Homeಮುಖಪುಟಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರ: ಪಠಾಣ್ ಹಾಡು, ಟ್ರೇಲರ್‌‌ ನಿರ್ಬಂಧಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಪಠಾಣ್ ಚಿತ್ರದ ಟ್ರೇಲರ್‌, ಟೀಸರ್‌, ಬೇಷರಮ್‌ ರಂಗ್‌ ಹಾಡು ಮತ್ತು ಜಾಹೀರಾತುಗಳನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡದಂತೆ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್‌ಗೆ ನಿರ್ಬಂಧಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಹಾರಾಷ್ಟ್ರ ಸಿವಿಲ್ ನ್ಯಾಯಾಲಯವು ಕಳೆದ ವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅರ್ಜಿದಾರರು ತಮ್ಮ ಪ್ರಕರಣವನ್ನು ಸಾಬೀತುಪಡಿಸಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಚಿತ್ರದ ಟೀಸರ್‌, ಟ್ರೇಲರ್‌, ಹಾಡುಗಳು ಮತ್ತು ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸೆನ್ಸಾರ್ ಮಂಡಳಿಯ ಯು/ಎ ಪ್ರಮಾಣಪತ್ರವನ್ನು ಯೂಟ್ಯೂಬ್‌ನಲ್ಲಿ ಮೊದಲೇ ಪ್ರದರ್ಶಿಸಿಲ್ಲ. ಇದನ್ನು ಕಂಡು ಗೊಂದಲಕ್ಕೊಳಗಾಗಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ನೀಡಿದ U/A ಪ್ರಮಾಣಪತ್ರವು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಮ್ಮ ಪೋಷಕರೊಂದಿಗೆ ಸಿನಿಮಾ ನೋಡಬಹುದೆಂದು ಸೂಚಿಸುತ್ತದೆ.

ಪತ್ರಿಕೆಗಳು, ಹೋರ್ಡಿಂಗ್‌ಗಳು, ಟ್ರೇಲರ್‌ಗಳು ಮತ್ತು ಟೀಸರ್‌ಗಳಲ್ಲಿ ಜಾಹೀರಾತು ಪ್ರಕಟಿಸುವ ಮೊದಲು ಸಿನಿಮಾಟೋಗ್ರಫಿ ಕಾಯ್ದೆಯಡಿ ಯು/ಎ ಪ್ರಮಾಣಪತ್ರವನ್ನು ತಿಳಿಸುವುದು ಅಗತ್ಯ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣ ಪತ್ರ ತೋರಿಸದಿರುವುದರಿಂದ ನನಗೆ ಹಾಗೂ ಸಮಾಜಕ್ಕೆ ನಷ್ಟವಾಗುತ್ತಿದೆ ಎಂದು ಆರೋಪಿಸಿದ್ದರು. ಅರ್ಜಿದಾರರು ತಾನು ಯಾವ ನಷ್ಟವನ್ನು ಅನುಭವಿಸುತ್ತಿದ್ದೇನೆ ಎಂದು ಉಲ್ಲೇಖಿಸಿಲ್ಲ.

ಯಶ್ ರಾಜ್ ಫಿಲ್ಮ್ಸ್ ಅನ್ನು ಪ್ರತಿನಿಧಿಸುವ ವಕೀಲ ಹರ್ಷ್ ಬುಚ್ ಅವರು, “ದಾವೆಯು ತಪ್ಪುದಾರಿಗೆಳೆಯುವಂತಿದೆ” ಎಂದು ವಾದಿಸಿದರು. ಒಒಟಿಯಲ್ಲಿ ಜಾಹೀರಾತು ಪ್ರಕಟಿಸುವಾಗ ಸೆನ್ಸಾರ್ ಮಂಡಳಿಯ ಪ್ರಮಾಣ ಪತ್ರವನ್ನು ತೋರಿಸಬೇಕು ಎಂಬ ನಿಯಮವಿಲ್ಲ” ಎಂದು ಸ್ಪಷ್ಪಡಿಸಿದ್ದಾರೆ.

ಚಲನಚಿತ್ರವನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸುವುದಕ್ಕೆ, ಡಿವಿಡಿಗಳನ್ನು ಮಾಡುವುದಕ್ಕೆ ಮಾತ್ರ ಸಿನಿಮಾಟೋಗ್ರಫಿ ಆಕ್ಟ್‌ನ ಪ್ರಮಾಣೀಕರಣ ಅಗತ್ಯವಿರುತ್ತದೆ ಎಂದು ಬುಚ್ ತಿಳಿಸಿದರು. ಯೂಟ್ಯೂನ್‌ನಂತಹ ಪ್ಲಾಟ್‌ಫಾರ್ಮ್‌ಗಳು ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಮೂಲಕ ನಿಯಂತ್ರಿಸಲ್ಪಡುತ್ತವೆ ಎಂದು ಅವರು ಉಲ್ಲೇಖಿಸಿದರು.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಜನವರಿ 25 ರಂದು ಬಿಡುಗಡೆಯಾಯಿತು. ಅದಕ್ಕೂ ಮೊದಲೇ ಹಲವಾರು ವಿರೋಧಗಳನ್ನು ಎದುರಿಸಿತು.

ಡಿಸೆಂಬರ್‌ನಲ್ಲಿ ಬೇಷರಂ ರಂಗ್ ಹಾಡು ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬಿಜೆಪಿ ನಾಯಕ, ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಕರಾರು ತೆಗೆದಿದ್ದರು. “ದೀಪಿಕಾ ಪಡುಕೋಣೆ ಅವರ ವೇಷಭೂಷಣ ಸರಿಯಿಲ್ಲ, ರಾಜ್ಯದಲ್ಲಿ ಈ ಸಿನಿಮಾ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗುವುದು” ಎಂದು ಬೆದರಿಕೆ ಹಾಕಿದ್ದರು. ಬೇಷರಂ ರಂಗ್ ಹಾಡಿನಲ್ಲಿ ಪಡುಕೋಣೆಯಲ್ಲಿ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆಂದು ವಿರೋಧ ವ್ಯಕ್ತವಾಗಿತ್ತು. ಸಿನಿಮಾವನ್ನು ಬಹಿಷ್ಕರಿಸುವಂತೆ ಹಲವಾರು ಹಿಂದುತ್ವ ಗುಂಪುಗಳು ಕರೆ ನೀಡಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...