Homeಮುಖಪುಟಉದ್ಧವ್ ಸರ್ಕಾರಕ್ಕೆ ಸಂಕಷ್ಟ: 46 ಶಾಸಕರ ಬೆಂಬಲವಿದೆ, ಆದರೆ ಪಕ್ಷ ಬದಲಾಯಿಸುವುದಿಲ್ಲ ಎಂದ ಏಕನಾಥ್ ಶಿಂಧೆ

ಉದ್ಧವ್ ಸರ್ಕಾರಕ್ಕೆ ಸಂಕಷ್ಟ: 46 ಶಾಸಕರ ಬೆಂಬಲವಿದೆ, ಆದರೆ ಪಕ್ಷ ಬದಲಾಯಿಸುವುದಿಲ್ಲ ಎಂದ ಏಕನಾಥ್ ಶಿಂಧೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಗಾಳಿ ಎಬ್ಬಿಸಿರುವ ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ಮುಂಜಾನೆ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಗೆ ಆಗಮಿಸಿದ್ದಾರೆ. ಜೊತೆಗೆ ತನಗೆ ತಮ್ಮ ಪಕ್ಷದ 40 ಶಾಸಕರು ಮತ್ತು 6 ಪಕ್ಷೇತರ ಶಾಸಕರು ಸೇರಿದಂತೆ  46 ಶಾಸಕರ ಬೆಂಬಲವನ್ನು ಹೊಂದಿರುವುದಾಗಿ ಹೇಳಿದ್ದಾರೆ.

“ನನಗೆ ಸ್ವತಂತ್ರ ಶಾಸಕರು ಸೇರಿದಂತೆ 46 ಶಾಸಕರ ಬೆಂಬಲವಿದೆ” ಎಂದು ಏಕನಾಥ್‌ ಶಿಂಧೆಯವರನ್ನು ಎನ್‌ಡಿಟಿವಿ ಉಲ್ಲೇಖಿಸಿದೆ.

“ಪಕ್ಷವನ್ನು ಬದಲಾಯಿಸುವ ಯಾವುದೇ ಯೋಜನೆಯನ್ನು ನಿರಾಕರಿಸಿರುವ ಏಕನಾಥ್ ಶಿಂಧೆ, ತಾನು ಶಿವಸೇನೆಯಿಂದ ಬೇರ್ಪಡುವುದಿಲ್ಲ ಮತ್ತು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತವನ್ನು ಮುಂದುವರಿಸುತ್ತೇನೆ” ಎಂದು ಹೇಳಿದ್ದಾರೆ. ‘ನಾವು ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆಯನ್ನು ಬಿಟ್ಟಿಲ್ಲ ಮತ್ತು ಯಾವತ್ತೂ ಬಿಡುವುದಿಲ್ಲ. ನಾವು ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ಗುವಾಹಟಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ ನಾಯಕರಾದ ಪಲ್ಲಬ್ ಲೋಚನ್ ದಾಸ್ ಮತ್ತು ಸುಶಾಂತ ಬೋರ್ಗೊಹೈನ್ ಶಿಂಧೆ ಅವರು ಬಂಡಾಯ ಶಾಸಕರನ್ನು ಬರಮಾಡಿಕೊಂಡಿದ್ದಾರೆ. ಇವರಿಗಾಗಿ ಸಿದ್ದಧಪಡಿಸಲಾಗಿರುವ ಪಂಚತಾರಾ ಹೋಟೆಲ್‌ನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕಾಣಿಸಿಕೊಂಡಿದ್ದಾರೆ.

ಅಸ್ಸಾಂಗೆ ಹೊರಡುವ ಮೊದಲು, ಏಕನಾಥ್ ಶಿಂಧೆ ಮತ್ತು ಇತರ ಪಕ್ಷದ ಶಾಸಕರು ಬಿಜೆಪಿ ಆಡಳಿತದ ಗುಜರಾತ್‌ನ ಸೂರತ್ ಹೋಟೆಲ್‌ನಲ್ಲಿ ಮೊಕ್ಕಾಂ ಹೂಡಿದ್ದರು.

 

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಏಕನಾಥ್‌ ಶಿಂಧೆ ದೂರವಾಣಿ ಸಂಭಾಷಣೆ ನಡೆಸಿದ ನಂತರ ಅವರನ್ನು ಗುವಾಹಟಿಗೆ ಸ್ಥಳಾಂತರಿಸಲಾಗಿದೆ. ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಜಂಟಿಯಾಗಿ ಆಡಳಿತ ನಡೆಸಬೇಕೆಂದು  ಶಿಂಧೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಬಿಕ್ಕಟ್ಟಿನಲ್ಲಿ ಸಿಲುಕಿರುವ ಕಾರಣ, ಶಿವಸೇನೆ ತನ್ನ ಉಳಿದ ಶಾಸಕರನ್ನು ಮುಂಬೈನ ವಿವಿಧ ಹೋಟೆಲ್‌ಗಳಲ್ಲಿ ಇರಿಸಿದೆ. ಮಂಗಳವಾರ ಮಧ್ಯಾಹ್ನ ಶಿಂಧೆ ಅವರನ್ನು ಪಕ್ಷದ ಮುಖ್ಯ ಸಚೇತಕ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇದಕ್ಕೆ ತಮ್ಮ ಟ್ವಿಟರ್ ಬಯೋದಿಂದ ಶಿವಸೇನೆಯನ್ನು ಕೈಬಿಡುವ ಮೂಲಕ ಶಿಂಧೆ ಪ್ರತೀಕಾರ ತೀರಿಸಿಕೊಂಡಿದ್ದಾರೆ.

ಇದಕ್ಕೂ ಮೊದಲು ತಮ್ಮ ಟ್ವಿಟರ್‌ ಖಾತೆಯಲ್ಲಿ “ನಾವು ಬಾಳಾಸಾಹೇಬರ ಕಟ್ಟಾ ಶಿವಸೈನಿಕರು… ಬಾಳಾಸಾಹೇಬರು ನಮಗೆ ಹಿಂದುತ್ವವನ್ನು ಕಲಿಸಿದ್ದಾರೆ.. ಬಾಳಾಸಾಹೇಬರ ಚಿಂತನೆಗಳು ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬರ ಬೋಧನೆಗಳಿಗೆ ಸಂಬಂಧಿಸಿದಂತೆ ನಾವು ಎಂದಿಗೂ ಅಧಿಕಾರಕ್ಕಾಗಿ ಮೋಸ ಮಾಡಿಲ್ಲ ಮತ್ತು ಮೋಸ ಮಾಡುವುದಿಲ್ಲ” ಎಂದು ಮರಾಠಿ ಭಾಷೆಯಲ್ಲಿ ಬರೆದುಕೊಂಡಿದ್ದರು.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಹಿನ್ನಡೆ ಅನುಭವಿಸಿದ ನಂತರ ಉದ್ಧವ್‌ ಠಾಕ್ರೆ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...