Homeಮುಖಪುಟಮಹಾರಾಷ್ಟ್ರ: ವಿಶ್ವಾಸಮತ ಯಾಚನೆ ನಡೆಸಲು ವಕೀಲರನ್ನು ಸಂಪರ್ಕಿಸುತ್ತಿರುವ ಬಂಡಾಯ ಶಾಸಕರು

ಮಹಾರಾಷ್ಟ್ರ: ವಿಶ್ವಾಸಮತ ಯಾಚನೆ ನಡೆಸಲು ವಕೀಲರನ್ನು ಸಂಪರ್ಕಿಸುತ್ತಿರುವ ಬಂಡಾಯ ಶಾಸಕರು

- Advertisement -
- Advertisement -

ಅನರ್ಹತೆ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸಲು ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ಸುಪ್ರೀಂ ಕೋರ್ಟ್ ಜುಲೈ 12 ರವರೆಗೆ ಸಮಯ ನೀಡಿದೆ. ಇದರ ಬಳಿಕ ವಿಶ್ವಾಸಮತ ಯಾಚನೆ ನಡೆಸಲು ಇರುವ ಸಾಂವಿಧಾನಿಕ ನಿಬಂಧನೆಗಳ ಬಗ್ಗೆ ತಿಳಿಯಲು ಬಂಡಾಯಗಾರರು ವಕೀಲರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಿತ್ರ ಪಕ್ಷ ಎನ್‌ಸಿಪಿಗೆ ಸೇರಿರುವ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರು ಕಳೆದ ವಾರ ಏಕನಾಥ್ ಶಿಂಧೆ ಮತ್ತು ಇತರ 15 ಬಂಡಾಯ ಶಾಸಕರಿಗೆ ಅನರ್ಹತೆ ನೋಟಿಸ್ ನೀಡಿದ್ದರು.

ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಬಾಕಿ ಉಳಿದಿರುವ ಸಮಸ್ಯೆಗಳು ಇತ್ಯರ್ಥವಾಗುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ಪ್ರತಿಪಾದಿಸಿದ್ದರು. ಆದರೆ, ಅನಗತ್ಯ ತೊಡಕುಗಳನ್ನು ಉಂಟುಮಾಡುವ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್, “ಯಾವುದಾದರೂ ಅಕ್ರಮ ನಡೆದರೆ, ನೀವು ಯಾವಾಗಲಾದರೂ ನ್ಯಾಯಾಲಯಕ್ಕೆ ಹೋಗಬಹುದು” ಎಂದಿತ್ತು.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಬಣ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಇನ್ನೊಂದು ಬಣ ಯಾವುದೇ ಒಪ್ಪಂದಕ್ಕೆ ಬರಲು ನಿರಾಕರಿಸಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಈ ವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲು ರಾಜ್ಯ ಸರ್ಕಾರವನ್ನು ಕೇಳಬಹುದು ಎಂದು ಮೂಲಗಳು ತಿಳಿಸಿವೆ.

ಬಂಡಾಯ ಶಾಸಕರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಪ್ರಸ್ತುತ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಜುಲೈ 5 ರವರೆಗೆ ಹೋಟೆಲ್‌ನಲ್ಲಿ ತಮ್ಮ ವಾಸ್ತವ್ಯವನ್ನು ವಿಸ್ತರಿಸಬಹುದು. ಶಿಂಧೆ ಅವರು ಸುಮಾರು 50 ಶಾಸಕರ ಬೆಂಬಲವನ್ನು ಹೊಂದಿದ್ದು, ಅದರಲ್ಲಿ ಶಿವಸೇನೆಯ 40 ಶಾಸಕರಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನು, ಮುಂಬೈನಲ್ಲಿರುವ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಹಲವು ಬಿಜೆಪಿ ನಾಯಕರು ಬಂಡಾಯ ಶಿಂಧೆ ಬಣದೊಂದಿಗೆ ಸರ್ಕಾರ ರಚಿಸಲು ಚಿಂತನ ಮಂಥನ ನಡೆಸಿದ್ದಾರೆ. ಏಕನಾಥ್ ಶಿಂಧೆ ಅವರ ಸರ್ಕಾರ ರಚನೆಯ ಪ್ರಸ್ತಾಪಕ್ಕೆ ನಾವು ಮುಕ್ತರಾಗಿದ್ದೇವೆ ಎಂದು ಪಕ್ಷದ ನಾಯಕ ಸುಧೀರ್ ಮುಂಗಂಟಿವಾ ಹೇಳಿದ್ದಾರೆ.

ಅನರ್ಹತೆ ನೋಟಿಸ್‌ನ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸಲ್ಲಿಸಿರುವ ಮನವಿಯ ಮೇರೆಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್, ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಇದನ್ನು “ಬಾಳಾಸಾಹೇಬರ ಹಿಂದುತ್ವದ ವಿಜಯ” ಎಂದು ಬಣ್ಣಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಸ್ವಲ್ಪ ಸಮಯದ ನಂತರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಅವರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...