Homeಮುಖಪುಟಮಹಾರಾಷ್ಟ್ರ | ಇವಿಎಂ ತಿರುಚಿದ ಆರೋಪ : ಪ್ರಮಾಣವಚನ ಸಮಾರಂಭ ಬಹಿಷ್ಕರಿಸಿದ ವಿಪಕ್ಷ ಶಾಸಕರು

ಮಹಾರಾಷ್ಟ್ರ | ಇವಿಎಂ ತಿರುಚಿದ ಆರೋಪ : ಪ್ರಮಾಣವಚನ ಸಮಾರಂಭ ಬಹಿಷ್ಕರಿಸಿದ ವಿಪಕ್ಷ ಶಾಸಕರು

- Advertisement -
- Advertisement -

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ಏಕನಾಥ್ ಶಿಂದೆ ವಿಧಾನಸಭೆಯ ಸದಸ್ಯರಾಗಿ ಇಂದು (ಡಿ.7) ಪ್ರಮಾಣವಚನ ಸ್ವೀಕರಿಸಿದರು. ಇವಿಎಂ ತಿರುಚಿದ ಆರೋಪ ಮಾಡಿರುವ ಪ್ರತಿಪಕ್ಷ ನಾಯಕರು ಈ ಕಾರ್ಯಕ್ರಮ (ಕಲಾಪ) ಬಹಿಷ್ಕರಿಸಿದರು.

ಮೂರು ದಿನಗಳ ವಿಶೇಷ ಕಲಾಪದ ಮೊದಲ ದಿನವಾದ ಇಂದು, ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಕಾಳಿದಾಸ್ ಕೊಳಂಬಕರ್, ಆರಂಭದಲ್ಲಿ ಮೂವರು ನಾಯಕರಿಗೆ ಪ್ರಮಾಣವಚನ ಬೋಧಿಸಿದರು. ನಂತರ ಉಳಿದವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ತಿರುಚಲಾಗಿದೆ. ಈ ಮೂಲಕ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಎಂವಿಎ ನಾಯಕರು ಕಲಾಪ ಬಹಿಷ್ಕರಿಸಿದರು.

ಈ ಕುರಿತು ಮಾತನಾಡಿರುವ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, “ವಿಶೇಷ ಕಲಾಪದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಂವಿಎ ಪಕ್ಷಗಳ ಚುನಾಯಿತ ಪ್ರತಿನಿಧಿಗಳು ಯಾರೂ ಭಾಗವಹಿಸುವುದಿಲ್ಲ ಎಂದಿದ್ದಾರೆ.

ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಜನಾದೇಶವಾಗಿದ್ದರೆ ಜನರು ಸಂಭ್ರಮಿಸುತ್ತಿದ್ದರು. ಆದರೆ, ಜನರು ಸಂಭ್ರಮಿಸುವುದು ಎಲ್ಲೂ ಕಾಣುತ್ತಿಲ್ಲ. ನಮಗೆ ಇವಿಎಂ ಮೇಲೆ ಅನುಮಾನವಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಕೂಡ “ನಮ್ಮ ಚುನಾಯಿತು ಪ್ರತಿನಿಧಿಗಳು ಕಲಾಪ ಬಹಿಷ್ಕರಿಸಿದ್ದಾರೆ” ಎಂದು ಹೇಳಿದ್ದು, ಸರ್ಕಾರ ಅನ್ಯಾಯ ಎಸಗುವ ಮೂಲಕ ಎನ್‌ಡಿಎ ಚುನಾವಣೆ ಗೆದ್ದಿದೆ ಎಂದು ಆರೋಪಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆ ಜನರಿಗೆ ಅರ್ಥವೇ ಅಗಿಲ್ಲ. ಮರ್ಕಡವಾಡಿಯಲ್ಲಿ ಗ್ರಾಮಸ್ಥರು ಚುನಾವಣಾ ಆಯೋಗದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿ ಖಾಸಗಿ ಚುನಾವಣೆ ನಡೆಸಲು ಮುಂದಾಗಿರುವುದು ಇಡೀ ಮಹಾರಾಷ್ಟ್ರದ ಭಾವನೆಯಾಗಿದೆ. ಚುನಾವಣಾ ಆಯೋಗ ಖಾಸಗಿ ಮತದಾನಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸರ್ಕಾರ ಅನ್ಯಾಯ ಮಾಡಿದೆ ಎಂದರ್ಥ. ಆದ್ದರಿಂದ ನಮ್ಮ ಪ್ರತಿಭಟನೆ ವ್ಯಕ್ತಪಡಿಸಲು ನಾವು ಕಲಾಪ ಬಹಿಷ್ಕರಿಸಿದ್ದೇವೆ” ಎಂದು ನಾನಾ ಪಟೋಲೆ ಹೇಳಿದ್ದಾರೆ.

ನವೆಂಬರ್ 20ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನದ ಫಲಿತಾಂಶ ನ.20ರಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ : ಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...