Homeಮುಖಪುಟ31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್

- Advertisement -
- Advertisement -

ರಾಯ್‌ಪುರ: ಇದೇ ಭಾನುವಾರದಂದು ಛತ್ತೀಸ್‌ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ  11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು ಹತ್ಯೆ ಮಾಡಿದ್ದವು. ಇದೇ ವೇಳೆ ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು.

ಮಾವೋವಾದಿಗಳ ತೆಲಂಗಾಣ ರಾಜ್ಯ ಸಮಿತಿ, ಪಶ್ಚಿಮ ಬಸ್ತಾರ್ ವಿಭಾಗ ಮತ್ತು ರಾಷ್ಟ್ರೀಯ ಉದ್ಯಾನ ಪ್ರದೇಶ ಸಮಿತಿಗೆ ಸೇರಿದ ನಕ್ಸಲೀಯರ ಗೆರಿಲ್ಲಾ ಪಡೆಯ ಕಾರ್ಯಕರ್ತರು (ಕೇಡರ್ಸ್) ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದ ದೂರದ ಕಾಡಿನಲ್ಲಿ ತಮ್ಮ ಯುದ್ಧತಂತ್ರದ ಪ್ರತಿದಾಳಿ ಕಾರ್ಯಾಚರಣೆ Tactical Counter Offensive Campaign (TCOC)ಗಾಗಿ ಸಭೆ ಸೇರಲಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು” ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಮತ್ತು ಜೂನ್ ನಡುವೆ ಸಾಮಾನ್ಯವಾಗಿ ನಕ್ಸಲರು TCOC ನಡೆಸುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಾರೆ. ಫೆಬ್ರವರಿ 7ರಂದು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಛತ್ತೀಸ್‌ಗಢ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಬಸ್ತರ್ ಫೈಟರ್ಸ್‌ನ ಯುದ್ಧ ಘಟಕಗಳನ್ನು ಈ ಪ್ರದೇಶದ ವಿವಿಧ ದಿಕ್ಕುಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಕಾರ್ಯಾಚರಣೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಪೊಲೀಸರ ಲಾಂಚ್ ಪ್ಯಾಡ್‌ನಿಂದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಕೆಲವು ತಂಡಗಳನ್ನು ನಿಯೋಜಿಸಲಾಗಿತ್ತು. ಭಾನುವಾರ ಬೆಳಿಗ್ಗೆ ನಮ್ಮ ಗಸ್ತು ಪಡೆಯು ನಕ್ಸಲೀಯರ ಚಟುವಟಿಕೆ ಕಂಡುಬಂದ ಬೆಟ್ಟವನ್ನು ತಲುಪಿತು ಎಂದು ಅವರು ಹೇಳಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಬೆಟ್ಟವನ್ನು ಸುತ್ತುವರಿಯಲು ಪ್ರಾರಂಭಿಸಿದಾಗ ಗುಂಡಿನ ದಾಳಿ ಪ್ರಾರಂಭವಾಯಿತು. ಎನ್‌ಕೌಂಟರ್ ಸಮಯದಲ್ಲಿ ನಕ್ಸಲರು ಎರಡು ಗುಂಪುಗಳಾಗಿ ಚದುರಿದರು. ತೆಲಂಗಾಣ ರಾಜ್ಯ ಸಮಿತಿಗೆ ಸಂಬಂಧಿಸಿದ ಕಾರ್ಯಕರ್ತರನ್ನು ಒಳಗೊಂಡಿದ್ದ ಒಂದು ಗುಂಪು ಹಿಂದಕ್ಕೆ ಸರಿಯಲು ಪ್ರಾರಂಭಿಸಿತು, ಆದರೆ ಇನ್ನೊಂದು ಗುಂಪು ಗುಂಡು ಹಾರಿಸುವುದನ್ನು ಮುಂದುವರೆಸಿತು ಎಂದು ಅವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಕಡೆಯಿಂದ ಪ್ರವೇಶಿಸುತ್ತಿದ್ದ ನಮ್ಮ ಗಸ್ತು ಪಡೆಗಳು ನಕ್ಸಲರನ್ನು ಅನಿರೀಕ್ಷಿತಗೊಳಿಸಿತು ಎಂದು ತೋರುತ್ತದೆ. ಏಕೆಂದರೆ ಅವರು ಆ ದಿಕ್ಕಿನಿಂದ ನಮ್ಮ ಪಡೆಗಳ ಚಲನೆಯನ್ನು ನಿರೀಕ್ಷಿಸಿರಲಿಲ್ಲ ಮತ್ತು ಸಂಖ್ಯೆಯಲ್ಲಿ ಅವರು ಕಡಿಮೆ ಇದ್ದರು. ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮಧ್ಯಂತರ ಗುಂಡಿನ ದಾಳಿ ಮುಂದುವರೆಯಿತು ಎಂದು ಅಧಿಕಾರಿ ಹೇಳಿದರು.

ಅರಣ್ಯವನ್ನು ಪ್ರವೇಶಿಸುವ ಮಾರ್ಗ ಬದಲಾಯಿಸುವ ನಮ್ಮ ತಂತ್ರವು ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಲು ಸಹಾಯ ಮಾಡಿತು. ಇದರಿಂದಾಗಿ 31 ನಕ್ಸಲರು ಹತ್ಯೆ ಮಾಡಲು ಸಾಧ್ಯವಾಯಿತು ಎಂದು ಅಧಿಕಾರಿ ತಿಳಿಸಿದರು.

