Homeಮುಖಪುಟಶಿವಸೇನೆಯ 15 ಬಂಡಾಯ ಶಾಸಕರಿಗೆ ವೈ-ಪ್ಲಸ್ ಭದ್ರತೆ ನೀಡಿದ ಕೇಂದ್ರ ಸರ್ಕಾರ

ಶಿವಸೇನೆಯ 15 ಬಂಡಾಯ ಶಾಸಕರಿಗೆ ವೈ-ಪ್ಲಸ್ ಭದ್ರತೆ ನೀಡಿದ ಕೇಂದ್ರ ಸರ್ಕಾರ

- Advertisement -
- Advertisement -

ಒಕ್ಕೂಟ ಸರ್ಕಾರವು ಕನಿಷ್ಠ 15 ಬಂಡಾಯ ಶಿವಸೇನೆ ಶಾಸಕರಿಗೆ ಭಾನುವಾರದಿಂದ ಸಿಆರ್‌ಪಿಎಫ್ ಕಮಾಂಡೋಗಳ ವೈ-ಪ್ಲಸ್ ಭದ್ರತೆಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಮೇಶ್ ಬೋರ್ನಾರೆ, ಮಂಗೇಶ್ ಕುಡಾಲ್ಕರ್, ಸಂಜಯ್ ಶಿರ್ಸತ್, ಲತಾಬಾಯಿ ಸೋನಾವಣೆ, ಪ್ರಕಾಶ್ ಸುರ್ವೆ, ಸದಾನಂದ್ ಸರಣಾವಂಕರ್, ಯೋಗೇಶ್ ದಾದಾ ಕದಂ, ಪ್ರತಾಪ್ ಸರ್ನಾಯಕ್, ಯಾಮಿನಿ ಜಾಧವ್, ಪ್ರದೀಪ್ ಜೈಸ್ವಾಲ್, ಸಂಜಯ್ ರಾಥೋಡ್, ದಾದಾಜಿ ಭೂಸೆ, ದಿಲೀಪ್ ಲಾಂಡೆ, ಬಾಲಾಜಿ ಕಲ್ಯಾಣರ್, ಸಂದೀಪನ್ ಭೂಮಾರೆ ಅವರಿಗೆ ಭದ್ರತೆ ಒದಗಿಸಲಾಗಿದೆ.

ಜೊತೆಗೆ ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಅವರ ಕುಟುಂಬಗಳಿಗೂ ಭದ್ರತೆಯನ್ನು ಈ ರಕ್ಷಣಾ ತಂಡಗಳು ನೀಡಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಸನ್ನಿವೇಶದಿಂದಾಗಿ ಬಂಡಾಯ ಶಾಸಕರು ಮತ್ತು ಅವರ ಕುಟುಂಬಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ ಕೇಂದ್ರ ಭದ್ರತಾ ಏಜೆನ್ಸಿಗಳು ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡುದ್ದವು. ಇದರ ಮೇರೆಗೆ ಶಾಸಕರಿಗೆ ಭದ್ರತೆಯನ್ನು ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು ನಾಲ್ಕರಿಂದ ಐದು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಕಮಾಂಡೋಗಳು, ಪಾಳಿಯಲ್ಲಿ, ಬಂಡಾಯ ಶಾಸಕರು ಮಹಾರಾಷ್ಟ್ರಕ್ಕೆ ಬಂದ ನಂತರ ಅವರಿಗೆ ರಕ್ಷಣೆ ನೀಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ‘ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?’: ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾಜಪದ ಗಂಜಿ ಗಿರಾಕಿಗಳಿಗೆ ಭದ್ರತೆ ಕೊಡಲೇಬೇಕಲ್ವಾ… ಅದರಲ್ಲೇನು‌ ವಿಶೇಷ ?

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...