Homeಮುಖಪುಟಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

- Advertisement -
- Advertisement -

16 ವರ್ಷದ ಬಾಲಕಿಯ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರವೆಸಗಿರುವ ಘೋರ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಂತ್ರಸ್ತ ಬಾಲಕಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲು ಪ್ರಯತ್ನಿಸಿದಾಗ ಪೊಲೀಸ್‌‌ ಕೂಡಾ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಇದೀಗ ಸಂತ್ರಸ್ತ ಬಾಲಕಿ ಎರಡು ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಬಾಲಕಿಯು ಈ ವಾರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅತ್ಯಾಚಾರ ಮತ್ತು ಕಿರುಕುಳ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಬೀಡ್‌ನ ಪೊಲೀಸ್ ವರಿಷ್ಠಾಧಿಕಾರಿ ರಾಜಾ ರಾಮಸಾಮಿ ಭಾನುವಾರ ತಿಳಿಸಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆ ವಿವರ

ಸಂತ್ರಸ್ತೆಯ ಕುಟುಂಬ ಕೂಲಿ ಕೆಲಸ ಮಾಡುತ್ತಿದ್ದು, ಆಕೆಯ ತಾಯಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತಾಯಿಯ ಮರಣದ ನಂತರ, ತಂದೆಯು ಮಗಳ ಮದುವೆಯನ್ನು ಮಾಡಿದ್ದರು. ಆದರೆ, ಪತಿ ಮತ್ತು ಅತ್ತೆ-ಮಾವಂದಿರು ಬಾಲಕಿಯನ್ನು ನಿರಂತರವಾಗಿ ಥಳಿಸುತ್ತಾ, ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರಾಜ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ನವೆಂಬರ್‌ 18 ವರೆಗೆ ‘ಭಾರಿ ಮಳೆ’: ಹವಾಮಾನ ಇಲಾಖೆ ಎಚ್ಚರಿಕೆ

ಪತಿಯ ಮನೆಯವರು ನೀಡಿರುವ ಕಿರುಕುಳದಿಂದ ಬೇಸತ್ತ ಬಾಲಕಿ ತಂದೆಯ ಬಳಿಗೆ ತೆರಳಿದ್ದರು. ಆದರೆ ತಂದೆ ಬಾಲಕಿಯನ್ನು ಮನೆಗೆ ಬಿಟ್ಟುಕೊಳ್ಳದೆ ಇದ್ದುದರಿಂದ ಅವರು ಬೀಡ್ ಜಿಲ್ಲೆಯ ಅಂಬೆಜೋಗೈ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದರು. ಈ ಸಮಯದಲ್ಲಿ ಅವರ ಮೇಲೆ ಲೈಂಗಿಕ ಶೋಷಣೆ ಪ್ರಾರಂಭವಾಗಿದೆ.

ಸಂತ್ರಸ್ತೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಲು ಅಂಬೆಜೋಗೈ ನಗರ ಪೊಲೀಸ್‌ ಠಾಣೆಗೆ ತೆರಳಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್‌‌ ತನ್ನನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಮಕ್ಕಳ ಕಲ್ಯಾಣ ಸಮಿತಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂತಿಮವಾಗಿ ಈ ವಾರ ಪೊಲೀಸರು ದೂರು ಪಡೆದು, ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಇದೀಗ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

0
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದೇಶದ 107...