Homeಮುಖಪುಟ'ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?': ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

‘ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?’: ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

- Advertisement -
- Advertisement -

ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಎದುರಿಸುತ್ತಿರುವ ಶಿವಸೇನೆಯ ನಾಯಕರು ಬಹಿರಂಗವಾಗಿ ಆಕ್ರೋಶ ಹೊರಹಾಕಲು ಶುರು ಮಾಡಿದ್ದಾರೆ. ಆದಿತ್ಯ ಠಾಕ್ರೆ ಕೂಡ “ನಿಮಗೆ ಧೈರ್ಯವಿದ್ದರೆ ಶಿವಸೇನೆ ಬಿಟ್ಟು ಪಕ್ಷಾಂತರ ಮಾಡಿ ಹೋರಾಡಿ. ನಾವು ಮಾಡಿದ್ದು ತಪ್ಪು, ಉದ್ಧವ್ (ಠಾಕ್ರೆ) ನಾಯಕತ್ವ ತಪ್ಪು ಮತ್ತು ನಾವೆಲ್ಲರೂ ತಪ್ಪು ಎಂದು ನಿಮಗೆ ಅನಿಸಿದ್ದರೆ, ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಾವು ಸಿದ್ಧರಿದ್ದೇವೆ” ಎಂದು ಸವಾಲು ಹಾಕಿದ್ದಾರೆ.

ಇಂದು ಬೆಳಗ್ಗೆ ಸಂಸದ ಸಂಜಯ್ ರಾವತ್ “ನೀವು ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ? ನೀವು ಹಿಂತಿರುಗಲೇಬೇಕು” ಎಂದು ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ನರಹರಿ ಝಿರ್ವಾಲ್ ಅವರ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದಾರೆ. ನರಹರಿ ಝಿರ್ವಾಲ್, ಶಿವಸೇನೆ ಸಲ್ಲಿಸಿರುವ ಅನರ್ಹತೆಯ ಮನವಿಯ ಮೇಲೆ 16 ಬಂಡಾಯ ಶಾಸಕರಿಗೆ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

 

ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯಿಂದ ಬಂದಿರುವ ನರಹರಿ ಝಿರ್ವಾಲ್, ಫೆಬ್ರವರಿ 2021 ರಿಂದ ಮಹಾರಾಷ್ಟ್ರ ಅಸೆಂಬ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಯಲ್ಲಿದ್ದಾರೆ. ಬಂಡಾಯ ಶಾಸಕರಿಗೆ ನೋಟಿಸ್ ನೀಡುವುದರ ಜೊತೆಗೆ ಸಚಿವ ಏಕನಾಥ್ ಶಿಂಧೆ ಅವರ ಪಾಳಯವು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿದ್ದಾರೆ.

34 ಬಂಡಾಯ ಶಾಸಕರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದರೂ, ಯಾವುದೇ ಶಾಸಕರು ಅದನ್ನು ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರ ಕಚೇರಿಗೆ ಸಲ್ಲಿಸಿಲ್ಲ. ಬದಲಿಗೆ ಜೂನ್ 22 ರಂದು ಬೆಳಿಗ್ಗೆ 11:30 ಕ್ಕೆ ಅನಾಮಧೇಯ ಇಮೇಲ್ ಐಡಿ ಮೂಲಕ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಕಳೆದ ರಾತ್ರಿ ಗುಜರಾತ್‌ನಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸಾಧ್ಯತೆಯ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದ್ದು, ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...