Homeಮುಖಪುಟಮಹಾರಾಷ್ಟ್ರ: ಗುವಾಹಟಿಯಿಂದ ಮುಂಬೈಗೆ ತೆರಳಲಿರುವ ಬಂಡಾಯ ನಾಯಕ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಗುವಾಹಟಿಯಿಂದ ಮುಂಬೈಗೆ ತೆರಳಲಿರುವ ಬಂಡಾಯ ನಾಯಕ ಏಕನಾಥ್‌ ಶಿಂಧೆ

ಬಂಡಾಯ ಶಾಸಕರಿಗೆ ಪತ್ರ ಬರೆದಿರುವ ಉದ್ಧವ್ ಠಾಕ್ರೆ, ಮುಂಬೈಗೆ ಬಂದು ತನ್ನೊಂದಿಗೆ ಮಾತನಾಡುವಂತೆ ಮನವಿ ಮಾಡಿದ್ದಾರೆ.

- Advertisement -
- Advertisement -

ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ “ಶೀಘ್ರದಲ್ಲೇ ಮುಂಬೈಗೆ ತೆರಳಿ ಬಾಳಾಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯುತ್ತೇನೆ” ಎಂದು ಮಂಗಳವಾರ ಹೇಳಿದ್ದಾರೆ.

“ಗುವಾಹಟಿಯಲ್ಲಿ ನನ್ನೊಂದಿಗೆ 50 ಜನರಿದ್ದಾರೆ, ಅವರು ತಮ್ಮ ಸ್ವಂತ ಇಚ್ಛೆಯಿಂದ ಮತ್ತು ಹಿಂದುತ್ವಕ್ಕಾಗಿ ನನ್ನೊಂದಿಗೆ ಬಂದಿದ್ದಾರೆ. ನಾವೆಲ್ಲರೂ ಶೀಘ್ರದಲ್ಲೇ ಮುಂಬೈಗೆ ಹೋಗುತ್ತೇವೆ” ಎಂದು ಏಕನಾಥ್ ಶಿಂಧೆ ಗುವಾಹಟಿಯ ಐಷಾರಾಮಿ ಹೋಟೆಲ್‌ನಿಂದ ಹೊರಬಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂಬೈಗೆ ಬಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರೊಂದಿಗೂ ಮಾತನಾಡುವುದಾಗಿ ಹೇಳಿದ್ದಾರೆ. ಈ ವೇಳೆ ಇತರ ಬಂಡಾಯ ಶಾಸಕರು ಉಪಸ್ಥಿತರಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ವರದಿಗಳು ಸೂಚಿಸುವಂತೆ, ಬಿಜೆಪಿಯೊಂದಿಗಿನ ಸಮಾಲೋಚನೆಗಾಗಿ ಏಕನಾಥ್‌ ಶಿಂಧೆ ಇಂದು ಸಂಜೆ ಮುಂಬೈ ಅಥವಾ ದೆಹಲಿಗೆ ಹೋಗಬಹುದು ಎನ್ನಲಾಗಿದೆ. ಇತ್ತ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ದೇವೇಂದ್ರ ಫಡ್ನವೀಸ್ ದೆಹಲಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ನಾನು ಶಿವಸೇನೆಯನ್ನು ಬಿಡುತ್ತಿಲ್ಲ. ನಾನೇ ನಿಜವಾದ ಶಿವಸೇನೆ” ಎಂದು ಏಕನಾಥ್‌ ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಸುಮಾರು 15 ರಿಂದ 20 ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಮುಂಬೈಗೆ ಮರಳಲು ಬಯಸುತ್ತಾರೆ ಎಂಬ ಉದ್ಧವ್ ಠಾಕ್ರೆ ಬೆಂಬಲಿಗರ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ.

ಇತ್ತ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಿವಸೇನೆಯ ಬಂಡಾಯ ಶಾಸಕರಿಗೆ ಪತ್ರ ಬರೆದು, ತಮ್ಮೊಂದಿಗೆ ಖುದ್ದಾಗಿ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ನಾನು ನಿಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಇನ್ನೂ ಸಮಯವಿದೆ. ದಯವಿಟ್ಟು ಬನ್ನಿ. ನನ್ನೊಂದಿಗೆ ಕುಳಿತುಕೊಳ್ಳಿ, ಶಿವಸೈನಿಕರು ಮತ್ತು ಸಾರ್ವಜನಿಕರ ಮನಸ್ಸಿನಲ್ಲಿರುವ ಎಲ್ಲಾ ಅನುಮಾನಗಳನ್ನು ತೆಗೆದುಹಾಕಿ. ನೀವು ಕೆಲವು ದಿನಗಳಿಂದ ಗುವಾಹಟಿಯಲ್ಲಿ ಸಿಕ್ಕಿಬಿದ್ದಿದ್ದೀರಿ, ನಾನು ನಿಮ್ಮ ಬಗ್ಗೆ ವಿವರಗಳನ್ನು ಪಡೆಯುತ್ತಿದ್ದೇನೆ. ನಿಮ್ಮಲ್ಲಿ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ನೀವು ಹೃದಯಪೂರ್ವಕವಾಗಿ ಶಿವಸೇನೆಯವರು. ನಾವು ಮಾತನಾಡೋಣ, ಮಾತಾಡಿ ಒಂದು ದಾರಿ ಹುಡುಕಿಕೊಳ್ಳೋಣ” ಎಂದು ಪತ್ರದಲ್ಲಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ವಿಶ್ವಾಸಮತ ಯಾಚನೆ ನಡೆಸಲು ವಕೀಲರನ್ನು ಸಂಪರ್ಕಿಸುತ್ತಿರುವ ಬಂಡಾಯ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...