Homeಮುಖಪುಟಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಆಪರೇಷನ್ ಕಮಲದ ಆತಂಕ ಶುರುವಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈ ದಿನ ಕಳೆಯುವುದರೊಳಗೆ ಎಲ್ಲವೂ ಬಗೆಹರಿಯಲಿದೆ ಎಂದು ಸಂಸದ ಸಂಜಯ್ ರಾವತ್‌ ಹೇಳುತ್ತಿದ್ದಾರೆ.

ಶಿವಸೇನಾ ನಾಯಕರು ಮೇಲ್ಮಾತಿಗೆ ಈ ರೀತಿ ಭರವಸೆ ನೀಡುತ್ತಿರುವಂತೆ ತೋರುತ್ತಿದೆ. ಏಕೆಂದರೆ 13 ಮಂದಿ ಶಾಸಕರು ಗುಜರಾತ್‌ನಲ್ಲಿದ್ದಾರೆ ಎನ್ನಲಾಗಿತ್ತು. ಆದರೆ, ಶಿವಸೇನೆಯ ಹಿರಿಯ ಸಚಿವ ಏಕನಾಥ್ ಶಿಂಧೆ ಸೂರತ್‌ಗೆ 21 ಶಾಸಕರನ್ನು ಕರೆದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಏಕನಾಥ್‌ ಶಿಂದೆ ಅವರು ಬಿಜೆಪಿ ಆಡಳಿತದ ಗುಜರಾತ್‌ನ ಸೂರತ್‌ನ ಹೋಟೆಲ್‌ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಹೊರ ಬಂದಿದೆ. ಜೊತೆಗೆ ಬಿಜೆಪಿಯು ಏಕನಾಥ್‌ ಶಿಂದೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಭರವಸೆ ನೀಡಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

“ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಬೀಳಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಶಿಂಧೆ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ, ಅವರು ನಮ್ಮೊಂದಿಗೆ ಹಲವಾರು ಬಾರಿ ಆಂದೋಲನಗಳಲ್ಲಿ ಭಾಗವಹಿಸಿದ್ದಾರೆ. ಅವರು ಬಾಳಾ ಸಾಹೇಬ್ ಅವರ ಸೈನಿಕ (ನಿಷ್ಠಾವಂತ)” ಎಂದು ಶಿವಸೇನೆಯ ಸಂಜಯ್ ರಾವುತ್ ಹೇಳಿದ್ದಾರೆ. ಜೊತೆಗೆ ಏಕನಾಥ್ ಶಿಂಧೆ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉದ್ಧವ್ ಠಾಕ್ರೆ ಅವರ ಸರ್ಕಾರ ಮಹಾ ವಿಕಾಸ್ ಅಘಾಡಿಯಲ್ಲಿ ಅವರ ಸ್ವಂತ ಪಕ್ಷ ಶಿವಸೇನೆ, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಕಾಂಗ್ರೆಸ್ ಸೇರಿವೆ. ಕಳೆದ ಸಂಜೆ, ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ, ಶಿವಸೇನೆ ಮತ್ತು ಕಾಂಗ್ರೆಸ್ ಸದಸ್ಯರು ಅಡ್ಡ ಮತದಾನ ಮಾಡಿದ್ದರಿಂದ ಬಿಜೆಪಿಯು 10 ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಗೆಲ್ಲುವಂತೆ ಮಾಡಿದೆ. ಈ ಅಡ್ಡ ಮತದಾನದ ಬಗ್ಗೆ ಇಂದು ಉದ್ಧವ್ ಠಾಕ್ರೆ ತುರ್ತು ಸಭೆ ಕರೆದಿದ್ದಾರೆ.

ಸಚಿವ ಏಕನಾಥ್‌ ಶಿಂಧೆ ನಿನ್ನೆ ತಡರಾತ್ರಿ ಗುಜರಾತ್‌ಗೆ ತೆರಳಿದ್ದಾರೆ. ಇತ್ತ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಯಲ್ಲಿದ್ದಾರೆ. ಅಡ್ಡ ಮತದಾನದಿಂದಾದ ಸೋಲಿನ ನಂತರ ಕಾಂಗ್ರೆಸ್ ತನ್ನ ಶಾಸಕರನ್ನು ದೆಹಲಿಗೆ ಕರೆಸಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...