Homeಮುಖಪುಟಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

- Advertisement -
- Advertisement -

ಶಿವಸೇನೆಯ ಹಿಡಿತಕ್ಕಾಗಿ ಪಕ್ಷದ ಅಧ್ಯಕ್ಷ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ನಡುವೆ ನಡೆಯುತ್ತಿರುವ ಹೋರಾಟದಲ್ಲಿ ಶಿವಸೇನಾ ಕಾರ್ಯಕರ್ತರು ಉದ್ಧವ್‌ ಠಾಕ್ರೆಗೆ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆ ಶನಿವಾರ ಶಿವಸೇನೆಯ ನಿಷ್ಠಾವಂತ ಕಾರ್ಯಕರ್ತರು ಬಂಡಾಯಗಾರರ ವಿರುದ್ಧ ಮಹಾರಾಷ್ಟ್ರದ ಬೀದಿ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆಗಳ ಹಿನ್ನೆಲೆ ಮಾತನಾಡಿರುವ ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ, ’ಮಹಾ ವಿಕಾಸ್ ಅಘಾಡಿ (ಎಂವಿಎ) ಹಿಡಿತದಿಂದ ಪಕ್ಷವನ್ನು ಉಳಿಸಲು ಅವರು (ಬಂಡಾಯಗಾರರು) ಹೋರಾಡುತ್ತಿದ್ದಾರೆ ಎಂಬುದನ್ನು ಶಿವಸೇನೆ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ನಿಷ್ಠರಾಗಿರುವ ಶಿವಸೇನಾ ಕಾರ್ಯಕರ್ತರು ಅವರ ನೇತೃತ್ವದಲ್ಲಿ ಬಂಡಾಯ ಶಾಸಕರ ವಿರುದ್ಧ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಂಡಾಯಗಾರರ ಬ್ಯಾನರ್‌ಗಳನ್ನು ವಿರೂಪಗೊಳಿಸಿ, ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆಸಿರುವ ಕಾರ್ಯಕರ್ತರು, ಪುಣೆಯಲ್ಲಿ ಬಂಡಾಯ ಶಾಸಕರ ಕಚೇರಿಯನ್ನು ಧ್ವಂಸಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರ ಬಳಿಕ ಏಕಾನಾಥ್ ಶಿಂಧೆ ಅವರ ಮನವಿ ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಶಿವಸೇನೆಯ ಮುಖ್ಯ ವಕ್ತಾರ ಸಂಜಯ್ ರಾವತ್ ಅವರು ಇಂದು ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಬೀಡುಬಿಟ್ಟಿರುವ ಬಂಡಾಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಂಡುಕೋರರು ಮಾಡಿದ ದ್ರೋಹವನ್ನು ಮರೆಯುವುದಿಲ್ಲ ಎಂದು ಠಾಕ್ರೆ ತಂಡ ಹೇಳಿದೆ.

ರಾಜ್ಯದಲ್ಲಿ ಹದಗೆಡುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಂಡಾಯಗಾರರಿಗೆ ಪಕ್ಷದಿಂದ ನಿರ್ಗಮಿಸಿ ಚುನಾವಣೆ ಎದುರಿಸಲು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಬಹಿರಂಗ ಸವಾಲು ಹಾಕಿದ್ದಾರೆ.

“ನಿಮಗೆ ಧೈರ್ಯವಿದ್ದರೆ ಶಿವಸೇನೆ ಬಿಟ್ಟು ಪಕ್ಷಾಂತರ ಮಾಡಿ ಹೋರಾಡಿ. ನಾವು ಮಾಡಿದ್ದು ತಪ್ಪು, ಉದ್ಧವ್ (ಠಾಕ್ರೆ) ನಾಯಕತ್ವ ತಪ್ಪು ಮತ್ತು ನಾವೆಲ್ಲರೂ ತಪ್ಪು ಎಂದು ನಿಮಗನ್ನಿಸಿದ್ದರೇ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ. ನಾವು ಸಿದ್ಧರಿದ್ದೇವೆ” ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ.

ಇತ್ತ, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಕಳೆದ ರಾತ್ರಿ ಗುಜರಾತ್‌ನಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಸಾಧ್ಯತೆಯ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಮಹಾರಾಷ್ಟ್ರ: ಬಂಡಾಯ ಶಾಸಕನ ಕಚೇರಿ ಧ್ವಂಸ ಮಾಡಿದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...