Homeಮುಖಪುಟಮಹಾರಾಷ್ಟ್ರ: ಒಂದು ವರ್ಷದಲ್ಲಿ ಶಾಲೆಯಿಂದ ಹೊರಗುಳಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

ಮಹಾರಾಷ್ಟ್ರ: ಒಂದು ವರ್ಷದಲ್ಲಿ ಶಾಲೆಯಿಂದ ಹೊರಗುಳಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾಗಿದ್ದಾರೆ. 10ನೇ ತರಗತಿಗೆ ಸೇರಲು ಅರ್ಜಿ ತುಂಬಿರುವ ವಿದ್ಯಾರ್ಥಿಗಳು ಮತ್ತು ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಹೋಲಿಕೆ ಮಾಡಿದರೇ ಎರಡು ಲಕ್ಷಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಈ ಮಾಹಿತಿಯು ಮಹಾರಾಷ್ಟ್ರದ ಶಿಕ್ಷಣ ಇಲಾಖೆಗೆ ಆಘಾತವನ್ನುಂಟು ಮಾಡಿದ್ದು, ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಮರಳಿ ಕರೆಸಿಕೊಳ್ಳುವ ಕಾರ್ಯಕ್ಕೆ ತುರ್ತು ಚಾಲನೆಯನ್ನು ನೀಡಲಾಗುತ್ತಿದೆ ಎನ್ನಲಾಗಿದೆ.

ಕಳೆದ ವರ್ಷ ಒಟ್ಟು 18,31,344 ವಿದ್ಯಾರ್ಥಿಗಳು ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆದಾಗ್ಯೂ, ಈ ವರ್ಷ ಹತ್ತನೇ ತರಗತಿಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕೇವಲ 16, 57,000. ಈ ಪೈಕಿ 56 ಸಾವಿರ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಗೆ ಹಾಜರಾಗಿದ್ದರು. ಹೀಗಾಗಿ ಹತ್ತನೇ ತರಗತಿ ಪರೀಕ್ಷೆಗೆ 16 ಲಕ್ಷ ಹೊಸ ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ. ಕಳೆದ ವರ್ಷ 9 ನೇ ತರಗತಿಯಲ್ಲಿ ಉತ್ತೀರ್ಣರಾದವರೊಂದಿಗೆ ಹೋಲಿಸಿದರೆ, ಒಂದೇ ವರ್ಷದಲ್ಲಿ ಸುಮಾರು 2,32,000 ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

“ಬಡತನ, ಆರ್ಥಿಕ ತೊಂದರೆ, ಬಾಲ್ಯವಿವಾಹಗಳು, ಪೋಷಕರ ಕೆಲಸ ಮತ್ತು ಬಾಲ ಕಾರ್ಮಿಕ ಪದ್ಧತಿಗಾಗಿ ಬೇರೆಡೆಗೆ ವಲಸೆ ಹೋಗುವ ಸಾಧ್ಯತೆ ಸೇರಿದಂತೆ ಹಲವು ಕಾರಣಗಳಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ” ಎಂದು ಜಲ್ಕಾರಿ ಜ್ಞಾನ ಪ್ರತಿಷ್ಠಾನದ ಹಿರಿಯ ಶಿಕ್ಷಣ ತಜ್ಞ ಮತ್ತು ಸಿಇಒ ಸಂಗಿತಾ ಮಾಲ್ಶೆ ಹೇಳಿದ್ದಾರೆ.

’ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ, ವಿದ್ಯಾರ್ಥಿಗಳು ಶಾಲೆಗೆ ಬರುವಂತಹ ವಾತಾವರಣ ಕಲ್ಪಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಗ್ರೇಡ್ ವ್ಯವಸ್ಥೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳನ್ನು 8 ನೇ ತರಗತಿವರೆಗೆ ತೇರ್ಗಡೆ ಮಾಡಲಾಗುತ್ತಿದೆ. ಒಂಬತ್ತನೇ ತರಗತಿಯಿಂದ ವಿದ್ಯಾರ್ಥಿಗಳು ಹೊರಗುಳಿದ ಹಲವಾರು ಘಟನೆಗಳು ನಡೆದಿವೆ, ಆದರೆ ಈಗ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ನಿಲ್ಲಿಸಿರುವುದು ಆಘಾತಕಾರಿ ಮತ್ತು  ಅಸ್ವಾಭಾವಿಕವಾಗಿದೆ’ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

“ಪ್ರಾಥಮಿಕ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ತಲುಪಬೇಕಿದೆ. ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಿಂದ  ಯಾವುದೇ ರೀತಿಯ ಪ್ರಯತ್ನಗಳನ್ನು ನಾವು ನೋಡಿಲ್ಲ. ಅವರು ವಿದ್ಯಾರ್ಥಿಗಳನ್ನು ಹುಡುಕಲು ಮತ್ತು ಹತ್ತನೇ ತರಗತಿಗೆ ದಾಖಲು ಮಾಡಲು ಕ್ರಮ ಕೈಗೊಳ್ಳಬೇಕಾಗಿತ್ತು” ಎಂದು ಮಾಜಿ ಶಿಕ್ಷಣ ಸಚಿವ ಮತ್ತು ಬಿಜೆಪಿ ನಾಯಕ ಆಶಿಶ್ ಶೆಲಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸತತ ಎರಡು ವರ್ಷ ಆನ್‌ಲೈನ್ ಶಿಕ್ಷಣ ವ್ಯವಸ್ಥೆಯನ್ನು ಆಶ್ರಯಿಸಬೇಕಾಗಿದ್ದು, ಈ ಕ್ರಮವು ಬಡ ವಿದ್ಯಾರ್ಥಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗೆ ತಳ್ಳುತ್ತದೆ ಎಂದು ತಜ್ಞರು ಹೇಳುತ್ತಾರೆ. ರಾಜ್ಯದ ಪ್ರಾಥಮಿಕ ಶಿಕ್ಷಣ ಇಲಾಖೆಯು ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿಕೊಳ್ಳುತ್ತಲೇ ಇದ್ದರೂ, ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ವಾಸ್ತವ ತಿಳಿಸುತ್ತಿದೆ ಎಂದು ಶಿಕ್ಷಣ ತಜ್ಞರು ಮತ್ತು ಪ್ರತಿಪಕ್ಷ ಆರೋಪಿಸಿದೆ.


ಇದನ್ನೂ ಓದಿ: ಡಾಲರ್‌ಗೆ ಬೈಬೈ ಹೇಳಿದ ರಷ್ಯಾ: ಮುರಿಯಲಿದೆಯೆ ಅಮೆರಿಕನ್‍ ಡಾಲರ್ ಏಕಾಧಿಪತ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...