 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಮತ್ತು NCP (SP) ಗೆ 87 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

ಮಹಾ ವಿಕಾಸ್ ಅಘಾಡಿಯ ಇತರ ಮಿತ್ರಪಕ್ಷಗಳು ಆರು ಸ್ಥಾನಗಳಲ್ಲಿ ಕಣದಲ್ಲಿದ್ದರೂ, ಮೂರು ವಿಧಾನಸಭಾ ಕ್ಷೇತ್ರಗಳ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಮಹಾರಾಷ್ಟ್ರದ ಒಟ್ಟು 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...