ಎನ್ಕೌಂಟರ್ ಸ್ಥಳವು ಬಿಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 80 ಕಿ.ಮೀ ದೂರದಲ್ಲಿದೆ ಮತ್ತು ಮಹಾರಾಷ್ಟ್ರ ಗಡಿಯಿಂದ ಛತ್ತೀಸ್‌ಗಢದ ಒಳಗೆ 40 ಕಿ.ಮೀ ದೂರದಲ್ಲಿದೆ. ಮೂರು ದಿನಗಳ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ ಸುಮಾರು 100 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು. ಎನ್‌ಕೌಂಟರ್ ನಂತರ ಭದ್ರತಾ ಪಡೆಗಳು ತಾತ್ಕಾಲಿಕ ಡೋಲಿಗಳ ಸಹಾಯದಿಂದ ಸುಮಾರು ಐದು ಕಿಲೋಮೀಟರ್‌ಗಳವರೆಗೆ ಮಾವೋವಾದಿಗಳ ಶವಗಳನ್ನು ಹೊತ್ತು ತಂದರು, ನಂತರ ವಾಯುಸಾರಿಗೆಯನ್ನು ಆಶ್ರಯಿಸಲಾಯಿತು ಎಂದು ಅವರು ಹೇಳಿದರು.

ಫೆಬ್ರವರಿ 7ರಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳು ಈಗಾಗಲೇ ದಣಿದಿದ್ದರಿಂದ 31 ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಸುಮಾರು 45 ಕಿ.ಮೀ. ನಡೆಯಲು ಸಾಧ್ಯವಾಗಲಿಲ್ಲ. ಆದ್ದರಿಂದ ಹುತಾತ್ಮ ಯೋಧರು ಮತ್ತು ಇಬ್ಬರು ಗಾಯಗೊಂಡ ಸಿಬ್ಬಂದಿಯ ಜೊತೆಗೆ, ನಕ್ಸಲರ ಶವಗಳನ್ನು ಸಹ ವಿಮಾನದ ಮೂಲಕ ಸಾಗಿಸಲು ನಾವು ನಿರ್ಧರಿಸಿದೆವು” ಎಂದು ಅವರು ತಿಳಿಸಿದರು.

ನಿರ್ಜಲೀಕರಣದಿಂದ ಬಳಲುತ್ತಿದ್ದ ಕೆಲವು ಯೋಧರು, ಹೆಚ್ಚಾಗಿ ಮಹಿಳಾ ಕಮಾಂಡೋಗಳನ್ನು ವಿಮಾನದ ಮೂಲಕ ಬಿಜಾಪುರಕ್ಕೆ ಕರೆದೊಯ್ಯಲಾಯಿತು. ಎನ್‌ಕೌಂಟರ್ ಸ್ಥಳದಿಂದ 24 ಬಂದೂಕುಗಳು ಮತ್ತು ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲಲ್ಪಟ್ಟ 31 ನಕ್ಸಲರಲ್ಲಿ ಐವರನ್ನು  ಗುರುತಿಸಲಾಗಿದ್ದು, ಅವರ ತಲೆಗೆ ಈ ಹಿಂದೆಯೇ ಒಟ್ಟು 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗುರುತಿಸಲ್ಪಟ್ಟ ಐವರು ಮಾವೋವಾದಿಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದ ವಿಭಾಗೀಯ ಸಮಿತಿ ಸದಸ್ಯ ಹಂಗಾ ಕರ್ಮಾ ಒಬ್ಬರಾಗಿದ್ದು, ಅವರ ಮೇಲೆ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಛತ್ತೀಸಗಡದಲ್ಲಿಯೇ ಪಶ್ಚಿಮ ಮತ್ತು ದಕ್ಷಿಣ ಬಸ್ತಾರ್ ವಿಭಾಗ ಪ್ರದೇಶಗಳು ಮಾವೋವಾದಿಗಳು ತಮ್ಮ ಬಲಿಷ್ಠ ಗೆರಿಲ್ಲಾ ಪಡೆಗಳೊಂದಿಗೆ ಸಾಕಷ್ಟು ನಿಯಂತ್ರಣ ಹೊಂದಿದ ಪ್ರದೇಶಗಳಾಗಿವೆ ಮತ್ತು ಇವುಗಳಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಕಳೆದ ಒಂದು ವರ್ಷದಲ್ಲಿಯೇ ಅನೇಕ ಪ್ರಮುಖ ಕಾರ್ಯಕರ್ತರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಈ ವರ್ಷ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಕೊಲ್ಲಲ್ಪಟ್ಟ 81 ನಕ್ಸಲರಲ್ಲಿ 65 ಜನರು ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಹೊಂದಿರುವ ಬಸ್ತರ್ ವಿಭಾಗದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು 219 ನಕ್ಸಲರನ್ನು ಕೊಂದು ಹಾಕಿವೆ.

ಮಣಿಪುರ ಹಿಂಸಾಚಾರಕ್ಕೆ ಬಿರೇನ್ ಸಿಂಗ್ ಮಾತ್ರವಲ್ಲ, ಮೋದಿ, ಅಮಿತ್ ಶಾ ಕೂಡಾ ಕಾರಣ – ಡಿಎಂಕೆ ಸಂಸದೆ ಕನಿಮೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....