Homeಮುಖಪುಟಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

- Advertisement -
- Advertisement -

ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಸರ್ಕಾರ ರಚನೆಯಾಗಿ ಬಹಳ ಸಮಯದ ನಂತರ ಕೊನೆಗೂ ಶನಿವಾರ (ಡಿ.21) ಖಾತೆ ಹಂಚಿಕೆಯಾಗಿದೆ.

ಸಿಎಂ ಹುದ್ದೆ ಬಿಟ್ಟು ಕೊಟ್ಟಿದ್ದ ಏಕನಾಥ್ ಶಿಂದೆ ಅವರಿಗೆ ಇದೀಗ ಗೃಹ ಖಾತೆಯೂ ಕೈ ತಪ್ಪಿದ್ದು ನಿರಾಸೆಯಾಗಿದೆ. ಪ್ರಬಲ ಖಾತೆಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ಯಶಸ್ವಿಯಾಗಿದ್ದಾರೆ.

ಉಪಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂದೆ ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಇಲಾಖೆಯನ್ನು ಕೊಟ್ಟು ಸಮಾಧಾನ ಮಾಡಲಾಗಿದೆ. ಮತ್ತೊಬ್ಬರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಯೋಜನೆ ಮತ್ತು ಅಬಕಾರಿ ಖಾತೆ ನೀಡಲಾಗಿದೆ.

ಸಿಎಂ ದೇವೇಂದ್ರ ಫಡ್ನವಿಸ್ ಅವರು ಗೃಹ ಖಾತೆಯ ಜೊತೆಗೆ ಇಂಧನ (ನವೀಕರಿಸಬಹುದಾದ ಇಂಧನ ಹೊರತುಪಡಿಸಿ), ಕಾನೂನು ಮತ್ತು ನ್ಯಾಯಾಂಗ, ಸಾಮಾನ್ಯ ಆಡಳಿತ, ಮಾಹಿತಿ ಮತ್ತು ಪ್ರಚಾರ ಮತ್ತು ಇತರ ಯಾವುದೇ ಸಚಿವರಿಗೆ ಹಂಚಿಕೆಯಾಗದ ಖಾತೆಗಳನ್ನೂ ನೋಡಿಕೊಳ್ಳಲಿದ್ದಾರೆ.

ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಪ್ರಮುಖ ಖಾತೆಗಳಲ್ಲಿ ಒಂದಾದ ಕಂದಾಯ ಪಡೆದುಕೊಂಡಿದ್ದಾರೆ. ಕಳೆದ ಮಹಾಯುತಿ ಸರ್ಕಾರದಲ್ಲಿ ಕಂದಾಯ ಇಲಾಖೆಯನ್ನು ನಿಭಾಯಿಸಿದ್ದ ಪ್ರಭಾವಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಈ ಬಾರಿ ಜಲಸಂಪನ್ಮೂಲ (ಗೋದಾವರಿ, ಕೃಷ್ಣಾ ಕಣಿವೆ ಇಲಾಖೆ) ನೀಡಲಾಗಿದೆ. ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಸಿಎಂ ಫಡ್ನವಿಸ್‌ ಅವರಿಗೆ ಆಪ್ತರಾಗಿರುವ ಬಿಜೆಪಿಯ ಗಿರೀಶ್ ಮಹಾಜನ್ ಅವರಿಗೆ ಜಲಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಖಾತೆಗಳನ್ನು ಕೊಡಲಾಗಿದೆ. ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ ಗಣೇಶ್ ನಾಯಕ್ ಅವರಿಗೆ ಅರಣ್ಯ ಖಾತೆ ನೀಡಲಾಗಿದೆ. ಶಿವಸೇನೆಯ ಗುಲಾಬ್ರಾವ್ ಪಾಟೀಲ್ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ ಖಾತೆ ಮತ್ತು ಶಿವಸೇನೆಯ ಮತ್ತೊಬ್ಬ ಶಾಸಕ ದಾದಾಜಿ ಭೂಸೆ ಅವರಿಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ.

ಶಿವಸೇನೆಯ ಉದಯ್ ಸಾಮಂತ್ ಮೂರನೇ ಬಾರಿಗೆ ಕೈಗಾರಿಕೆ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂದೆ ಸರ್ಕಾರಗಳಲ್ಲಿ ಖಾತೆಯನ್ನೇ ಹೊಂದಿದ್ದರು.

ಬಿಜೆಪಿಯ ಪಂಕಜಾ ಮುಂಡೆ ಪರಿಸರ, ಹವಾಮಾನ ಬದಲಾವಣೆ ಮತ್ತು ಪಶುಸಂಗೋಪನೆ ಖಾತೆಗಳನ್ನು ಪಡೆದರೆ, ಅವರ ಸೋದರ ಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ಅವರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ರಕ್ಷಣೆ ಖಾತೆಗಳು ದೊರೆತಿವೆ.

ಎನ್‌ಸಿಪಿಯ ಹಸನ್ ಮುಶ್ರಿಫ್ ಅವರು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಪಕ್ಷದ ಇನ್ನೊಬ್ಬ ಶಾಸಕ ಮಾಣಿಕ್ರಾವ್ ಕೊಕಾಟೆಗೆ ಕೃಷಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಪಶ್ಚಿಮ ಘಟ್ಟದಲ್ಲಿ 58.22 ಚದರ ಕಿ.ಮೀ ಅರಣ್ಯ ನಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...