Homeಮುಖಪುಟಮಹಾರಾಷ್ಟ್ರ: ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಅಮಾನತುಗೊಂಡ ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್

ಮಹಾರಾಷ್ಟ್ರ: ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಅಮಾನತುಗೊಂಡ ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್

- Advertisement -
- Advertisement -

ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ.

ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಟಿ ರಾಜಾ ಸಿಂಗ್ ವಿರುದ್ಧ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಮಪುರ ನಗರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 10ರಂದು ನಡೆದ ಕಾರ್ಯಕ್ರಮದಲ್ಲಿ, ಸಿಂಗ್ ಅವರು ಮುಸ್ಲಿಮರ ಬಗ್ಗೆ ಅವಹೇಳನಕಾರಿ ಉಲ್ಲೇಖಗಳನ್ನು ಮಾಡಿದ್ದರು ಮತ್ತು 2026ರ ವೇಳೆಗೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲಾಗುವುದು ಎಂದು ಹೇಳಿದ್ದರು. ಅವರ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವಿಡೀಯೋದಲ್ಲಿ “ಹಿಂದೂಗಳ ವಿರುದ್ಧ ಯಾರೇ ಮಾತನಾಡಿದರೂ ನಾವು ಅವರನ್ನು ಬಿಡುವುದಿಲ್ಲ. ನಮ್ಮ ಹಿಂದೂ ರಾಷ್ಟ್ರದಲ್ಲಿ ನೀವು ದಿನಕ್ಕೆ ಐದು ಬಾರಿ ನಮಾಜ್ [ಮುಸ್ಲಿಂ ಪ್ರಾರ್ಥನೆಗಳ ಉಲ್ಲೇಖ] ಮಾಡುವುದಕ್ಕೆ ಧ್ವನಿವರ್ಧಕವನ್ನು ಬಳಸಲು ಬಿಡುವುದಿಲ್ಲ” ಎಂದು ಸಿಂಗ್ ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ಕೋಮುವಾದಿ ಭಾಷಣ ಮಾಡಿದ ಇತಿಹಾಸ ಹೊಂದಿರುವ ಹೈದರಾಬಾದ್‌ನ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್ ಅವರು, ಮುಸ್ಲಿಮರನ್ನು ಥಳಿಸಲು ಬಯಸಿದರೆ ಬಜರಂಗದಳಕ್ಕೆ ಸೇರುವಂತೆ ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ.

T Raja Singh Said If Someone Wants To Beat Muslims Join Bajrang Dal Telangana BJP Suspended MLA | 'हिंदू राष्ट्र में नहीं मिलेगा लाउडस्पीकर', विधायक टी राजा सिंह के बिगड़े बोल, कहा-

ಹಿಂದೂಗಳ ವಿರುದ್ಧ ಮಾತನಾಡುವವರಿಗೆ ಅಥವಾ ಗೋಹತ್ಯೆ ಮಾಡುವವರಿಗೆ ನಾವು ಸಿದ್ಧರಿದ್ದೇವೆ ಎಂದು ರಾಜಾ ಸಿಂಗ್ ಮುಸ್ಲಿಮರ ವಿರುದ್ಧ ದ್ವೇ‍ಷ ಕಾರಿದ್ದಾರೆ.

ಕಳೆದ ವರ್ಷ ಹೈದರಾಬಾದ್‌ನಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಿಂಗ್ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು.

ಸಿಂಗ್ ಅವರು 101 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ, ಅವುಗಳಲ್ಲಿ 18 ಕೋಮು ಅಪರಾಧಗಳಿಗೆ ಸಂಬಂಧಿಸಿವೆ ಎಂದು ಹೈದರಾಬಾದ್ ಪೊಲೀಸರು ಹೇಳಿದ್ದರು.

ಮಂಗಳವಾರ, ಶ್ರೀರಾಮಪುರ ಪೊಲೀಸ್ ಠಾಣೆಯ ಪ್ರಭಾರಿ ಹರ್ಷವರ್ಧನ್ ಗವಾಲಿ ಅವರು ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...