Homeಮುಖಪುಟಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಅಧಿಕಾರಕ್ಕಾಗಿ ನಾನು ಎಂದಿಗೂ ಮೋಸ ಮಾಡುವುದಿಲ್ಲ ಎಂದ ಏಕನಾಥ್‌ ಶಿಂಧೆ

ಸಚಿವ ಏಕನಾಥ್‌ ಶಿಂಧೆ, 21 ಶಾಸಕರ ಜೊತೆಗೆ ಗುಜರಾತ್‌ಗೆ ತೆರಳಿದ್ದರಿಂದ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲದ ಶಂಕೆ ವ್ಯಕ್ತವಾಗಿತ್ತು.

- Advertisement -
- Advertisement -

ಮಂಗಳವಾರ ಮಹಾರಾಷ್ಟ್ರ ಸರ್ಕಾರದಲ್ಲಿ ಆಪರೇಷನ್ ಕಮಲದ ಮುನ್ಸೂಚನೆ ಸಿಕ್ಕಿತ್ತು. ಸಚಿವ ಏಕನಾಥ್‌ ಶಿಂಧೆ 21 ಶಾಸಕರೊಂದಿಗೆ ಗುಜರಾತ್‌ಗೆ ತೆರಳಿ ಈ ಊಹಪೋಹಗಳಿಗೆ ಮತ್ತಷ್ಟು ತುಪ್ಪ ಸುರಿದಿದ್ದರು. ಆದರೆ, ಈಗ ಟ್ವೀಟ್ ಮಾಡಿರುವ ಸಚಿವ ನಾನು ಅಧಿಕಾರಕ್ಕಾಗಿ ಎಂದಿಗೂ ಮೋಸ ಮಾಡುವುದಿಲ್ಲ ಎಂದಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಶಂಕೆ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಸಚಿವ ಏಕನಾಥ್‌ ಶಿಂಧೆ, 21 ಶಾಸಕರೊಂದಿಗೆ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ಗೆ ತೆರಳಿದ್ದಾರೆ ಎಂದು ವರದಿಯಾಗಿತ್ತು. ಪಕ್ಷದ ಯಾರೊಬ್ಬರಿಗೂ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ.

ಇದರ ನಡುವೆಯೇ ಶಿವಸೇನೆ ಪಕ್ಷ ಸಚಿವ ಏಕನಾಥ್ ಶಿಂಧೆ ಅವರನ್ನು ಮಂಗಳವಾರ ಪಕ್ಷದ ಮುಖ್ಯ ಸಚೇತಕ ಸ್ಥಾನದಿಂದ ವಜಾಗೊಳಿಸಿದೆ. ವಜಾಗೊಳಿಸಿದ ತಕ್ಷಣವೇ ಏಕನಾಥ್ ಶಿಂಧೆ ಅವರು ಅಧಿಕಾರಕ್ಕಾಗಿ ಎಂದಿಗೂ ಮೋಸ ಮಾಡುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

“ನಾವು ಬಾಳಾಸಾಹೇಬರ ಕಟ್ಟಾ ಶಿವಸೈನಿಕರು… ಬಾಳಾಸಾಹೇಬರು ನಮಗೆ ಹಿಂದುತ್ವವನ್ನು ಕಲಿಸಿದ್ದಾರೆ.. ಬಾಳಾಸಾಹೇಬರ ಚಿಂತನೆಗಳು ಮತ್ತು ಧರ್ಮವೀರ್ ಆನಂದ್ ದಿಘೆ ಸಾಹೇಬರ ಬೋಧನೆಗಳಿಗೆ ಸಂಬಂಧಿಸಿದಂತೆ ನಾವು ಎಂದಿಗೂ ಅಧಿಕಾರಕ್ಕಾಗಿ ಮೋಸ ಮಾಡಿಲ್ಲ ಮತ್ತು ಮೋಸ ಮಾಡುವುದಿಲ್ಲ” ಎಂದು ಮರಾಠಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಶಿವಸೇನೆಯ ಸೆವ್ರಿ ಶಾಸಕ ಅಜಯ್ ಚೌಧರಿ ಅವರನ್ನು ಏಕನಾಥ್ ಶಿಂಧೆ ಅವರ ಜಾಗಕ್ಕೆ ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಹಿನ್ನಡೆ ಅನುಭವಿಸಿದ ನಂತರ ರಾಜ್ಯದಲ್ಲಿ ಬಿಕ್ಕಟ್ಟು ಉಂಟಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....