Homeಮುಖಪುಟ'ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..'; ಬಿಜೆಪಿಯ 'ಬಾಟಂಗೆ ತೋ ಕಟೆಂಗೆ' ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

- Advertisement -
- Advertisement -

ಬಿಜೆಪಿ ತನ್ನ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣಾ ಪ್ರಚಾರದಲ್ಲಿ ಬಳಸು ಉದ್ದೇಶಿಸಿರುವ ‘ಬಾಟಂಗೆ ತೋ ಕಟೆಂಗೆ’ (ವಿಭಜಿತವಾದರೆ, ನಾವು ನಾಶವಾಗುತ್ತೇವೆ) ಘೋಷಣೆಯನ್ನು, ಅದರ ಮೈತ್ರಿ ಪಾಲುದಾರ ಎನ್‌ಸಿಪಿಯ ನಾಯಕ ಅಜಿತ್ ಪವಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದೂ ಐಕ್ಯತೆಯ ಘೋಷಣೆಯು ಮಹಾರಾಷ್ಟ್ರದಲ್ಲಿ ಪ್ರತಿಧ್ವನಿಸುವುದಿಲ್ಲ ಎಂದ ಅವರು, ಅದರ ಬದಲಾಗಿ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಒತ್ತಿ ಹೇಳಿದರು.

‘ಇಂಡಿಯಾ ಟುಡೇ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಅವರು, “ನಾನು ಅದನ್ನು ಬೆಂಬಲಿಸುವುದಿಲ್ಲ. ಇದನ್ನು ಹಲವಾರು ಬಾರಿ ಹೇಳಿದ್ದೇನೆ. ಮಹಾರಾಷ್ಟ್ರದಲ್ಲಿ ಇದು ಕೆಲಸ ಮಾಡುವುದಿಲ್ಲ. ಇದು ಯುಪಿ, ಜಾರ್ಖಂಡ್ ಅಥವಾ ಇತರ ಕೆಲವು ಸ್ಥಳಗಳಲ್ಲಿ ಕೆಲಸ ಮಾಡಬಹುದು” ಎಂದರು.

ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಹಿಂಸಾಚಾರವನ್ನು ಉಲ್ಲೇಖಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲು ಪರಿಚಯಿಸಿದ, ನಂತರ ಆರ್‌ಎಸ್‌ಎಸ್ ಮತ್ತು ಅನೇಕ ಬಿಜೆಪಿ ನಾಯಕರು ಅನುಮೋದಿಸಿದ ಈ ಘೋಷಣೆಯು ಮಹಾರಾಷ್ಟ್ರದಲ್ಲಿ ಬಿಜೆಪಿಯ ಕೇಂದ್ರ ಪ್ರಚಾರ ಮಾರ್ಗವಾಯಿತು. ಮಹಾರಾಷ್ಟ್ರದ ಚುನಾವಣಾ ರ್ಯಾಲಿಯಲ್ಲಿ ಆದಿತ್ಯನಾಥ್ ಅದನ್ನು ಪುನರಾವರ್ತಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಕೂಡ ಇತ್ತೀಚಿನ ಚುನಾವಣಾ ರ್ಯಾಲಿಯಲ್ಲಿ ಈ ಹೇಳಿಕೆಯನ್ನು ಪ್ರತಿಧ್ವನಿಸಿದರು. ಧುಲೆಯಲ್ಲಿ, “ನಾವು ಒಗ್ಗಟ್ಟಾಗಿ ಇದ್ದರೆ ನಾವು ಸುರಕ್ಷಿತವಾಗಿರುತ್ತೇವೆ” ಎಂದು ಪ್ರಧಾನಿ ಮೋದಿ ಹೇಳಿದರು.

“ಸಬ್ಕಾ ಸಾಥ್ ಸಬ್ಕಾ ವಿಕಾಸ್” ಮೇಲೆ ಕೇಂದ್ರೀಕರಿಸಬೇಕು ಎಂದು ಒತ್ತಿ ಹೇಳಿದ ಅವರು, ಮಹಾರಾಷ್ಟ್ರದಲ್ಲಿ ರಾಜಕೀಯ ವಿಭಿನ್ನವಾಗಿದೆ ಎಂದು ಬಿಜೆಪಿಗೆ ಸಲಹೆ ನೀಡಿದರು.

ಈ ಹಿಂದೆಯೂ ಈ ಘೋಷಣೆಯನ್ನು ಬಳಸಿದ್ದಕ್ಕೆ ಪವಾರ್ ವಿರೋಧ ವ್ಯಕ್ತಪಡಿಸಿದ್ದರು. ಕಳೆದ ವಾರ ಯೋಗಿ ಆದಿತ್ಯನಾಥ್ ಅವರ ರ್ಯಾಲಿಯ ನಂತರ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದ ಜನರು ಯಾವಾಗಲೂ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಶ್ರಮಿಸುತ್ತಿದ್ದಾರೆ ಎಂದರು.

“ಮಹಾರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜ್, ರಾಜರ್ಷಿ ಶಾಹು ಮಹಾರಾಜ್ ಮತ್ತು ಮಹಾತ್ಮ ಫುಲೆ ಅವರಿಗೆ ಸೇರಿದೆ. ನೀವು ಮಹಾರಾಷ್ಟ್ರವನ್ನು ಇತರ ರಾಜ್ಯಗಳೊಂದಿಗೆ ಹೋಲಿಸಲು ಸಾಧ್ಯವಿಲ್ಲ; ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ” ಎಂದು ಆದಿತ್ಯನಾಥ್ ಅವರ ಹೇಳಿಕೆಗಳ ಬಗ್ಗೆ ಕೇಳಿದಾಗ ಪವಾರ್ ಪ್ರತಿಕ್ರಿಯಿಸಿದರು.

ಇದನ್ನು ಒಡೆದು ಆಳುವ ರಾಜಕೀಯ ಎಂದು ಕಾಂಗ್ರೆಸ್‌ ಘೋಷಣೆ ಕೂಗಿದೆ. ಇದನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಒಂದು ಧರ್ಮವನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುತ್ತಿದೆ ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರವು ನವೆಂಬರ್ 20 ರಂದು ಒಂದೇ ಹಂತದಲ್ಲಿ ಮತದಾನ ಮಾಡಲಿದ್ದು, ಅಲ್ಲಿ ಬಿಜೆಪಿ, ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು ಉದ್ಧವ್ ಠಾಕ್ರೆ ಅವರ ಶಿವಸೇನೆ, ಶರದ್ ಪವಾರ್ ಅವರನ್ನೊಳಗೊಂಡ ಎನ್‌ಸಿಪಿ ಮತ್ತು ಕಾಂಗ್ರೆಸ್ ಮಹಾ ವಿಕಾಸ್ ಅಘಾಡಿಯನ್ನು ಎದುರಿಸಲಿದೆ.  ಮತ ಎಣಿಕೆ ಮೂರು ದಿನಗಳ ನಂತರ ನವೆಂಬರ್ 23 ರಂದು ನಡೆಯಲಿದೆ.

ಇದನ್ನೂ ಓದಿ; 370ನೇ ವಿಧಿಯ ಪರ ನಿರ್ಣಯ | ಕಾಶ್ಮೀರದ ವಿರುದ್ಧದ ಪಿತೂರಿ ಎಂದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...